ಅಸ್ಸಾಂ: ಪೌರತ್ವ ತಿದ್ದುಪಡಿ ಮಸೂದೆಗೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅನುಮೋದನೆ ದೊರೆತಿದ್ದು, ಮಸೂದೆ ವಿರೋಧಿಸಿ ಅಸ್ಸಾಂನಲ್ಲಿ ಉಗ್ರ ರೀತಿಯಲ್ಲಿ ಭಾರಿ ಪ್ರತಿಭಟನೆ ನಡೆಯುತ್ತಿದೆ.
ಈ ಹಿನ್ನೆಲೆಯಲ್ಲಿಣ ದಿಬ್ರುಗಢ ವಿಮಾನ ನಿಲ್ದಾಣಕ್ಕೆ ಹೋಗುವ ಹಾಗೂ ಬರುವ ಎಲ್ಲ ವಿಮಾನಗಳನ್ನು ಇಂದು ರದ್ದುಗೊಳಿಸಲಾಗಿದೆ ಎಂದು ಇಂಡಿಗೋ ವಿಮಾನಯಾನ ಸಂಸ್ಥೆ ಪ್ರಕಟಿಸಿದೆ. ಇನ್ನು, ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಿಂದ ಅಸ್ಸಾಂನ ದಿಬ್ರುಗಢ ವಿಮಾನ ನಿಲ್ದಾಣಕ್ಕೆ ಹೋಗುವ ಎಲ್ಲ ವಿಮಾನಗಳನ್ನು ಕೂಡ ಇಂದು ರದ್ದುಗೊಳಿಸಿರುವ ಬೆನ್ನಲೇ ರಣಜಿ ಟ್ರೋಫಿಯ ನಾಲ್ಕನೇ ದಿನದಾಟದ ಪಂದ್ಯಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಆಸ್ಸಾಂ ನಿವಾಸಿಗಳಿಗೆ ಪ್ರಧಾನಿ ಅಭಯ: ಪೌರತ್ವ ತಿದ್ದುಪಡಿ ಮಸೂದೆಯು ಸಂಸತ್ತಿನಲ್ಲಿ ಅನುಮೋದನೆಗೊಂಡ ಬಳಿಕ ಅಸ್ಸಾಂನಲ್ಲಿ ನಡೆಯುತ್ತಿರುವ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ ಮಾಡಿದ್ದು, “ನಿಮ್ಮ ಹಕ್ಕು, ಅಧಿಕಾರವನ್ನು ಯಾರೂ ಕಸಿದುಕೊಳ್ಳುವುದಿಲ್ಲ” ಎಂದು ಭರವಸೆ ನೀಡುವ ಮೂಲಕ ಇಂದು ಟ್ವೀಟ್ ಮಾಡಿ ಅಭಯ ನೀಡಿದ್ದಾರೆ. ಸಿಎಬಿ ಅನುಮೋದನೆಯಾದ ಬಳಿಕ ಚಿಂತಿಸುವ ಅಗತ್ಯವಿಲ್ಲ. ನಿಮ್ಮ ಹಕ್ಕು, ನಿಮ್ಮ ಸಂಸ್ಕೃತಿಯನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಧಾನಿ ಅಸ್ಸಾಂ ಜನರಿಗೆ ತಿಳಿಸಿದ್ದಾರೆ.
ಅಸ್ಸಾಂ ಹಾಗೂ ಸರ್ವಿಸಸ್ ಸ್ಪೋರ್ಟ್ಸ್ ಕಂಟ್ರೋಲ್ ಬೋರ್ಡ್ ಮತ್ತು ತ್ರಿಪುರಾ- ಜಾರ್ಖಂಡ್ ನಡುವೆ ಪಂದ್ಯ ನಡೆಯಬೇಕಿತ್ತು. ಸುರಕ್ಷತೆ ಹಿನ್ನಲೆಯಲ್ಲಿ ಆಟಗಾರರನ್ನು ಹೋಟೆಲ್‌ನಲ್ಲಿಯೇ ಇರುವಂತೆ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಅದೇಶಿಸಿದೆ ಎಂದು ತಿಳಿದುಬಂದಿದೆ.
I want to assure my brothers and sisters of Assam that they have nothing to worry after the passing of #CAB.
I want to assure them- no one can take away your rights, unique identity and beautiful culture. It will continue to flourish and grow.
— Narendra Modi (@narendramodi) December 12, 2019