ಕಲಬುರಗಿ: ಹಾವು ಕಡಿತಕ್ಕೆ ಒಳಗಾದ 8 ವರ್ಷದ ಬಾಲಕಿ ಓರ್ವಳು ಮೃತಪಟ್ಟಿರುವ ಘಟನೆ ತಾಲ್ಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ.
ಪಟ್ಟಣದ ಬಸವನಕಣಿ ಬಡಾವಣೆಯ ನಿವಾಸಿಯಾಗಿದ್ದ ಭಾರತಿ (8) ಮೃತ ದುರ್ದೈವಿ. ಬಹಿರ್ದೆಸೆಗೆ ಹೋದಾಗ ಹಾವು ಕಡಿದು ಬಾಲಕಿ ಅಸ್ವಸ್ಥಗೊಂಡಿದ್ದಳು, ತಕ್ಷಣ ವಾಡಿ ಸಮುದಾಯ ಆಸ್ಪತ್ರೆಗೆ ಕರೆದೊಯಲಾಗಿತ್ತು, ಆದರೆ ಸಕಾಲಕ್ಕೆ ವೈದ್ಯರು ಮತ್ತು ಔಷಧ ಸಿಗದ ಹಿನ್ನಲೆ ತಮ್ಮ ಮಗಳು ಸಾವನ್ನಪ್ಪಿದ್ದಾಳೆಂದು ಪೊಷಕರು ಆರೋಪಿಸಿದ್ದಾರೆ.
ವೈದ್ಯರ ಬೇಜವಬ್ದಾರಿ ಖಂಡಿಸಿ ಆಸ್ಪತ್ರೆ ಎದುರು ಬಾಲಕಿ ಶವವಿಟ್ಟು ಪ್ರತಿಭಟನೆ ಮಾಡಿ, ಕೆಲಹೊತ್ತು ಆಸ್ಪತ್ರೆ ಮುಂಭಾಗದ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಆಸ್ಪತ್ರೆ ವೈದ್ಯರ ವಿರುದ್ದ ಸೂಕ್ತ ಕ್ರಮಕ್ಕೆ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…