ಕಲಬುರಗಿ: ದೇಶದಲ್ಲಿ ಅತ್ಯಾಚಾರ ವೆಸಗಿ ಕೊಲೆ ನಡೆಸಿರುವ ಪ್ರಕರಣಗಳು ಹೆಚ್ಚುತ್ತಿದ್ದು ನ್ಯಾಯಾಲಯದಲ್ಲಿ ಇಂತಹ ಪ್ರಕರಣಗಳನ್ನು ಶೀಘ್ರದಲ್ಲಿ ವಿಚಾರಣೆ ನಡೆಸಿ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಗುರುಪಡಿಸಬೇಕೆಂದು ವೂಮೆನ್ ಇಂಡಿಯಾ ಮೂಮೆಂಟ್ ಸಂಘಟನೆಯ ಜಿಲ್ಲಾ ಅಧ್ಯಕ್ಷೆರಾದ ಸೈಯದಾ ರೀಹಾನಾ ಅವರು ಆಗ್ರಹಿಸಿದ್ದಾರೆ.
ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಹೈದಾರಾಬಾದನ ಪ್ರಕರಣದ ನಂತರ ಸ್ವಂತ ಜಿಲ್ಲೆಯ ಚಿಂಚೋಳಿಯಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ವೆಸಗಿ ಬರ್ಬರವಾಗಿ ಹತ್ಯೆ ಮಾಡಿರುವ ಅಮಾನುಷ ಘಟನೆ ನಡೆದಿರುವುದು ಖಂಡನೀಯ ಇಂತಹ ನೀಚವಕೃತ್ಯ ವೆಸಗಿದ ಆರೋಪಿಗಳನ್ನು ಅತಿ ಶೀಘ್ರದಲ್ಲಿ ಶಿಕ್ಷೆಗೆ ಗುರಿಪಡಿಸಿ ಮೃತ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಅವರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘಟನೆ ಸದಸ್ಯರು ಸೇರಿದಂತೆ ಮುಂತಾದವರು ಇದ್ದರು.