ಕಲಬುರಗಿ: ನೃಪತುಂಗನ ನಾಡು ಕಲಬುರಗಿಯಲ್ಲಿ ೨೦೨೦ರ ಫೆಬ್ರವರಿ ೫, ೬ ಮತ್ತು ೭ ರಂದು ನಡೆಯಲಿರುವ ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ರಾಜಕೀಯ ಹಸ್ತಕ್ಷೇಪವಿಲ್ಲದೆ ಇತಿಹಾಸ ಪುಟದಲ್ಲಿ ಸೇರುವಂತೆ ಐತಿಹಾಸಿಕ ಹಾಗೂ ಯಶಸ್ವಿ ಸಮ್ಮೇಳನವಾಗಲು ಎಲ್ಲರು ಸಹಕಾರ ನೀಡಬೇಕು ಎಂದು ರಾಜ್ಯದ ಉಪ ಮುಖ್ಯಮಂತ್ರಿಗಳು, ಸಮಾಜ ಕಲ್ಯಾಣ, ಲೋಕೋಪಯೋಗಿ ಸಚಿವರು, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಗೋವಿಂದ ಎಂ. ಕಾರಜೋಳ ಅವರು ಮನವಿ ಮಾಡಿದರು.
ಗುರುವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ೮೫ನೇ ಆಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಮ್ಮೇಳನವನ್ನು ಅಚ್ಚುಕಟ್ಟಾಗಿ ಮತ್ತು ವ್ಯವಸ್ಥಿತವಾಗಿ ನಿರ್ವಹಿಸುವ ಸಂಪೂರ್ಣ ಜವಾಬ್ದಾರಿ ಜಿಲ್ಲಾಧಿಕಾರಿ ಶರತ್ ಬಿ. ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜಾ ಪಿ. ಇವರಿಗೆ ವಹಿಸಲಾಗಿದೆ. ಇವರಿಗೆ ಕನ್ನಡಪರ ಸಂಘಟನೆಗಳು, ಸಾಹಿತಿಗಳು ಹಾಗೂ ಜಿಲ್ಲಾಡಳಿತದ ಎಲ್ಲಾ ಹಿರಿಯ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ನಿರ್ದೇಶನ ನೀಡಿದರು
ಕಲ್ಯಾಣ ಕರ್ನಾಟಕದ ಶ್ರೀಮಂತ ಕಲೆ, ಸಂಸ್ಕೃತಿ, ಸಾಹಿತ್ಯವನ್ನು ಬಿಂಬಿಸುವಂತೆ ಸ್ಮರಣ ಸಂಚಿಕೆ ಸಿದ್ಧಪಡಿಸಬೇಕು. ಸಮ್ಮೇಳನದ ಯಶಸ್ವಿಗೆ ಸ್ವಾಗತ, ವೇದಿಕೆ, ಆಹಾರ, ಮೆರವಣಿಗೆ, ಪ್ರದರ್ಶನ ಮತ್ತು ವಾಣಿಜ್ಯ ಮಳಿಗೆ, ವಸತಿ ಮತ್ತು ಸಾರಿಗೆ, ಸಾಂಸ್ಕೃತಿಕ, ಪ್ರಚಾರ, ಸ್ವಯಂ ಸೇವಕ ಮತ್ತು ನಿರ್ವಹಣಾ, ಸ್ವಚ್ಛತಾ, ಆರೋಗ್ಯ, ಮಹಿಳಾ, ಚಿತ್ರಕಲಾ ಪ್ರದರ್ಶನ, ನೋಂದಣಿ, ಅಲಂಕಾರ ಹಾಗೂ ಸ್ಮರಣ ಸಂಚಿಕೆ ಸೇರಿದಂತೆ ಒಟ್ಟು ೧೬ ಸಮಿತಿಗಳನ್ನು ರಚಿಸಲಾಗಿದೆ. ನಾಳೆಯಿಂದ ಸಮಿತಿಗಳು ತನ್ನ ಚಟುವಟಿಕೆಗಳು ಭರದಿಂದ ಕಾರ್ಯಾರಂಭ ಮಾಡಲಿವೆ. ಆಯಾ ಸಮಿತಿಗಳಿಗೆ ವಹಿಸಿದ ಜವಾಬ್ದಾರಿಗಳನ್ನು ಯಾವುದೇ ಲೋಪವಿಲ್ಲದೆ ಎಲ್ಲರೂ ಸಂಘಟಿತರಾಗಿ ನಿರ್ವಹಿಸಬೇಕು ಎಂದು ಡಿ.ಸಿ.ಎಂ ಗೋವಿಂದ ಕಾರಜೋಳ ನುಡಿದರು.
ಇಂದಿನ ದಿನದಲ್ಲಿ ಹಳ್ಳಿಯಲ್ಲಿಯೂ ಆಂಗ್ಲ ವ್ಯಾಮೋಹ ಹೆಚ್ಚಾಗುತ್ತಿದೆ. ಸೂಫಿ, ಶರಣ-ಸಂತರ ನಾಡು ಕಲ್ಯಾಣ ಕರ್ನಾಟಕದಲ್ಲಿ ನಡೆಯುವ ಈ ಸಮ್ಮೇಳನ ಅರೂವರೆ ಕೋಟಿ ಕನ್ನಡಿಗರಿಗೆ ಮಾತೃಭಾ? ಕನ್ನಡವನ್ನು ಉಳಿಸುವ, ಬೆಳೆಸುವ ಹಾಗೂ ಸಾಹಿತಿಗಳನ್ನು ಗೌರವಿಸುವ ಸಂದೇಶ ಹೊರಬರಬೇಕಲ್ಲದೆ ಮುಂದಿನ ಪೀಳಿಗೆಗೆ ನಾಡು-ನುಡಿ ಪರಿಚಯಿಸುವ ಕೆಲಸ ಶರನಣ ನಾಡಿನಿಂದ ಆಗಬೇಕಿದೆ ಎಂದರು.
ಸಮ್ಮೇಳನದಲ್ಲಿ ನಾಡಿನ ೩೦ ಜಿಲ್ಲೆಗಳ ಕಲಾ ತಂಡಗಳು ಭಾಗವಹಿಸಲಿದ್ದು, ಮೆರವಣಿಗೆಯ ಮೆರಗು ಹೆಚ್ಚಲಿದೆ ಎಂದು ಉಪ ಮುಖ್ಯಮಂತ್ರಿಗಳು ನುಡಿದರು.
ಇತ್ತೀಚೆಗೆ ನಿಧನರಾದ ಹಿರಿಯ ಸಾಹಿತಿ ಡಾ.ಚೆನ್ನಣ್ಣ ವಾಲೀಕರ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ ಡಿ.ಸಿ.ಎಂ ಗೋವಿಂದ ಎಂ. ಕಾರಜೋಳ ಅವರು ವಾಲೀಕಾರ್ ಅವರ ಕುಟುಂಬಕ್ಕೆ ದು:ಖವನ್ನು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಹೇಳುತ್ತಾ ಸಾಹಿತ್ಯ ಸಮ್ಮೇಳನದಲ್ಲಿ ವೇದಿಕೆಯೊಂದಕ್ಕೆ ಡಾ.ಚೆನ್ನಣ್ಣ ವಾಲೀಕರ್ ಅವರ ಹೆಸರು ಇಡಲು ಸಮಿತಿ ಸೂಕ್ತವಾಗಿ ಪರಿಶೀಲಿಸಬೇಕು ಎಂದರು.
ಸಭೆ ಅರಂಭಕ್ಕೂ ಮುನ್ನ ಇತ್ತೀಚೆಗೆ ನಿಧನರಾದ ಹಿರಿಯ ಸಾಹಿತಿ ಡಾ.ಚೆನ್ನಣ್ಣ ವಾಲೀಕರ್ ಅವರ ಅತ್ಮಕ್ಕೆ ಶಾಂತಿ ಕೋರಿ ಸಭೆಯು ಒಂದು ನಿಮಿ? ಮೌನಾಚರಣೆ ಮಾಡಲಾಯಿತು. ಸಭೆಯಲ್ಲಿ ಭಾಗವಹಿಸಿದ ಸಾಹಿತಿಗಳು ಸಮ್ಮೇಳನ ಯಶಸ್ವಿಗೆ ಅನೇಕ ಸಲಹೆಗಳನ್ನು ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ವೀರಭದ್ರಪ್ಪ ಸಿಂಪಿ ಅವರು ಸಮ್ಮೇಳನದ ಯಶಸ್ವಿಗೆ ರಚಿಸಲಾಗಿರುವ ವಿವಿಧ ೧೬ ಸಮಿತಿಗಳ ಅಧ್ಯಕ್ಷರ ಮತ್ತು ಸದಸ್ಯರ ಹೆಸರುಗಳನ್ನು ಘೋಷಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಾಲಾಜಿ, ಶಾಸಕರಾದ ಬಸವರಾಜ ಮತ್ತಿಮೂಡ, ಕನೀಸ್ ಫಾತಿಮಾ, ಡಾ.ಅವಿನಾಶ ಜಾಧವ, ವಿಧಾನ ಪರಿ?ತ್ತಿನ ಶಾಸಕರಾದ ಬಿ.ಜಿ.ಪಾಟೀಲ, ತಿಪ್ಪಣಪ್ಪ ಕಮಕನೂರ, ಪೊಲೀಸ್ ಆಯುಕ್ತ ಡಾ.ಎಂ.ಎನ್.ನಾಗರಾಜ್, ಜಿಲ್ಲಾಧಿಕಾರಿ ಶರತ್ ಬಿ., ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಪಿ.ರಾಜಾ, ಡಿ.ಸಿ.ಪಿ. ಕಿಶೋರ ಬಾಬು, ಮಹಾನಗರ ಪಾಲಿಕೆಯ ಅಯುಕ್ತ ರಾಹುಲ ಪಾಂಡ್ವೆ, ಸೇರಿದಂತೆ ಜಿಲ್ಲೆಯ ಹಿರಿಯ ಸಾಹಿತಿಗಳು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಚಿಂತಕರು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…