ಬಿಸಿ ಬಿಸಿ ಸುದ್ದಿ

ನಶಿಸುತ್ತಿರುವ ಜನಪದ ಕಲೆಗಳು : ಡಾ. ಪೂರ್ಣಿಮಾ ಜೋಗಿ

ಕಲಬುರಗಿ: ಜನಪದವು ಜನರ ಮನಸ್ಸನ್ನು ಶುದ್ಧಗೊಳಿಸುತ್ತದೆ ಇದರಿಂದ ಆರೋಗ್ಯವಂತ ಸಮಾಜವು ನಿರ್ಮಾಣಗೊಂಡು ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ಪೂರಕವಾಗಿದೆ. ಎಂದು ರಾಜ್ಯ ಎನ್ ಎಸ್ ಎಸ್ ಅನುಷ್ಠಾನ ಅಧಿಕಾರಿಗಳಾದ ಡಾ. ಪೂರ್ಣಿಮಾ ಜೋಗಿ ಅವರು ಹೇಳಿದರು.

ಗುಲ್ಬರ್ಗ ವಿಶ್ವವಿದ್ಯಾಲಯದ ಮಹಾತ್ಮಗಾಂಧಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ ಕೋಶ ಮತ್ತು ಕನ್ನಡ ಜಾನಪದ ಪರಿಷತ್ ಬೆಂಗಳೂರು ಹಾಗೂ ಜಿಲ್ಲಾ ಘಟಕ ಕಲಬುರ್ಗಿ ಇವುಗಳ ಸಂಯುಕ್ತ ಆಶ್ರಯದಲ್ಲಿ ‘ಕಲ್ಯಾಣ ಕರ್ನಾಟಕ ಜಾನಪದ ಸಂಭ್ರಮ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿ ಇಂದಿನ ಯುಗ ಡಿಜಿಟಲ್ ಯುಗ ಇರುವುದರಿಂದ ಮಾನವ ಸಂಬಂಧಗಳು ತುಂಬಾ ದೂರ ಆಗುತ್ತಲಿವೆ. ಈ ಮಾನವ ಸಂಬಂಧಗಳನ್ನು ಬೆಸೆಯುಲು ಗ್ರಾಮೀಣ ಸೊಗಡಿನ ಜಾನಪದವನ್ನು ನಶಿಸಿ ಹೋಗುತ್ತಿರುವದರಿಂದ ನಮ್ಮ ಜನತೆ ಸಾಂಸ್ಕೃತಿಕವಾಗಿ ಹಾಳಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಸಂಬಂಧಗಳ ಬೆಸಗುಗಾಗಿ ಜನಪದ ಸಂಸ್ಕೃತಿ ಶ್ರಮ ಅದನ್ನು ಪೋಷಿಸಿ ಬೆಳೆಸಲು ಶಾಲಾ ಕಾಲೇಜುಗಳ ಮಟ್ಟದಲ್ಲಿ ಮತ್ತು ಗ್ರಾಮೀಣ ಮಟ್ಟದಲ್ಲಿ ಜನಪದ ಹಬ್ಬ ಹಮ್ಮಿಕೊಳ್ಳುವುದು ಅವಶ್ಯಕ ಇದೆ ಎಂದು ಅವರು ಹೇಳಿದರು.

ಕನ್ನಡ ಜಾನಪದ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷರಾದ ಡಾ.ಎಸ್ ಬಾಲಾಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ದೇಶಿ ಜಾನಪದ ಕಲೆಗಳು ನಶಿಸಿ ಹೋಗುತ್ತಿವೆ. ಜಾನಪದ ಬಡ ಕಲಾವಿದರಿಗೆ ಯಾವುದೇ ಮಾಶಾಸನ ಇರುವುದಿಲ್ಲ ಹೀಗಾಗಿ ಅವರಿಗೆ ಸರ್ಕಾರದಿಂದ ಮಾಶಾಸನ ಕೊಡಿಸುವ ಭರವಸೆಯನ್ನು ನೀಡಿದರು.

ಗುಲ್ಬರ್ಗ ವಿಶ್ವವಿದ್ಯಾಲಯದ ಎನ್ ಎಸ್ ಎಸ್ ಸಂಯೋಜಕರಾದ ಪ್ರೊ, ರಮೇಶ ಲಂಡನಕರ್ ಪ್ರಾಸ್ತಾವಿಕವಾಗಿ ಮಾತನಾಡಿ ಜನಪದ ಬೆಳವಣಿಗೆ ಆದರೆ ನಮ್ಮ ಸಂಸ್ಕೃತಿ ಉಳಿಯುತ್ತದೆ. ಮುಂದಿನ ಪೀಳಿಗೆಗೆ ಕೊಂಡೊಯ್ಯುಲು ಅನುಕೂಲವಾಗುತ್ತದೆ. ನಾವೆಲ್ಲರೂ ಇಂದು ಜಾನಪದ ಸಾಂಸ್ಕೃತಿಕ ಸೇತುವೆ ನಿರ್ಮಾಣ ಮಾಡಬೇಕಾಗಿದೆ ದೇಶೀಯ ಕಲೆ, ಸಂಸ್ಕೃತಿಗಳನ್ನು ಮರೆತರೆ ಬದುಕಿನ ಸತ್ವವನ್ನು ಕಳೆದುಕೊಂಡಂತೆ. ಜನಪದ ನಮ್ಮ ಸಂಸ್ಕೃತಿಯ ತಾಯಿಬೇರು. ಎಂದು ಅವರು ಹೇಳಿದರು.

ಗುಲ್ಬರ್ಗ ವಿಶ್ವವಿದ್ಯಾಲಯದ ಪ್ರಭಾರಿ ಕುಲಪತಿ ಪ್ರೊ, ಲಕ್ಷ್ಮಣ ರಾಜನಾಳ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ` ಜಾಗತೀಕರಣ, ಪಾಶ್ಚಿಮಾತ್ಯ ಸಂಸ್ಕೃತಿಯ ಅನುಕರಣೆ ಮತ್ತಿತರ ಕಾರಣಗಳಿಂದ ಜನಪದ ಕಲೆಗಳು ಮರೆಯಾಗುತ್ತಿವೆ’ ಎಂದು ಅವರು ಹೇಳಿ `ನಮ್ಮ ಜನಪದಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಅದರ ಮೂಲಕವೇ ನಮ್ಮ ಹಿರಿಯರು ಬದುಕು ಕಟ್ಟಿಕೊಂಡು ಬೆಳೆದವರು. ಬದಲಾದ ಜೀವನ ಶೈಲಿ, ಮಾಧ್ಯಮಗಳ ಪ್ರಭಾವದಿಂದ ನಮ್ಮ ಕಲೆ ಸಂಸ್ಕೃತಿ ಉಳಿಸುವಲ್ಲಿ ನಾವು ಹಿಂದೆ ಬಿದ್ದಿವೆ . ಮುಂದೊಂದು ದಿನ ಜಗತ್ತಿನ ಸಂಪನ್ಮೂಲಗಳೆಲ್ಲ ಮುಗಿದಾಗ ಮತ್ತೆ ನಾವು ಹಳೆಯ ಜೀವನ ಶೈಲಿಗೆ ಮರುಳಬೇಕಾಗಿ ಬರಬಹುದು’ ಎಂದರು.

ವಾಸುದೇವ್ ಸೇಡಂ, ಶರಣಪ್ಪ ಗೋನಾಳ, ಎಸ್ ಜಿ ಭಾರತಿ, ಡಾ. ಪಿ ಎನ್ ಶಹಾ ವಿಶ್ವೇಶ್ವರ ಭೋವಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

9 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

11 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

18 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

18 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

18 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago