ಬಿಸಿ ಬಿಸಿ ಸುದ್ದಿ

ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಕಲಬುರಗಿ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ೨೦೧೯-೨೦ನೇ ಸಾಲಿನಲ್ಲಿ ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾ ಕೀರ್ತನ ಮತ್ತು ಗಮಕ ಕಲಾಕ್ಷೇತ್ರಗಳಲ್ಲಿ ಅಭ್ಯಾಸ ಮಾಡುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಬನಶಂಕರಿ ವಿ.ಅಂಗಡಿ ತಿಳಿಸಿದ್ದಾರೆ.

ಅಭ್ಯರ್ಥಿಗಳ ವಯೋಮಿತಿ ೧೬ ರಿಂದ ೨೪ ವರ್ಷದೊಳಗಿರಬೇಕು. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ೧೦,೦೦೦ ರೂ.ಗಳ ಶಿಷ್ಯವೇತನ ನೀಡಲಾಗುತ್ತದೆ. ಅರ್ಜಿಯನ್ನು ಅಕಾಡೆಮಿಯ ಕಚೇರಿಯಿಂದ ಅಥವಾ ಅಕಾಡೆಮಿಯ www.karnatakasangeetanrityaacademy.com ವೆಬ್‌ಸೈಟ್‌ದಿಂದ ಅಥವಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಉಚಿತವಾಗಿ ಪಡೆದು ಭರ್ತಿ ಮಾಡಿ ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, ೨ನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು-೫೬೦೦೦೨ ವಿಳಾಸಕ್ಕೆ ೨೦೧೯ರ ಡಿಸೆಂಬರ್ ೨೦ ರೊಳಗಾಗಿ ಸಲ್ಲಿಸಬೇಕು. ಅವಧಿ ಮೀರಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಅಂಚೆ ಮೂಲಕ ಅರ್ಜಿ ಮತ್ತು ಪಠ್ಯಕ್ರಮ ಪಡೆಯಲಿಚ್ಛಿಸುವವರು ರೂ. ೧೦ ನ್ನು ಸ್ಟ್ಯಾಂಪ್ ಹಚ್ಚಿದ ಸ್ವವಿಳಾಸವುಳ್ಳ ಲಕೋಟೆಯನ್ನು ಮೇಲ್ಕಂಡ ಅಕಾಡೆಮಿಯ ವಿಳಾಸಕ್ಕೆ ಕಳುಹಿಸಿ ಪಡೆಯಬಹುದಾಗಿದೆ. ಅದೇ ರೀತಿ ಅಕಾಡೆಮಿಯಿಂದ ೨೦೧೯-೨೦ನೇ ಸಾಲಿನಲ್ಲಿ ಗುರುಶಿಷ್ಯ ಪರಂಪರೆಯಡಿ ಕಲಿಕೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ದಿನಾಂಕ: ೪-೧೧-೨೦೧೯ರ ಸರ್ವ ಸದಸ್ಯರ ಸಭೆ ತೀರ್ಮಾನದಂತೆ ಸದರಿ ಯೋಜನೆಯನ್ನು ಕೈಬಿಡಲಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago