ಬಿಸಿ ಬಿಸಿ ಸುದ್ದಿ

ಏಡ್ಸ್ ಎಂಬುದು ಮಾರಕ ರೋಗ ಜನತೆ ಇದರಿಂದ ದೂರವಿರಿ: ಗಂಗಾಧರ ರುಮಾಲ

ಸುರಪುರ: ಏಡ್ಸ್ ಎಂಬುದು ಒಂದು ಮಾರಕ ಅಂಟು ರೋಗವಾಗಿದ್ದು ಜನತೆ ಇದರಿಂದ ದೂರವಿರುವ ಮೂಲಕ ನೆಮ್ಮದಿಯ ಜೀವನ ನಡೆಸಬಹುದು ಎಂದು ಡಾ:ಬಿ.ಆರ್.ಅಂಬೇಡ್ಕರ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ:ಗಂಗಾಧರ ರುಮಾಲ ಮಾತನಾಡಿದರು.

ನಗರದ ರಂಗಂಪೇಟೆಯ ಹಸನಾಪುರದಲ್ಲಿರುವ ಡಾ:ಬಾಬಾ ಸಾಹೇಬ ಅಂಬೇಡ್ಕರ ವಿದ್ಯಾ ಸಂಸ್ಥೆಯ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಏಡ್ಸ್ ಪ್ರವೇನಷನ್ ಸೊಸೈಟಿ,ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಯಾದಗಿರಿ,ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ ಹಾಗು ಡಾ:ಬಿ.ಆರ್.ಅಂಬೇಡ್ಕರ ವಿದ್ಯಾಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಧಾರವಡ ಜಿಲ್ಲೆಯ ಕುಂದಗೋಳ ತಕ್ಲಿಪುರದ ಆದರ್ಶ ಕಲಾ ತಂಡದ ವತಿಯಿಂದ ಮಹೇಶ ಹಿರೇಗೌಡರ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಹೆಚ್.ಐ.ವಿ ಹಾಗು ಏಡ್ಸ್ ಜನ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ,ಏಡ್ಸ್ ರೋಗವು ತುಂಬಾ ಭಯಾನಕವಾದ ರೋಗವಾಗಿದ್ದು,ಇದು ಅಸುರಕ್ಷಿತ ಲೈಂಗಿಕತೆ,ಒಬ್ಬರ ಸಿರೆಂಜ್ ಮತ್ತೊಬ್ಬರಿಗೆ ಬಳಕೆ ಹೀಗೆ ಅನೇಕ ಕಾರಣಗಳಿಂದ ಬರುತ್ತದೆ. ಒಂದು ಬಾರಿ ಇದು ಬಂದರೆ ಮರಣದ ಕಡೆಗೆ ಹೊರಟಂತೆ. ಆದ್ದರಿಂದ ಜನತೆ ಇದು ಬರದಂತೆ ಎಚ್ಚರ ವಹಿಸುವಂತೆ ತಿಳಿಸಿದರು.

ನಂತರ ಕಲಾ ತಂಡಗಳ ವೀರಗಾಸೆ ಪ್ರದರ್ಶನದ ಮೂಲಕ ಹೆಚ್.ಐ.ವಿ ಮತ್ತು ಹೇಗೆ ಬರುತ್ತದೆ,ಇದು ಬಾರದಂತೆ ತಡೆಯಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವ ಬಗ್ಗೆ ಅರಿವು ಮೂಡಿಸದರು.ಕಾರ್ಯಕ್ರಮದ ಆರಂಭದಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ:ಉಮಾದೇವಿ ಮಟ್ಟಿ ನಗಾರೆ ಬಾರಿಸುವ ಮೂಲಕ ಚಾಲನೆ ನೀಡಿದರು.ವೇದಿಕೆ ಮೇಲೆ ಈಶ್ವರಪ್ಪ ತಳವಾರ,ಡಾ: ಭಾರತಿ,ಡಾ:ಕವಿತಾ,ಆರೋಗ್ಯ ಇಲಾಖೆಯ ಪ್ರದೀಪ,ಶ್ರೀಕಾಂತ ಶಿವಯೋಗಿಮಠ ಇದ್ದರು.ಕಾಲೇಜಿನ ಎಲ್ಲಾ ಸಿಬ್ಬಂದಿ ಹಾಗು ವಿದ್ಯಾರ್ಥಿಗಳು ಭಾಗವಹಿಸಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

11 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

13 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

20 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

20 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

21 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago