ತಾಲ್ಲೂಕಿನಲ್ಲಿಯ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಒತ್ತಾಯ

0
82

ಸುರಪುರ: ತಾಲ್ಲೂಕಿನ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ,ಸರಕಾರ ಹಾಗು ಸ್ಥಳಿಯ ಆಡಳಿತ ನಿರ್ಲಕ್ಷ್ಯದಿಂದಾಗಿ ಜನತೆ ತೊಂದರೆ ಪಡುವಂತಾಗಿದೆ.ಆದ್ದರಿಂದ ಕೂಡಲೆ ಜನತೆಗೆ ಕುಡಿಯುವ ನೀರು ಒದಗಿಸುವಂತೆ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಮಾತನಾಡಿದರು.

ಸಂಘಟನೆಯಿಂದ ನಗರದ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸರಕಾರದ ವಿರುಧ್ಧ ಘೊಷಣೆಗಳನ್ನು ಕೂಗಿದರು.ಈ ಸಂದರ್ಭದಲ್ಲಿ ಮಾತನಾಡಿ ಜಿಲ್ಲಾ ಪಂಚಾಯತಿಯಿಂದ ಕುಡಿಯುವ ನೀರಿನ  ಕಾಮಗಾರಿಗಳಿಗೆ ಅನುಮೋದನೆ ದೊರೆತಿದ್ದು,ತಾಲ್ಲೂಕಿನಲ್ಲಿಯ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ.ಅಲ್ಲದೆ ತಾಲ್ಲೂಕಿನಲ್ಲಿ ಉದ್ಯೋಗ ಖಾತರಿ ಕೆಲಸಗಳು ನಡೆಯದೆ ಜನತೆ ಗುಳೆ ಹೋಗುತ್ತಿದ್ದಾರೆ.ಆದರೆ ಅಧಿಕಾರಿಗಳು ಅದಕ್ಕು ತಮಗು ಸಂಬಂಧವಿಲ್ಲದಂತಿದ್ದಾರೆ.ಆದ್ದರಿಂದ ಕೂಡಲೆ ಜಿಲ್ಲಾ ಪಂಚಾಯತಿ ಅಧಿಕಾರಿಗಳು ಕೆಲಸ ಮಾಡದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಜರುಗಿಸಬೇಕು ಮತ್ತು ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಹಾಗು ಉದ್ಯೋಗ ಖಾತ್ರಿ ಕಾಮಗಾರಿಗಳ ಆರಂಭಿಸುವಂತೆ ಆಗ್ರಹಿಸಿದರು.ನಂತರ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ತಹಸೀಲ್ದಾರ ಸುರೇಶ ಅಂಕಲಗಿ ಮೂಲಕ ಸಲ್ಲಿಸಿದರು.

Contact Your\'s Advertisement; 9902492681

ಪ್ರತಿಭಟನೆಯಲ್ಲಿ ಗೋಪಾಲ ಬಾಗಲಕೋಟೆ,ಮಾನಯ್ಯ ದೊರೆ,ಬಸವರಾಜ ಕವಡಿಮಟ್ಟಿ,ಕೃಷ್ಣಾ ದಿವಾಕರ,ಕೇಶಣ್ಣ ದೊರೆ,ದೇವಪ್ಪ ದೇವರಮನಿ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here