ಕಲಬುರಗಿಯ 8 ವರ್ಷದ ಬಾಲಕಿಯ ಮೇಲೆನ ಅತ್ಯಾಚಾರ ಕೊಲೆ ಪ್ರಕರಣ ಖಂಡಿಸಿ HKSF ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ

0
60

ಮಾನವಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಯಾಕಪೂರ ಗ್ರಾಮದ 2 ನೇ ತರಗತಿಯ 8 ವರ್ಷದ  ವಿದ್ಯರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ವೆಸಗಿ ಬರ್ಬರವಾಗಿ ಕೊಲೆ ಮಾಡಿದ ಪ್ರಕರಣದ ಬಗ್ಗೆ ರಾಜ್ಯ ಸರಕಾರ ಗಮನ ಕೊಡದೆ ಕಣ್ಣು ಮುಚ್ಚಿ ಕೂತಿದೆ ಎಂದು ಆರೋಪಿಸಿ, ಅತ್ಯಾಚಾರ ವೆಸಗಿದ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಹೈದಾರಾಬಾದ್ ಕರ್ನಾಟಕ ವಿದ್ಯಾರ್ಥಿ ಒಕ್ಕೂಟ ಪ್ರತಿಭಟನೆ ನಡೆಸಿ ಆಗ್ರಹಿಸಿದರು.

ಮಾನವಿ ಪಟ್ಟಣದ ಬಸವ ವೃತ್ತ ದಿಂದ ತಹಸೀಲ್ದಾರ್ ಕಚೇರಿಯ ವರೆಗೆ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಾಥಾ ನಡೆಸುವ ಮೂಲಕ ತಹಾಶೀಲ್ದಾರ್ ಮುಖಾಂತರ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕ ಅಧ್ಯಕ್ಷರಾದ ವಿಜಯ ಮಾಚನೂರು ಮಾತನಾಡಿ ದೇಶದಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಣ್ಣು ಮಕ್ಕಳಿಗಾಗಿಯೇ ವಿಶೇಷ ಆಯೋಗ ಶೀಘ್ರವೇ ರಚಿಸಿ ಆರೋಪಿಗಳಿಗೆ ಗಲ್ಲಿಗೆ ಏರಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ವಿರುಪಾಕ್ಷಿ ಮಾಚನೂರು, ಜೀಶನ್ ಮಾನವಿ,ಬಸವಪ್ರಭು ಸೀಕಲ್, ಹುಸೇನಿ ಮಾನವಿ, ಜಗದೀಶ್ , ರವಿ ಸೀಕಲ್,ಹಾಗೂ ಮುಂತಾದ ಅನೇಕ ವಿದ್ಯಾರ್ಥಿಗಳು ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here