ಬಿಸಿ ಬಿಸಿ ಸುದ್ದಿ

ಮಾಜಿ ಶಾಸಕರ ಆರೋಪ ಸತ್ಯಕ್ಕೆ ದೂರ : ಶಾಸಕ ರಾಜುಗೌಡ

ಸುರಪುರ : ಕಳೆದ ತಿಂಗಳು ನಡೆದ ಕೊಡೇಕಲ್ ಘಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಸಹೋದರನ ಕುರಿತು ಮಾಜಿ ಶಾಸಕರು ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ. ಆತ ಎಲ್ಲಿಯೂ ಗಲಾಟೆ ಮಾಡಿಲ್ಲ ಮತ್ತು ಯಾರ ಮೇಲೆಯೂ ಹಲ್ಲೆ ನಡೆಸಿಲ್ಲ ಎಂದು ಶಾಸಕ ನರಸಿಂಹನಾಯಕ (ರಾಜುಗೌಡ) ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರನಿಂದ ದೂರವಾಣಿಯಲ್ಲಿ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ನಾನು ಮತ್ತು ನನ್ನ ಸಹೋದರ ಗಲಾಟೆ ಮಾಡುವ ಸಂಸ್ಕೃತಿ ಹೊಂದಿರುವುದಿಲ್ಲ. ಅದರ ಬದಲು ಬೈದು ಬುದ್ದಿ ಹೇಳುತ್ತೇವೆ. ಕ್ಷೇತ್ರದಲ್ಲಿ ಶಾಂತಿ ನೆಲಯೂರಬೇಕು. ಕಾನೂನು ಸುವ್ಯವಸ್ಥೆ ಪಾಲನೆಯಾಗಬೇಕು ಎಂಬುದೇ ನಮ್ಮ ಉದ್ದೇಶವಾಗಿರುತ್ತದೆ ಎಂದು ಹೇಳಿದರು.

ಅವರ ಸರಕಾರದ ಅವಧಿಯಲ್ಲೇ ಇದ್ದ ಪೊಲೀಸ್ ಅಧಿಕಾರಿಗಳು ತಾಲೂಕಿನಲ್ಲಿ ಇನ್ನೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಕರಣಗಳನ್ನು ಮುಚ್ಚಿ ಹಾಕಿಸುವ ಪ್ರಶ್ನೆಯೇ ಬರುವುದಿಲ್ಲ. ಯಾವುದೇ ಪ್ರಕರಣವಿರಲಿ ಮತ್ತು ಅವರು ಎಷ್ಟೇ ದೊಡ್ಡವರಾಗಿರಲಿ ಸತ್ಯಾಸತ್ಯತೆಯನ್ನು ಪೊಲೀಸ್ ಅಧಿಕಾರಿಗಳ ಹೊರತರಬೇಕು. ಯಾವುದೇ ಘಟನೆಗಳಿರಲಿ ಆ ಕುರಿತಂತೆ ಪೊಲೀಸ್ ಇಲಾಖೆ ತನಿಖೆ ಮಾಡುತ್ತದೆ ಮತ್ತು ಯಾರು ತಪ್ಪಿತಸ್ಥರಿದ್ದಾರೆ ಅವರ ಮೇಲೆ ಕ್ರಮ ಜರುಗಿಸಲಿ ಇದಕ್ಕೆ ನನ್ನ ಸಹಮತವಿದೆ ಎಂದು ತಿಳಿಸಿದರು.

ಕ್ಷೇತ್ರದಲ್ಲಿ ಒಂದು ವರ್ಷದಿಂದ ರಾಜಕೀಯ ವಿಷಯಕ್ಕೆ ಸಂಬಂಧಪಟ್ಟಂತೆ ಕೊಲೆ ಘಟನೆ ಪ್ರಕರಣಗಳು ಎಲ್ಲಿಯೂ ನಡೆದಿಲ್ಲ. ಇವುಗಳಿಗೆ ರಾಜಕೀಯ ಬಣ್ಣ ಕಲ್ಪಿಸುವುದು ಸರಿಯಲ್ಲ. ಕೆಲ ಘಟನೆಗಳು ನಡೆದಿದ್ದರು ಕೂಡ ಅವು ಕೌಟಂಬಿಕ ಮತ್ತು ವೈಯಕ್ತಿಕ ವಿಷಯಕ್ಕೆ ಸಂಬಂಧಪಟ್ಟವಾಗಿವೆ. ಈ ಕುರಿತು ಪೊಲೀಸ್ ಇಲಾಖೆ ತನಿಖೆ ಕೈಗೊಳ್ಳುತ್ತದೆ ಎಂದು ಶಾಸಕರು ಸ್ಪಷ್ಟಪಡಿಸಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

5 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

8 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

14 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

15 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

15 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago