ಕಲಬುರಗಿ: ದಲಿತರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುವಲ್ಲಿ ಪೊಲೀಸ ಇಲಾಖೆ ವಿಫಲವಾಗಿದ್ದು, ಈ ಕುರಿತಂತೆ ಸರ್ಕಾರ ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ದಲಿತಸೇನೆ ನಗರದ ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಛೇರಿವರೆಗೆ ಬ್ರಹತ್ ಪ್ರತಿಭಟನೆ ನಡೆಸಿದೆ.
ದಲಿತಸೇನೆ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿಯವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಜಿಲ್ಲೆಯ ಚಿತ್ತಾಪುರ ತಾಲೂಕಿನ ಭಾಗೋಡಿ ಗ್ರಾಮದಲ್ಲಿ ಡಿ.12 ರಂದು ಡಾ.ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಅಪಮಾನ ಮಾಡಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ನಿರ್ಲಕ್ಷಿಸಿದ್ದು ಇನ್ನು ಶಿಬಾರಾಣಿ ಕೊಲೆ ಪ್ರಕರಣ ಕುರಿತು ಪೊಲೀಸರೇ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ಸೇನೆ ಆಕ್ರೋಶ ವ್ಯಕ್ತಪಡಿಸಿದೆ.
ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಅಮಾಯಕ ದಲಿತ ಯುವಕರನ್ನು ಪೊಲೀಸರು ಬಂಧಿಸಿ, ಅವರ ಮೇಲೆ ಆರೋಪ ಮಾಡಿದೆ ಇದು ಸರಿಯಾದ ಕ್ರಮವಲ್ಲ ಎಂದು ಮನವಿ ಪತ್ರದಲ್ಲಿ ದೂರಿದ್ದಾರೆ.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಡಿ ಕೆ ಮದನಕರ್,ಪ್ರಧಾನ್ ಕಾರ್ಯದರ್ಶಿ ಶಿವಕುಮಾರ್ ಗೋಲಾ, ಶಿವಲಿಂಗ ದೊಡ್ಡಮನಿ ಸೇರಿದಂತೆ ಹಲವಾರು ಮುಖಂಡರು, ಮಹಿಳೆಯರು ಪಾಲ್ಗೊಂಡಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…