ಕಲಬುರಗಿ: ಕಲಬುರಗಿ ತಾಲೂಕಿನ ಸಣ್ಣೂರ ತಾಂಡಾದ ನಿವಾಸಿ ಹಾಗೂ ಚಿತ್ತಾಪುರ ತಾಲೂಕಿನ ಮಾಡಬೂಳ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ತೇಜುರಾಯ ತಂದೆ ಖೀರು ರಾಠೋಡ ಅವರು ಕಾಣೆಯಾಗಿದ್ದು, ಪತ್ತೆಗೆ ಸಹಕರಿಸುವಂತೆ ಮಾಡಬೂಳ ಪೊಲೀಸ್ ಠಾಣೆಯ ಪಿ.ಎಸ್.ಐ ಅವರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕಳೆದ ಅಕ್ಟೋಬರ್ ೨೯ ರಂದು ಸಣ್ಣೂರ ತಾಂಡಾದಲ್ಲಿ ತೇಜುರಾಯ ತಂದೆ ಖೀರು ರಾಠೋಡ ಮತ್ತು ಅವರ ಕುಟುಂಬದವರ ಮೇಲೆ ತಾಂಡಾದ ಇತರೆ ನಿವಾಸಿಗಳು ಹಲ್ಲೆ ಮಾಡಿದ್ದಾರೆ. ಇದರಿಂದ ನೊಂದ ತೇಜುರಾಯ ತಂದೆ ಖೀರು ರಾಠೋಡ ಅವರು ಮನೆಗೂ ಬಾರದೆ ಹಾಗೂ ಠಾಣೆಗೂ ಹಾಜರಾಗದೆ ಕಾಣೆಯಾಗಿದ್ದಾರೆ ಎಂದು ಅವರ ಸಹೋದರ ದಿ.01-11-2019 ರಂದು ಮಾಡಬೂಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅದರಂತೆ ಪ್ರಕರಣ ದಾಖಲಾಗಿ ತನಿಖೆ ಪ್ರಗತಿಯಲ್ಲಿರುತ್ತದೆ.
ಕಾಣೆಯಾದ ವ್ಯಕ್ತಿಯ ವಿವರ: ೨೭ ವರ್ಷದ ತೇಜುರಾಯ ತಂದೆ ಖೀರು ರಾಠೋಡ ದುಂಡು ಮುಖ, ಸಾಧಾರಣ ಮೈಕಟ್ಟು ಹೊಂದಿದಾನೆ. ಕಪ್ಪು ಬಣ್ಣದಿಂದ ಕೂಡಿದ್ದು, ತಲೆ ಮೇಲೆ ಕರಿ ಕೂದಲು ಇವೆ. ಕನ್ನಡ, ಹಿಂದಿ, ಲಂಬಾಣಿ ಭಾಷೆಯಲ್ಲಿ ಮಾತನಾಡುತ್ತಾನೆ.
ಸದರಿ ವ್ಯಕ್ತಿಯ ಬಗ್ಗೆ ಯಾರಿಗಾದರು ಮಾಹಿತಿ ದೊರೆತಲ್ಲಿ ಮಾಡಬೂಳ ಪೊಲೀಸ್ ಠಾಣೆಯ ಪಿ.ಎಸ್.ಐ 9480803572 ಹಾಗೂ ಕಾಳಗಿ ವೃತ್ತದ ಸಿಪಿಐ-9480803542 ಸಂಪರ್ಕಿಸಲು ಕೋರಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…