ಕಲಬುರಗಿ: ಕಲಬುರಗಿಯಲ್ಲಿ ಬರುವ ಫೆಬ್ರವರಿ ತಿಂಗಳಿನಲ್ಲಿ ಜರುಗುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾದ್ಯಕ್ಷರನ್ನಾಗಿ ಕಲ್ಯಾಣ ಕರ್ನಾಟಕ ಭಾಗದ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡುವುದು ಬಿಟ್ಟು ಇಂದು ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಿರಿಯ ಸಾಹಿತಿ ಎಚ್.ಎಸ್.ವೆಂಕಟೇಶ ಮೂರ್ತಿಯವರನ್ನು ಸರ್ವಾದ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಕ್ಕೆ ತಮ್ಮ ವಿರೋಧವಿದೆ ಎಂದು ಜನಪರ ಹೋರಾಟಗಾರ ನಾಗಲಿಂಗಯ್ಯ ಮಠಪತಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯೊಂದನ್ನು ನೀಡಿರುವ ಅವರು ಕಲ್ಯಾಣ ಕರ್ನಾಟಕದ ನೆಲದಲ್ಲಿರುವ ಹಿರಿಯ ಸಾಹಿತಿಗಳು ಕಾರ್ಯಕಾರಿ ಸಮಿತಿಯ ಸದಸ್ಯರುಗಳ ಕಣ್ಣಿಗೆ ಕಾಣಲಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿರುವ ಅವರು ಎಲ್ಲಾ ಕ್ಷೇತ್ರಗಳಲ್ಲಿಯೂ ಈ ಭಾಗಕ್ಕೆ ಅನ್ಯಾಯವಾದಂತೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿಯೂ ಈ ರೀತಿಯ ಅನ್ಯಾಯ ಮಾಡುತ್ತಿರುವುದು ನಿಜಕ್ಕೂ ಖಂಡನೀಯವಾಗಿದ್ದು ಈ ನೆಲದ ಸಾಹಿತ್ಯ, ಜನಜೀವನ, ಬದುಕು, ಸಂಸ್ಕೃತಿ ಕನ್ನಡದ ಸ್ಥಿತಿಗತಿ ಗೊತ್ತಿರದ ವೆಂಕಟೇಶಮೂರ್ತಿ ಯವರನ್ನು ಆಯ್ಕೆ ಮಾಡುವ ಮೂಲಕ ಕಲ್ಯಾಣ ಕರ್ನಾಟಕದ ಸಾಹಿತಿಗಳಿಗೆ ಅಪಮಾನ ಮಾಡಿದ್ದಾರೆಂದು ಮಠಪತಿ ಕಿಡಿಕಾರಿದ್ದಾರೆ.
ಈಗಾಗಲೇ ಈ ಭಾಗದಲ್ಲಿ ಅತೀವೃಷ್ಟಿ ಮತ್ತು ಅನಾವೃಷ್ಟಿಯಿಂದ ಜನ ಸಂಕಷ್ಟದಲ್ಲಿರುವಾಗ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಸಮ್ಮೇಳನ ನಡೆಸುವ ಅಗತ್ಯತೆ ಇದೆಯೇ ಎಂದು ಪ್ರಶ್ನೆ ಮಾಡಿರುವ ಅವರು ರೈತರು, ಕೃಷಿ ಕೂಲಿಕಾರ್ಮಿಕರು ಹೊಟ್ಟೆ ತುಂಬಿಸಿಕೊಳ್ಳಲು ಗುಳೆ ಹೋಗುತ್ತಿದ್ದು ಇಂತಹ ಸನ್ನಿವೇಶದಲ್ಲಿ ವೈಭವದ ಜಾತ್ರೆ ನಡೆಸುವುದು ಸರಿಯಲ್ಲ. ಅದರಲ್ಲೂ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಈ ಸೀಮೆಗೆ ಅಪರಿಚಿತರನ್ನು ಸಮ್ಮೇಳನದ ಸರ್ವಾದ್ಯಕ್ಷರೆಂದು ಒಪ್ಪಿಕೊಂಡು ಉತ್ಸವ ಮಾಡಿದರೆ ಏನು ಪ್ರಯೋಜನವೆಂದು ಪ್ರಶ್ನಿಸಿರುವ ಅವರು ಕೂಡಲೇ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಮೊದಲು ಮಾಡಿಕೊಂಡು ಪದಾಧಿಕಾರಿಗಳು ವೆಂಕಟೇಶ ಮೂರ್ತಿಯವರ ಆಯ್ಕೆಯನ್ನು ಕೈಬಿಟ್ಟು ಕಲ್ಯಾಣ ನಾಡಿನ ಸಾಹಿತಿಗಳಿಗೆ ಸರ್ವಾದ್ಯಕ್ಷ ಸ್ಥಾನ ನೀಡಿ ಸಮ್ಮೇಳನವನ್ನು ಸಾರ್ಥಕತೆಗೊಳಿಸಬೇಕು. ಇಲ್ಲವಾದಲ್ಲಿ ಈ ನೆಲ ಪ್ರೀತಿಸುವ ಎಲ್ಲಾ ಮನಸ್ಸುಗಳು ಸಮ್ಮೇಳನವನ್ನು ಬಹಿಷ್ಕರಿಸಬೇಕಾಗುತ್ತದೆಂದು ಎಚ್ಚರಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…