ಸುರಪುರ: ತಾಲ್ಲೂಕಿನ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ,ಸರಕಾರ ಹಾಗು ಸ್ಥಳಿಯ ಆಡಳಿತ ನಿರ್ಲಕ್ಷ್ಯದಿಂದಾಗಿ ಜನತೆ ತೊಂದರೆ ಪಡುವಂತಾಗಿದೆ.ಆದ್ದರಿಂದ ಕೂಡಲೆ ಜನತೆಗೆ ಕುಡಿಯುವ ನೀರು ಒದಗಿಸುವಂತೆ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಮಾತನಾಡಿದರು.
ಸಂಘಟನೆಯಿಂದ ನಗರದ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸರಕಾರದ ವಿರುಧ್ಧ ಘೊಷಣೆಗಳನ್ನು ಕೂಗಿದರು.ಈ ಸಂದರ್ಭದಲ್ಲಿ ಮಾತನಾಡಿ ಜಿಲ್ಲಾ ಪಂಚಾಯತಿಯಿಂದ ಕುಡಿಯುವ ನೀರಿನ ಕಾಮಗಾರಿಗಳಿಗೆ ಅನುಮೋದನೆ ದೊರೆತಿದ್ದು,ತಾಲ್ಲೂಕಿನಲ್ಲಿಯ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ.ಅಲ್ಲದೆ ತಾಲ್ಲೂಕಿನಲ್ಲಿ ಉದ್ಯೋಗ ಖಾತರಿ ಕೆಲಸಗಳು ನಡೆಯದೆ ಜನತೆ ಗುಳೆ ಹೋಗುತ್ತಿದ್ದಾರೆ.ಆದರೆ ಅಧಿಕಾರಿಗಳು ಅದಕ್ಕು ತಮಗು ಸಂಬಂಧವಿಲ್ಲದಂತಿದ್ದಾರೆ.ಆದ್ದರಿಂದ ಕೂಡಲೆ ಜಿಲ್ಲಾ ಪಂಚಾಯತಿ ಅಧಿಕಾರಿಗಳು ಕೆಲಸ ಮಾಡದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಜರುಗಿಸಬೇಕು ಮತ್ತು ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಹಾಗು ಉದ್ಯೋಗ ಖಾತ್ರಿ ಕಾಮಗಾರಿಗಳ ಆರಂಭಿಸುವಂತೆ ಆಗ್ರಹಿಸಿದರು.ನಂತರ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ತಹಸೀಲ್ದಾರ ಸುರೇಶ ಅಂಕಲಗಿ ಮೂಲಕ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಗೋಪಾಲ ಬಾಗಲಕೋಟೆ,ಮಾನಯ್ಯ ದೊರೆ,ಬಸವರಾಜ ಕವಡಿಮಟ್ಟಿ,ಕೃಷ್ಣಾ ದಿವಾಕರ,ಕೇಶಣ್ಣ ದೊರೆ,ದೇವಪ್ಪ ದೇವರಮನಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…