ಬೆಂಗಳೂರು: ಸೃಜನಾ ಡಿ ಹಾಗೂ ನಾಗಾಂಜಲಿ SSLC ಪರೀಕ್ಷೆಯಲ್ಲಿ 625 ಅಂಕಗಳಿಗೆ 625 ಅಂಕ ಗಳಿಸಿವ ಮೂಲಕ ರಾಜ್ಯಕ್ಕೇ ಮೊದಲ ಸ್ಥಾನ ಪಡೆದಿದ್ದಾರೆ. ಇವರು. ಸೃಜನಾ ಡಿ ಆನೇಕಲ್ ವಾಸಿಯಾಗಿದ್ದು, ನಾಗಾಂಜಲಿ ಕುಮಟಾ ನಿವಾಸಿಯಾಗಿದ್ದಾರೆ.
ರಾಜ್ಯದಲ್ಲಿ ಒಟ್ಟು11 ವಿದ್ಯಾರ್ಥಿಗಳು 624 ಅಂಕ ಗಳಿಸಿದ್ದು, 43 ವಿದ್ಯಾರ್ಥಿಗಳು 621 ಅಂಕ ಪಡೆದಿದ್ದು, ಇಬ್ಬರು ವಿದ್ಯಾರ್ಥಿನಿಯರು ಅಂಕ ಪಡೆದೆ 2018-19 ಸಾಲಿನಲ್ಲಿ ದಾಖಲೆ ನಿರ್ಮಿಸಿದ್ದಾರೆ. ಅಲ್ಲದೇ ಕಲಬುರಗಿಯ ಎಸ್ ಆರ್ ಎನ್ ಮೆಹತಾ ಸ್ಕೂಲ್ ಆದಿತ್ಯ ಜೋಶಿ, 595 ಅಂಕ ಪಡೆದು ಶಾಲೆ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಹಾಗೂ ಮಂಡಳಿ ನಿರ್ದೇಶಕಿ ವಿ. ಸುಮಂಗಲಾ ರಿಸಲ್ಟ್ ಪ್ರಕಟಿಸಿ SSLC ಪರೀಕ್ಷೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳೇ ಚೂಣಿಯಲ್ಲಿದ್ದು, ಈ ಬಾರಿ ಶೇ. 73.7ರಷ್ಟು ಫಲಿತಾಂಶ ಬಂದಿದೆ. 1.8ರಷ್ಟು ಫಲಿತಾಂಶ ಹೆಚ್ಚಳವಾಗಿದೆಂದು ಮಾಹಿತಿ ನೀಡಿದ್ದರು.
ಜಿಲ್ಲಾವಾರು ಪಟ್ಟಿ
ಫಲಿತಾಂಶದ ಶೇಖಡವಾರದಲ್ಲಿ ಯಾದಗೀರಿ ಕೊನೆ ಸ್ಥಾನದಲ್ಲಿದ್ದು, ಹಾಸನ ಪ್ರಥಮ ಸ್ಥಾನಗಳಿಸಿದೆ. ಕಲಬುರಗಿ 30ನೇ ಸ್ಥಾನದಲ್ಲಿದ್ದು, ರಾಯಚೂರು 33ನೇ ಸ್ಥಾನಕ್ಕೆ ಜಾರಿದೆ.
ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು. 34 ಶೈಕ್ಷಣಿಕ ಜಿಲ್ಲೆಗಳ 2,847 ಪರೀಕ್ಷಾ ಕೇಂದ್ರಗಳಲ್ಲಿ 4 ಸಾವಿರದ ಆರುನೂರ ಐವತ್ತೊಂದು ವಿಕಲಚೇತನ ವಿದ್ಯಾರ್ಥಿಗಳು ಸೇರಿ 8 ಲಕ್ಷದ 41 ಸಾವಿರದ 666 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…