ಸಿದ್ದರಾಮಯ್ಯ ವಿರೋಧ ಪಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆ ತಿರಸ್ಕಾರಕ್ಕೆ ಪತ್ರ ಚಳುವಳಿ

ಮೈಸೂರು: ರಾಜ್ಯದಲ್ಲಿ ಸಂವಿಧಾನ ಪ್ರಜಾಪ್ರಭುತ್ವದ ಉಳಿವಿಗಾಗಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯನವರು ನೀಡಿರುವ ರಾಜೀನಾಮೆ ತಿರಸ್ಕರಿಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ದಲಿತ ಸಂಘಟನೆಗಳ ಒಕ್ಕೂಟ ವತಿಯಿಂದ ಪತ್ರಚಳವಳಿ ನಡೆಯಿತು.

ಮಹಾನಗರ ಪಾಲಿಕೆ ಎದುರು ಪತ್ರ ಚಳವಳಿಯಲ್ಲಿ ಪಾಲ್ಗೊಂಡು ಮಾತನಾಡಿದ ವೇದಿಕೆಯ ರಾಜ್ಯಾಧ್ಯಕ್ಷ ಕೆ.ಶಿವರಾಂ ಪ್ರಜಾಪ್ರಭುತ್ವದ ಉಳಿವಿಗಾಗಿ ಸಿದ್ದರಾಮಯ್ಯನವರು ಪ್ರಸ್ತುತದಲ್ಲಿ ರಾಜಕೀಯದಲ್ಲಿ
ಮುಂಚೂಣಿಯಲ್ಲಿರಬೇಕಾಗಿರುವುದು ತೀರಾ ಅನಿವಾರ್ಯ.
ಈ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್
ಸಮಿತಿಯ ರಾಷ್ಟ್ರಾಧ್ಯಕ್ಷರಾದ ಸೋನಿಯಾಗಾಂಧಿಯವರು
ಅವರ ರಾಜೀನಾಮೆಯನ್ನು ತಿರಸ್ಕರಿಸುವ ಮೂಲಕ
ಸಂವಿಧಾನ, ಪ್ರಜಾಪ್ರಭುತ್ವದ ಆಶಯಗಳನ್ನು ಈಡೇರಿಸುವ
ಮಹತ್ವದ ಜವಾಬ್ದಾರಿಗಳನ್ನು ಹೊಂದಿರುವ ಸಾಮಾಜಿಕ
ನ್ಯಾಯ, ಸಾಮಾಜಿಕ ಬದ್ಧತೆ, ಸಮಸಮಾಜದ ಆಶಯವನ್ನು
ಈಡೇರಿಸುವಂತಹ ಆಶಯವುಳ್ಳ ಸಿದ್ದರಾಮಯ್ಯನವರ
ನಾಯಕತ್ವವನ್ನು ಬೆಂಬಲಿಸಿ ಅವರ ರಾಜೀನಾಮೆಯನ್ನು
ತಿರಸ್ಕರಿಸಬೇಕೆಂದು ಮನವಿ ಮಾಡಿದರು.

ಜನಪರ ಧ್ವನಿಗಳನ್ನು ಹತ್ತಿಕ್ಕುವುದು ನಮ್ಮ ಅಸ್ತಿತ್ವವನ್ನೇ ನಾವೇ ಕ್ರಮೇಣ ಕೊಂದುಕೊಂಡಂತೆ. ಆದ್ದರಿಂದ ಇದನ್ನು
ಅಯ್ತುಮಾಡಿಕೊಂಡು ಕಾಂಗ್ರೆಸ್ ಪಕ್ಷದ ಇತರೆ ನಾಯಕರು
ಸಿದ್ದರಾಮಯ್ಯನವರ ಕೈಬಲಪಡಿಸುವುದರ ಮೂಲಕ
ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕೆಂದು ಒತ್ತಾಯಿಸಿದರು.

ಸಿದ್ದರಾಮಯ್ಯನವರು ವಿರೋಧಪಕ್ಷದ ನಾಯಕ ಸ್ಥಾನದಿಂದ
ಬದಲಾದರೆ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಲಿದೆ. ಸಿದ್ದರಾಮಯ್ಯನವರ ನಾಯಕತ್ವ
ಬದಲಾದಲ್ಲಿ ಕಾಂಗ್ರೆಸ್ ಮುಕ್ತ ಕರ್ನಾಟಕವಾಗುವುದು
ನಿಶ್ಚಿತ. ಕಾಮಗ್ರೆಸ್ ಸೋಲಿಗೆ ಸಿದ್ದರಾಮಯ್ಯನವರೊಬ್ಬರೆ
ಕಾರಣರಲ್ಲ. ಪ್ರಜಾಪ್ರಭುತ್ವದ ಉಳಿವಿಗಾಗಿ
ಸಿದ್ದರಾಮಯ್ಯನವರು ಪ್ರಸ್ತುತ ರಾಜಕೀಯದಲ್ಲಿ
ಮುಂಚೂಣಿಯಲ್ಲಿರಬೇಕು. ಇಂತವರು ಸದಾ
ರಾಜಕಾರಣದಲ್ಲಿ ಸಕ್ರೀಯ ರಾಗಿರಬೇಕು. ಆದ್ದರಿಂದ
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ
ಸಿದ್ದರಾಮಯ್ಯನವರ ರಾಜೀನಾಮೆ ಅಂಗೀಕರಿಸಬಾರದು ಎಂದು ಒತ್ತಾಯಿಸಿದರು.

ಈ ಸಂದರ್ಭ ಪಿ.ರಾಜು, ಜಾಕೀರ್ ಹುಸೇನ್, ಎನ್.ಆರ್.ನಾಗೇಶ್, ಹಿನಕಲ್ ಪ್ರಕಾಶ್, ಹಿನಕಲ್ ಉದಯ್, ಹೆಚ್.ಆರ್.ಪ್ರಕಾಶ್,ಸತ್ಯನಾರಾಯಣ್, ರವಿಓಂಕಾರ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

7 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

7 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

7 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420