ಸುರಪುರ: ಪ್ರತಿಯೊಬ್ಬ ಮನುಷ್ಯನಿಗೆ ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಶುದ್ಧ ಕುಡಿಯುವ ನೀರು ಮುಖ್ಯವಾದುದು,ಆದ್ದರಿಂದ ಗ್ರಾಮದಲ್ಲಿ ಶುದ್ಧಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗಿದೆ ಈ ಘಟಕದ ಸದೋಪಯೋಗವನ್ನು ಗ್ರಾಮಸ್ಥರು ಪಡೆದು ಕೊಳ್ಳಬೇಕು ಎಂದು ಶಾಸಕ ನರಸಿಂಹ ನಾಯಕ ( ರಾಜುಗೌಡ ) ಹೇಳಿದರು.
ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಈ ಭಾಗದ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಘಟಕಗಳಿಲ್ಲಾ ಅತಂಹ ಗ್ರಾಮಗಳನ್ನು ಪಟ್ಟಿಮಾಡಿ ಮುಂದಿನದಿನಗಳಲ್ಲಿ ಎಲ್ಲಾ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸುವ ಕೆಲಸವನ್ನು ಮಾಡಲಾಗುವುದು. ಗ್ರಾಮದ ಜನರ ಬಹುದಿನಗಳ ಬೇಡಿಕೆಯಂತೆ ಸಧ್ಯ ೫ ಲಕ್ಷ ವೆಚ್ಚದಲ್ಲಿ ಘಟಕ ಸ್ಥಾಪಿಸಲಾಗಿದೆ ಎಂದರು.
ತಾಲೂಕಿನ ಕರ್ನಾಳ ಚೌಡೇಶ್ವರಿಹಾಳ ಗ್ರಾಮಗಳನ್ನು ಸಂಪೂರ್ಣ ಏತ ನೀರಾವರಿಗೊಳಿಸಲು ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಮುಂಬರುವ ದಿನಗಳಲ್ಲಿ ಯೋಜನೆ ಕಾರ್ಯರೂಪಕ್ಕೆ ತರಲಾಗುವುದು ಹಾಗು ತಾಲೂಕನ್ನು ಸಂಪೂರ್ಣ ನೀರಾವರಿ ಕ್ಷೇತ್ರವನ್ನಾಗಿಸುವ ಗುರಿಹೊಂದಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಅಧ್ಯಕ್ಷ ರಾಜಾ ಹಣಮಪ್ಪ ನಾಯಕ (ತಾತಾ), ಜಿಪಂ ಸದಸ್ಯ ಮರಿಲಿಂಗಪ್ಪ ಕರ್ನಾಳ, ಎಪಿಎಂಸಿ ಸದಸ್ಯ ದುರ್ಗಪ್ಪ ಗೋಗಿಕೇರಾ, ಹಣಮಂತ ಸಾಸಗೇರಿ, ದೇವು ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಅನೇಕ ಜನ ಗ್ರಾಮಸ್ಥರಿದ್ದರು.