ರೈತರ-ವ್ಯಾಪಾರಸ್ಥರ ಸಂಕಷ್ಟಕ್ಕೆ ಸ್ಪಂದಿಸಿ: ರಾಜಾಮದನಗೋಪಾಲನಾಯಕ

ಸುರಪುರ: ಲೇವಿದೇವಿಗಾರರು, ಬ್ಯಾಂಕ್‌ಗಳು ಸಕಾಲಕ್ಕೆ ಸಾಲಸೌಲಭ್ಯ ನೀಡದ ಕಾರಣ ರೈತರು, ಸಣ್ಣ ಪುಟ್ಟ ಬೀದಿ ಬದಿಯ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಇವರೆಲ್ಲರಿಗು ಸಕಾಲಕ್ಕೆ ಯೋಗ್ಯ ಬಡ್ಡಿ ಧರದಲ್ಲಿ ಸಾಲಭ್ಯ ಕಲ್ಪಿಸಲು ಶ್ರೀ ಕೃಷ್ಣ ಪಟ್ಟಣ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ಬ್ಯಾಂಕ್ ಮುಂದಾಗಬೇಕು ಎಂದು ಮಾಜಿ ಸಚಿವ ರಾಜಾಮದನ ಗೋಪಾಲ ನಾಯಕ ಹೇಳಿದರು.

ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶ್ರೀ ಕೃಷ್ಣ ಪಟ್ಟಣ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ಸಂಘ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬ್ಯಾಂಕ್‌ಗಳಿಂದ ಸಾಲ ಕೇಳಿದಾಗ ಆಗ ಕೊಡುತ್ತೇನೆ ಈಗ ಕೊಡುತ್ತೇನೆ ಎಂದು ಅಲೆದಾಡಿಸಿ ಬೇಡವಾದ ಸಮಯದಲ್ಲಿ ಸಾಲ ನೀಡುತ್ತಾರೆ. ಇದರು ಆಗಬಾರದು. ಅಗತ್ಯವಾಗಿದ್ದಾಗ ಸಾಲ ಕೇಳಿದಾಗ ಕೃಷ್ಣ ಸಹಕಾರ ಸಂಘ ಮಾಡಬೇಕು. ಷೇರುದಾರರು ಹಾಣ ತೊಡಗಿಸಿದ್ದು, ಉತ್ತಮ ಕಾರ್ಯ ನಿರ್ವಹಿಸಲು ನೆರವಾಗಬೇಕು ಎಂದರು.

ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಸಿದ್ರಾಮರೆಡ್ಡಿವಿ. ಪಾಟೀಲ ಮಾತನಾಡಿ, ಅರ್ಬನ್ ಬ್ಯಾಂಕ್ ಸೇರಿದಂತೆ ಸ್ಥಳೀಯ ಸಹಕಾರ ಸಂಘಗಳು ರೈತರಿಗೆ ಹಾಗೂ ವ್ಯಾಪಾರಸ್ಥರಿಗೆ ಸಾಲ ನೀಡುವಂತೆ ಕೃಷ್ಣ ಪತ್ತಿನ ಸಹಕಾರ ಸಂಘ ಸಹಕಾರ ನೀಡಬೇಕು. ಜನರಿಗೆ, ಗ್ರಾಹಕರು ಸಂಕಷ್ಟದಲ್ಲಿದ್ದಾಗ ಸಹಕಾರ ನೀಡುವಂತೆ ಸಹಕಾರ ಪತ್ತಿನ ಸಂಘವನ್ನು ಮುನ್ನಡೆಸಬೇಕು ಎಂದು ಕರೆ ನೀಡಿದರು. ಬಸವೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಡಾ. ಸುರೇಶ ಸಜ್ಜನ್ ಮಾತನಾಡಿ, ೫೦ ಲಕ್ಷ ರೂ. ಷೇರುಬಂಡವಾಳದೊಂದಿಗೆ ಆರಂಭಿಸಿರುವುದು ಶ್ಲಾಘನೀಯ. ಜನರ ಸಮಸ್ಯೆಗೆ ಸ್ಪಂದಿಸುತ್ತಾ ಸಹಕಾರ ಕ್ಷೇತ್ರದಲ್ಲಿ ಸಂಘ ಸಾಧನೆ ಮಾಡಲು ಸಾಧ್ಯ. ಗಿರಿನಾಡಲ್ಲಿ ಸಹಕಾರ ಸಂಘಗಳು ಸುಧಾರಣೆಯಾಗಬೇಕಿದೆ. ಡಿಸಿಸಿ ಬ್ಯಾಂಕ್‌ನ್ನು ಕಲಬುರಗಿ ಜಿಲ್ಲೆಯಿಂದ ಬೇರ್ಪಡಿಸಲು ಸಾಧ್ಯವಾಗಿಲ್ಲ. ಜಿಲ್ಲೆಯಲ್ಲಿ ಹಲವಾರು ಸಹಕಾರ ಸಂಘಗಳು ಸ್ಥಾಪನೆಗೊಳ್ಳಬೇಕಾದ ಅಗತ್ಯವಿದೆ. ಹೆಚ್ಚು ಹೆಚ್ಚು ಸಹಕಾರಿ ಸಂಘಗಳು ಆರಂಭವಾದರೆ ಡಿಸಿಸಿ ಬ್ಯಾಂಕ್‌ನ್ನು ಯಾದಗಿರಿ ಜಿಲ್ಲೆಯಲ್ಲಿ ಪ್ರಾರಂಭಿಸಲು ಸಾಧ್ಯವಾಗುತ್ತದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಷೇರುದಾರರು ಆದಾಗ ಮಾತ್ರ ಸಹಕಾರ ಸಂಘಕ್ಕೆ ಉತ್ತಮ ಭವಿಷ್ಯವಿರುತ್ತದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಅರ್ಬನ್ ಕ್ರೆಡಿಟ್ ಕೋ-ಆಪ್‌ಸೊಸೈಟಿ ಅಧ್ಯಕ್ಷ ರಾಜಾಮುಕುಂದನಾಯಕ ಮಾತನಾಡಿ, ಸಹಕಾರ ಸಂಘಗಳು ಜನರಪರವಾಗಿ ಇದ್ದು, ಉತ್ತಮವಾದ ಸೇವೆ ನೀಡಿದರೆ ನಗರದಲ್ಲಿ ಬೆಳವಣಿಗೆ ಹೊಂದಲು ಸಾಧ್ಯ. ಸಹಕಾರ ಸಂಘದ ಅಧಿಕಾರಿ ವರ್ಗ ಉತ್ತಮವಾಗಿ ಕಾರ್ಯ ನಿರ್ವಹಿಸಿಕೊಂಡು ಹೋಗಲಿ ಎಂದು ಆಶಿಸಿದರು.
ವರ್ತಕರ ಸಂಘದ ಅಧ್ಯಕ್ಷ ಕಿಶೋರಚಂದ್ ಜೈನ್ ಮಾತನಾಡಿ, ಈ ಭಾಗವೂ ನೀರಾವರಿಗೆ ಒಳಪಟ್ಟಿದ್ದು, ಸಹಕಾರ ಸಂಘದಿಂದ ರೈತರು-ವ್ಯಾಪಾರಸ್ಥರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಕೆನರಾ ಬ್ಯಾಂಕ್ ಅಧಿಕಾರಿ ತಿರುಪತಿ ಪೂಜಾರಿ ಮಾತನಾಡಿ, ಯಾವುದೇ ಸೊಸೈಟಿ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಹಿನ್ನೆಲೆಯಲ್ಲಿ ಅಭಿವೃದ್ಧಿ ಹೊಂದಬೇಕು. ಇಂದಿನ ಸೊಸೈಟಿಯೇ ನಾಳಿನ ಬ್ಯಾಂಕ್. ಹೀಗಾಗಿ ಸಹಕಾರ ಸಂಘಗಳನ್ನು ಬೆಳೆಸಬೇಕು ಎಂದು ತಿಳಿಸಿದರು.

ಇಂದು ಬೆಳಗ್ಗೆ ಶ್ರೀ ಕೃಷ್ಣ ಪಟ್ಟಣ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ಸಂಘವನ್ನು ತಿಂಥಣಿ ಸುಕ್ಷೇತ್ರ ವೀರಘಟ್ಟ ಶ್ರೀ ಅಡವಿಲಿಂಗ ಮಹಾರಾಜರು ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿದರು. ಬಸವರಾಜ ಬೂದಿಹಾಳ, ಬಸವರಾಜ ಹೂಗಾರ, ದತ್ತಾತ್ರೇಯ ಗುತ್ತೇದಾರ, ಭೀಮರಾವ ರಪುಗಾರ, ಚನ್ನಬಸವ ಬಾರಿ, ದೇವದಾನ ಡೀನ್, ಪಾರಪ್ಪ ಗುತ್ತೇದಾರ, ಸಂಗಮನಾಥ ಗುಳಗಿ ಇತರರು ಇದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420