ಮಾನವಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಯಾಕಪೂರ ಗ್ರಾಮದ 2 ನೇ ತರಗತಿಯ 8 ವರ್ಷದ ವಿದ್ಯರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ವೆಸಗಿ ಬರ್ಬರವಾಗಿ ಕೊಲೆ ಮಾಡಿದ ಪ್ರಕರಣದ ಬಗ್ಗೆ ರಾಜ್ಯ ಸರಕಾರ ಗಮನ ಕೊಡದೆ ಕಣ್ಣು ಮುಚ್ಚಿ ಕೂತಿದೆ ಎಂದು ಆರೋಪಿಸಿ, ಅತ್ಯಾಚಾರ ವೆಸಗಿದ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಹೈದಾರಾಬಾದ್ ಕರ್ನಾಟಕ ವಿದ್ಯಾರ್ಥಿ ಒಕ್ಕೂಟ ಪ್ರತಿಭಟನೆ ನಡೆಸಿ ಆಗ್ರಹಿಸಿದರು.
ಮಾನವಿ ಪಟ್ಟಣದ ಬಸವ ವೃತ್ತ ದಿಂದ ತಹಸೀಲ್ದಾರ್ ಕಚೇರಿಯ ವರೆಗೆ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಾಥಾ ನಡೆಸುವ ಮೂಲಕ ತಹಾಶೀಲ್ದಾರ್ ಮುಖಾಂತರ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕ ಅಧ್ಯಕ್ಷರಾದ ವಿಜಯ ಮಾಚನೂರು ಮಾತನಾಡಿ ದೇಶದಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಣ್ಣು ಮಕ್ಕಳಿಗಾಗಿಯೇ ವಿಶೇಷ ಆಯೋಗ ಶೀಘ್ರವೇ ರಚಿಸಿ ಆರೋಪಿಗಳಿಗೆ ಗಲ್ಲಿಗೆ ಏರಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ವಿರುಪಾಕ್ಷಿ ಮಾಚನೂರು, ಜೀಶನ್ ಮಾನವಿ,ಬಸವಪ್ರಭು ಸೀಕಲ್, ಹುಸೇನಿ ಮಾನವಿ, ಜಗದೀಶ್ , ರವಿ ಸೀಕಲ್,ಹಾಗೂ ಮುಂತಾದ ಅನೇಕ ವಿದ್ಯಾರ್ಥಿಗಳು ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…