ಕಲುಬುರಗಿ; ನೋಂದಣಿಯಾಗಿರುವ ಸಂಘ ಸಂಸ್ಥೆಗಳು ತಮ್ಮ ಸದಸ್ಯರ ಹಕ್ಕುಗಳನ್ನು ಕಾಪಾಡುವುದರ ಜೊತೆಗೆ ಸಾಮಾಜಿಕ ಹೊಣೆಗಾರಿಕೆಯನ್ನು ಹೊರಬೇಕು ಎಂದು ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಾಗಣ್ಣ ಗಣಜಲಖೇಡ ಅಭಿಪ್ರಾಯಪಟ್ಟರು.
ನಗರದ ಕಲಾಮಂಡಳದಲ್ಲಿ ಹಮ್ಮಿಕೊಂಡಿದ್ದ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನೆ ನೇರವೆರಿಸಿ ಅವರು ಮಾತನಾಡಿದರು. ಪಿಂಚಣಿ ಎನ್ನುವುದು ಭಿಕ್ಷೆಯಲ್ಲ ಅದು ಪ್ರತಿ ನೌಕರನ ಮೂಲಭೂತ ಹಕ್ಕಾಗಿದೆ ಅದನ್ನು ಪಡೆದುಕೊಳ್ಳಲು ಪ್ರತಿ ನೌಕರರು ಅರ್ಹರಾಗಿದ್ದಾರೆ ಅದಕ್ಕಾಗಿ ಸಂಘಟಿತ ಪ್ರಯತ್ನ ಮಾಡುವುದು ಈಗಿನ ಅವಶ್ಯಕತೆಯಾಗಿದೆ ಎಂದು ನುಡಿದರು.
ಪಿಂಚಣಿಗೆ ಸಂಬಂಧಪಟ್ಟ ವ್ಯಾಜ್ಯಗಳನ್ನು ಬಗೆ ಹರಿಸಲು ರಾಜ್ಯ ಸರ್ಕಾರವು ರಾಜ್ಯದಲ್ಲಿ ಪಿಂಚಣಿ ಅದಾಲತ್ ಪ್ರಾರಂಭಿಸಿದೆ ಅದರ ಲಾಭವನ್ನು ನಿವೃತ್ತ ನೌಕರರು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಮಾಹಿತಿ ಹಕ್ಕು ಕಾರ್ಯಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಸಿದ್ರಾಮಯ್ಯ ಹಿರೇಮಠ ಮಾತನಾಡಿ, ಮಾಹಿತಿಯ ಕೊರತೆಯಿಂದ ಹಲವು ಜನ ನಿವೃತ್ತ ನೌಕರರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಸೂಕ್ತ ಕಾನೂನಿನ ಅರಿವು ಮತ್ತು ಮಾಹಿತಿಯಿಂದ ಸೌಲಭ್ಯವನ್ನು ಪಡೆಯಬಹುದಾಗಿದೆ ಅದಕ್ಕಾಗಿ ತಾವು ಉಚಿತ ನೀಡಲು ಸಿದ್ಧ ಎಂದು ಹೇಳಿದರು.
ಮಾಹಿತಿ ಪಡೆಯುವುದು ಸಂವಿಧಾನದಲ್ಲಿ ಮೂಲಭೂತ ಹಕ್ಕು ಎಂದು ಹೇಳಲಾಗಿದೆ ಹೀಗಾಗಿ ಎಲ್ಲರೂ ತಮ್ಮ ತಮ್ಮ ಹಕ್ಕುಗಳನ್ನು ಸಂರಕ್ಷಿಸಿಕೊಳ್ಳಲು ಮುಂದೆ ಬರಬೇಕು ಈ ನಿಟ್ಟಿನಲ್ಲಿ ಸಂಘವು ತನ್ನ ಕಾರ್ಯವ್ಯಾಪ್ತಿಯಲ್ಲಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಡಾ. ಎಸ್ ಆರ್ ಮುತ್ತಗಿ, ಡಾ. ನಿರ್ಮಲಾ ರಾಂಪೂರೆ, ಸಹ ಕಾರ್ಯದರ್ಶಿ ವಿ ಎಸ್ ನಂದ್ಯಾಳ, ಡಾ. ಎಸ್ ಎಸ್ ಗುಬ್ಬಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಟಿ ಎಸ್ ಗವಿಮಠ, ಚಂದ್ರಕಾಂತ ತುಪ್ಪದ, ಡಾ. ಸಿ ಎಂ ವಸಂತಕುಮಾರ, ಡಾ. ಎಸ್ ಎಲ್ ಹಿರೇಮಠ ಸೇರಿದಂತೆ ನಿವೃತ್ತ ನೌಕರರು ಭಾಗವಹಿಸಿದ್ದರು.
ಬಸವರಾಜ ಸಾಲಿಮಠ ಪ್ರಾರ್ಥಿಸಿದರು. ಸಂಘದ ಕಾರ್ಯದರ್ಶಿ ಎಸ್ ಎಸ್ ಹಿರೇಮಠ ಸ್ವಾಗತಿಸಿ, ನಿರೂಪಿಸಿದರು. ಸಂಘದ ಅಧ್ಯಕ್ಷ ಡಾ. ಆರ್ ಸಿ ಕಾಂತಾ ಅಧ್ಯಕ್ಷತೆ ವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…