ಕಲಬುರಗಿ: ಸುಸ್ಥಿರ, ಹಾಗೂ ಸುಭದ್ರ ಸರ್ಕಾರಕ್ಕಾಗಿ ಮತ್ತು ರಾಜ್ಯದ ಸರ್ವಾಂಗಿಣ ಅಭಿವೃದ್ಧಿಗಾಗಿ ಈ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಅಭೂತಪೂರ್ವವಾಗಿ ಬೆಂಬಲಿಸಿ, ಗೆಲ್ಲಿಸಿದ ರಾಜ್ಯದ ಪ್ರಜ್ಞಾವಂತ ಮತದಾರರಿಗೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರೂ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಂಬಾರಾಯ ಅಷ್ಠಗಿ ಕೃತಜ್ಞತೆ ಹಾಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ರಾಜ್ಯದ ಸಮಗ್ರ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರ ಕೈ ಬಲಪಡಿಸಲು ಪಕ್ಷದ 12 ಅಭ್ಯರ್ಥಿಗಳ ಗೆಲುವು ಸಹಕಾರಿ ಯಾಗಲಿದ್ದೂ, ಈ ಉಪ ಚುನಾವಣೆಯ ಐತಿಹಾಸಿಕ ಗೆಲುವು ಬಿಜೆಪಿ ಸರ್ಕಾರಕ್ಕೆ ಆನೆಬಲ ತಂದಿದೆ.
ಬಿ ಎಸ್ ಯಡಿಯುರಪ್ಪನವರ ನೇತೃತ್ವದಲ್ಲಿ ರಾಜ್ಯ ಇನ್ಮುಂದೆ ಇನ್ನಷ್ಟು ಅಭಿವೃದ್ಧಿಯ ಪರ್ವ ಕಾಣಲಿದ್ದೂ,ನೆನೆಗೂದಿಗೆ ಬಿದ್ದಿರುವ ಯೋಜನೆಗಳಿಗೆ ಶರವೇಗ ಸಿಗಲಿ ಎಂಬುದು ರಾಜ್ಯದ ಜನರ ಹಾರೈಕೆಯಾಗಿದೆ. ಕೇಂದ್ರ ಸರ್ಕಾರದ ಅನುವಾದವನ್ನು ಸಮರ್ಥವಾಗಿ ಬಳಸಿಕೊಂಡು ರಾಜ್ಯ ಹಿಂದೆಂದೂ ಕಂಡಿರದ ಪ್ರಗತಿಯನ್ನು ಬಿ ಎಸ್ ಯಡಿಯುರಪ್ಪನವರ ಸರ್ಕಾರದಿಂದ ದೋರೆಯಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಉಪ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಹಗಲಿರುಳು ಶ್ರಮಿಸಿದ ನಮ್ಮ ಪಕ್ಷದ ರಾಜ್ಯ ಅಧ್ಯಕ್ಷರಾದ ಶ್ರೀ ನಳಿನ ಕುಮಾರ್ ಕಟೀಲ್ ಹಾಗೂ ಬಿ ವೈ ವಿಜಯೇಂದ್ರ ಸೇರಿದಂತೆ ರಾಜ್ಯದ ಪದಾಧಿಕಾರಿಗಳಿಗೆ, ವಿವಿಧ ಮೋರ್ಚಾಗಳ ಮುಖಂಡರಿಗೆ, ಕಾರ್ಯಕರ್ತರಿಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರು ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಅಂಬಾರಾಯ ಅಷ್ಠಗಿ ಯವರು ಅಭಿನಂದನೆ ಸಲ್ಲಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…