ಬಿಸಿ ಬಿಸಿ ಸುದ್ದಿ

ಚಟುವಟಿಕೆ ಆಧಾರಿತ ಕಲಿಕೆಯಿಂದ ಆಸಕ್ತಿ: ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರಪ್ಪ ನೇರಡಗಿ

ಕಲಬುರಗಿ/ಆಳಂದ: ಚಟುವಟಿಕೆ ಆಧಾರಿತ ಕಲಿಕೆಯಿಂದ ಮಕ್ಕಳಲ್ಲಿ ಕಲಿಯುವ ಆಸಕ್ತಿ ಮೂಡುತ್ತದೆ ಇದು ಮಕ್ಕಳ ಸಮಗ್ರ ಪ್ರಗತಿಗೆ ಸಹಕಾರಿಯಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರಪ್ಪ ನೇರಡಗಿ ಅಭಿಪ್ರಾಯಪಟ್ಟರು.

ಸೋಮವಾರ ಆಳಂದ ತಾಲೂಕಿನ ಖಜೂರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ ಜ್ಞಾನ ವಿಜ್ಞಾನ ಸಮಿತಿ ಜಂಟಿಯಾಗಿ ಹಮ್ಮಿಕೊಂಡಿರುವ ಖಜೂರಿ ಕ್ಲಸ್ಟರ್ ಮಟ್ಟದ ಎರಡು ದಿನಗಳ ಮಕ್ಕಳ ವಿಜ್ಞಾನ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶೈಕ್ಷಣಿಕ ರಂಗದಲ್ಲಿ ವೈಜ್ಞಾನಿಕವಾಗಿ ರಚನಾತ್ಮಕ ಕಾರ್ಯಗಳು ಆಯೋಜಿಸುವುದರಿಂದ ಮಕ್ಕಳಲ್ಲಿ ತೀವ್ರತರವಾದ ಆಸಕ್ತಿ ಮೂಡುತ್ತದೆ ಜೊತೆಗೆ ವಿದ್ಯಾರ್ಥಿಗಳಲ್ಲಿ ಆಲೋಚನಾ ಸಾಮರ್ಥ್ಯ ವೃದ್ಧಿಯಾಗಿ ಸಂಶೋಧನಾ ಭಾವ ಹೆಚ್ಚಾಗುತ್ತದೆ ಹೀಗಾಗಿ ಇದು ಮುಂದೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲು ಸಹಾಯವಾಗುತ್ತದೆ ಎಂದು ನುಡಿದರು.

ಸಮುದಾಯಗಳ ಸಹಭಾಗಿತ್ವದೊಂದಿಗೆ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರನ್ನು ಸರ್ಕಾರದ ಭಾಗವಾಗಿ ಮಾಡುವುದು ಸರ್ಕಾರದ ಆಶಯವಾಗಿದೆ ಈ ನಿಟ್ಟಿನಲ್ಲಿ ಜರುಗಿರುವ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದರು. ಕ್ಷೇತ್ರ ಸಮನ್ವಯಾಧಿಕಾರಿ ರಾಜಶೇಖರ ಗೊಸಲ, ಪ್ರೌಢ ಶಾಲೆ ಮುಖ್ಯ ಗುರು ಶ್ರೀಮಂತ ಜಿಡ್ಡೆ, ಭಾರತ ಜ್ಞಾನ ವಿಜ್ಞಾನ ಸಮಿತಿಯ ಶ್ರೀಶೈಲ ಮಾಡ್ಯಾಳೆ, ಫಕ್ರುದ್ದೀನ್ ಮಾತನಾಡಿದರು. ಭಾರತ ಜ್ಞಾನ ವಿಜ್ಞಾನ ಸಮಿತಿಯ ರಾಜ್ಯ ಸಮಿತಿ ಸದಸ್ಯ ಪ್ರಭಾಕರ ಸಲಗರೆ, ಸಿಆರ್‌ಸಿ ವೆಂಕಟ ಚವ್ಹಾಣ, ಪ್ರೌಢ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಮರೇಪ್ಪ ಬಡಿಗೇರ, ವಿಷಯ ಪರೀವಿಕ್ಷಕ ಶೇಖ ರೌಫ್, ಫಕ್ರುದ್ದೀನ, ಮುಖ್ಯ ಗುರು ವಿಜಯಲಕ್ಷ್ಮೀ, ಕೋರಣೇಶ್ವರ ಗ್ಯಾಸ ಏಜೆನ್ಸಿಯ ವೈಜನಾಥ ವಾಡೆ ವೇದಿಕೆಯ ಮೇಲೆ ಇದ್ದರು.

ಕಾರ್ಯಕ್ರಮದ ಆರಂಭದಲ್ಲಿ ವಿಜ್ಞಾನ ಭಿತ್ತಿ ಪತ್ರಗಳನ್ನು ಹಿಡಿದು ಸ್ಥಳೀಯ ಜಾನಪದ ಕಲಾ ತಂಡಗಳೊಂದಿಗೆ ಗ್ರಾಮದಲ್ಲಿ ಆಕರ್ಷಕ ಮೆರವಣಿಗೆ ಮಾಡಲಾಯಿತು. ಖಜೂರಿ ಕ್ಲಸ್ಟರ್‌ನ ಬಬಲೇಶ್ವರ, ಜಮಗಾ (ಆರ್), ಬಂಗರಗಾ, ಖಂಡಾಳ, ಜವಳಗಾ, ಕೋತನ ಹಿಪ್ಪರ್ಗಾ, ರುದ್ರವಾಡಿ, ಖಜೂರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಶಿಕ್ಷಕರು, ಸಂಪನ್ಮೂಲ ವ್ಯಕ್ತಿಗಳು, ವಿದ್ಯಾರ್ಥಿಗಳು ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.
ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ವೆಂಕಟ ಚವ್ಹಾಣ ಸ್ವಾಗತಿಸಿದರೆ, ಯೋಗಿರಾಜ ಮಾಡ್ಯಾಳೆ ವಂದಿಸಿದರು. ಶಿಕ್ಷಕಿ ಇರ್ಷಾದ ಬೇಗಂ ನಿರೂಪಿಸಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

7 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

9 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

16 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

16 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

16 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago