ಸುರಪುರ: ರಾಜ್ಯದಲ್ಲಿನ ಗ್ರಾಮೀಣ ಭಾಗದಲ್ಲಿ ಜಾನಪದ ಕಲೆ,ಸಾಹಿತ್ಯ ಮತ್ತು ಸಂಸ್ಕೃತಿಯ ಉಳಿವಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಕರ್ನಾಟಕ ರಾಜ್ಯ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ತಿಳಿಸಿದರು.
ಖಾಸಗಿ ಕಾರ್ಯಕ್ರಮದ ಅಂಗವಾಗಿ ನಗರ‍್ಕಕೆ ಆಗಮಿಸಿದ್ದ ಅಧ್ಯಕ್ಷರನ್ನು ಟೈಲರ್ ಮಂಜಿಲ್‌ನಲ್ಲಿ ಸಲ್ಲಿಸಲಾದ ಸನ್ಮಾನ ಸ್ವೀಕರಿಸಿ ಮಾತನಾಡಿ,ರಾಜ್ಯದಲ್ಲಿನ ಗ್ರಾಮೀಣ ಭಾಗದಲ್ಲಿನ ಜನಪದ ಸಾಹಿತಿಗಳು ಮತ್ತು ಕಲಾವಿದರನ್ನು ಗುರುತಿಸಿ ಅವರಿಗೆ ಮಾಶಾಸನ ಹಾಗು ಸರಕಾರದ ವಿವಿಧ ಸೌಲಭ್ಯಗಳನ್ನು ಒದಗಿಸುವ ಪ್ರಯತ್ನ ಮಾಡುವೆ.ಈಗಾಗಲೇ ಕಲಾವಿದರ ಸಮಸ್ಯೆಗಳ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಗಮನಕ್ಕೆ ತರಲಾಗಿದ್ದು,ಸಚಿವರುಕೂಡ ಸಕರಾತ್ಮಕವಾಗಿ ಸ್ಪಂಧಿಸಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಸವರಾಜ ಸಿನ್ನೂರ,ಜಾನಪದ ಕಲಾವಿದ ಮಹೇಶ ಪತ್ತಾರ್,ಸಮಾಜ ಸೇವಕ ದೇವಿಂದ್ರಪ್ಪ ಕನ್ಯಾಕೋಳೂರ,ಮುತ್ತಣ್ಣ ಹರೀಶ್ ಇತರರಿದ್ದರು.