ಶಹಾಪುರ: ತಮ್ಮ ಜೀವನದುದ್ದಕ್ಕೂ ಅಸ್ಪೃಶ್ಯತೆ, ಜಾತಿ ಪದ್ಧತಿ, ಲಿಂಗಭೇದ, ಅಸಮಾನತೆ ವಿರುದ್ಧ ಹೋರಾಡಿ ಶೋಷಿತ ಸಮುದಾಯದ ಏಳ್ಗೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಬಾಬಾಸಾಹೇಬ್ ಅಂಬೇಡ್ಕರ್ ಅವರು ತಮ್ಮ ಭೌತಿಕ ಶರೀರವನ್ನು ತ್ಯಜಿಸಿ ಶೋಷಿತರಿಗೆ ಬೆಳಕಾದವರು ಅಂಬೇಡ್ಕರ್ ಅವರು ಎಂದು ದಲಿತ ಮುಖಂಡ ಶಿವು ಆಂದೋಲ ಹೇಳಿದರು.
ಶಹಾಪುರ ತಾಲ್ಲೂಕಿನ ಶಿರವಾಳ ಗ್ರಾಮದ ಅಂಬೇಡ್ಕರ್ ಮಹಾ ಪರಿನಿರ್ವಾಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಅವರನ್ನು ಓರ್ವ ಮಾರ್ಗದರ್ಶಿಯನ್ನಾಗಿ ಸ್ವೀಕರಿಸಿ,
ಅವರು ತೋರಿಸಿ ಕೊಟ್ಟ ಹಾದಿಯಲ್ಲಿ ಅವರ ಯೋಚನೆ ಮತ್ತು ದೂರದೃಷ್ಟಿಯನ್ನು ಅರ್ಥಮಾಡಿಕೊಂಡು ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ತತ್ವದಡಿ ಸಮಸಮಾಜವನ್ನು ನಿರ್ಮಿಸುವ ಸಂಕಲ್ಪ ಮಾಡೋಣ ಎಂದು ಸದಾಶಿವ ಗೋನಾಳ್ ತಿಳಿಸಿದರು
ಈ ಸಂದರ್ಭದಲ್ಲಿ ಬಲಭೀಮ ನಡಿವಿನಕೇರಿ, ಸಿದ್ದಪ್ಪ ಧಮ್ಮನ, ಮಹಾಂತೇಶ್ ನಡುವಿನಕೇರಿ, ಬಸವರಾಜ್ ಇ೦ಗಳಿಗಿ, ಅಮಲಪ್ಪ ನಡುವಿನಕೇರಿ, ಚಂದ್ರಪ್ಪ ಭಂಡಾರಿ, ಬಲಭೀಮ, ಸಿದ್ದಪ್ಪ, ಹಾಗೂ ಗ್ರಾಮದ ಹಿರಿಯ ಮುಖಂಡರು ಮತ್ತು ಅಂಬೇಡ್ಕರ್ ಅಭಿಮಾನಿಗಳು ಭಾಗವಹಿಸಿದ್ದರು ರವಿ ಭಂಡಾರಿ ನಿರೂಪಿಸಿ ವಂದಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…