ಪ್ರಾದೇಶಿಕ ಆಯುಕ್ತ ಸುಬೋಧ ಯಾದವ್ ತಹಶೀಲ್ದಾರ ಹಾಗೂ ಸಹಾಯಕ ಆಯುಕ್ತರ ಕಚೇರಿಗಳಿಗೆ ಭೇಟಿ ನೀಡಿ ತಪಾಸಣೆ

0
52

ಕಲಬುರಗಿ: ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಸುಬೋಧ ಯಾದವ್ ಅವರು ಸೋಮವಾರ ಕಲಬುರಗಿ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಬಾಕಿಯಿರುವ ಕಡತ ಹಾಗೂ ವಿಷಯ ನಿರ್ವಾಹಕರ ಸಂಕಲನಗಳನ್ನು ತಪಾಸಣೆ ನಡೆಸಿ ಒಂದು ಮತ್ತು ಎರಡು ವರ್ಷಗಳಿಗೆ ಮೇಲ್ಪಟ್ಟು ಬಾಕಿಯಿರುವ ಕಡತಗಳನ್ನು ತುರ್ತಾಗಿ ವಿಲೆವಾರಿ ಮಾಡಬೇಕೆಂದು ಕಲಬುರಗಿ ತಹಸೀಲ್ದಾರರಿಗೆ ಸೂಚಿಸಿದರು.

ಸಾರ್ವಜನಿಕರು ವಿವಿಧ ರೀತಿಯ ಕೆಲಸಕ್ಕಾಗಿ ಕಚೇರಿಗೆ ಆಗಮಿಸಿ ಅರ್ಜಿ ಸಲ್ಲಿಸಿದಾಗ ನಿಗದಿತ ಅವಧಿಯೊಳಗೆ ಕ್ರಮವಹಿಸಬೇಕು. ಸಕಾಲದಡಿಯಲ್ಲಿ ಸ್ವೀಕೃತವಾಗುವ ಎಲ್ಲಾ ಅರ್ಜಿಗಳನ್ನು ತುರ್ತಾಗಿ ವಿಲೇವಾರಿಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

Contact Your\'s Advertisement; 9902492681

ನಂತರ ಪ್ರಾದೇಶಿಕ ಆಯುಕ್ತರು ಕಲಬುರಗಿ ಸಹಾಯಕ ಆಯುಕ್ತರ ಕಚೇರಿಗೆ ಭೇಟಿ ನೀಡಿ ಸಿಬ್ಬಂದಿಗಳು ಕಾರ್ಯನಿರ್ವಹಿಸುವ ವಿವಿಧ ಸಂಕಲನಗಳ ಮಾಹಿತಿ ಪಡೆದರು. ಸಹಾಯಕ ಆಯುಕ್ತರ ಕಚೇರಿಯಲ್ಲಿ ನಿಯೋಜನೆ ಮೇಲೆ ಕಾರ್ಯನಿರ್ವಹಿಸುವ ಗ್ರಾಮ ಲೆಕ್ಕಾಧಿಕಾರಿಗಳ ನಿಯೋಜನೆಯನ್ನು ತಕ್ಷಣವೇ ರದ್ದುಪಡಿಸಿ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವಂತೆ ಕ್ರಮವಹಿಸಬೇಕು.

ಕಚೇರಿಯಲ್ಲಿ ಬಾಕಿಯಿರುವ ನ್ಯಾಯಾಲಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೇಲಿಂದ ಮೇಲೆ ವಿಚಾರಣೆ ಕೈಗೊಂಡು ತ್ವರಿತವಾಗಿ ವಿಲೆವಾರಿಗೊಳಿಸಲು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶರತ ಬಿ. ಹಾಗೂ ಸಹಾಯಕ ಆಯುಕ್ತ ರಾಮಚಂದ್ರ ಗಡದೆ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here