ಬಿಸಿ ಬಿಸಿ ಸುದ್ದಿ

ಅಭಿವೃದ್ಧಿಗೆ ಪ್ರಿಯಾಂಕ್ ಅಡಿಗಲ್ಲು 19 ರಂದು: ಬಿಜೆಪಿಯಿಂದ ವಸತಿ ಅನುದಾನ ಸ್ಥಗಿತ: ಆರೋಪ

ಕಲಬುರಗಿ/ವಾಡಿ: ಕೊಳಗೇರಿ ಕುಟುಂಬಗಳಿಗೆ ಸೂರು ಕಲ್ಪಿಸಲು ಜಾರಿಗೊಂಡಿದ್ದ ಅಂಬೇಡ್ಕರ್ ಮತ್ತು ಪಿಎಂ ವಾಜಪೇಯಿ ವಸತಿ ಸೌಲಭ್ಯಗಳ ಅನುದಾನ ಸ್ಥಗಿತಗೊಳಿಸುವ ಮೂಲಕ ಬಿಜೆಪಿ ಸರಕಾರ ಅನ್ಯಾಯ ಮಾಡಿದೆ ಎಂದು ಪುರಸಭೆ ಅಧ್ಯಕ್ಷೆ, ಕಾಂಗ್ರೆಸ್‌ನ ಮೈನಾಬಾಯಿ ಗೋಪಾಲ ರಾಠೋಡ ಆರೋಪಿಸಿದರು.

ಪಟ್ಟಣದಲ್ಲಿ ಡಿ.೧೯ ರಂದು ಏರ್ಪಡಿಸಲಾಗುತ್ತಿರುವ ಶಾಸಕ ಪ್ರಿಯಾಂಕ್ ಖರ್ಗೆ ಅವರ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಸಮಾರಂಭದ ಪೂರ್ವಭಾವಿ ಸಭೆ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮೈನಾಬಾಯಿ, ಹೊಸ ಮನೆ ಕಟ್ಟಿಕೊಳ್ಳಲು ಹಳೆಯ ಗುಡಿಸಲು ತೆರವುಮಾಡಿರುವ ಅನೇಕ ಕುಟುಂಬಗಳು ತೀವ್ರ ತೊಂದರೆ ಅನುಭವಿಸಬೇಕಾಗಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ವಸತಿ ಸೌಲಭ್ಯದ ಸಹಾಯಧನ ಕಡಿತಗೊಂಡಿದೆ. ಪುರಸಭೆ ಆಡಳಿತದಿಂದ ಸಿದ್ಧಪಡಿಸಲಾಗಿರುವ ಹಲವು ಜನಪರ ಕಾಮಗಾರಿಗಳ ಕ್ರಿಯಾಯೋಜನೆಗೆ ಜಿಲ್ಲಾಧಿಕಾರಿಗಳಿಂದ ಅನುಮೋದನೆಗೊಳ್ಳುತ್ತಿಲ್ಲ. ಅಭಿವೃದ್ಧಿ ವಿಷಯದಲ್ಲಿ ಕಾಂಗ್ರೆಸ್ ಯಾವತ್ತೂ ಸೇಡಿನ ರಾಜಕಾರಣ ಮಾಡಿಲ್ಲ. ಬಿಜೆಪಿಯಿಂದ ದ್ವೇಶದ ರಾಜಕಾರಣ ನಡೆಯುತ್ತಿದೆ ಎಂದು ಆಪಾದಿಸಿದರು.

ಬಡವರಿಗಾಗಿ ಸಾವಿರಾರು ಮನೆಗಳು: ವಾಡಿ ಪುರಸಭೆ ವ್ಯಾಪ್ತಿಯ ವಿವಿಧ ವಾರ್ಡ್‌ಗಳ ಬಡ ಕುಟುಂಬಗಳಿಗೆ ಉತ್ತಮ ವಸತಿ ಸೌಲಭ್ಯ ಒದಗಿಸಲು ಕಾಂಗ್ರೆಸ್ ಆಡಳಿತ ಯೋಜನೆ ರೂಪಿಸಿದೆ. ಪ್ರಗತಿ ಕಾಲೋನಿ ಎಂಬ ಹೊಸ ನಗರ ಸೃಷ್ಠಿಸಲು ಶಾಸಕ ಪ್ರಿಯಾಂಕ್ ಖರ್ಗೆ ಅವರು ವಾಡಿ ಹೊರ ವಲಯದಲ್ಲಿ ನೂರಾರು ಎಕರೆ ಭೂಮಿ ಖರೀದಿಸಿದ್ದಾರೆ. ನ್ಯೂ ಟೌನ್ ಮತ್ತು ಶೈಕ್ಷಣಿಕ ಸಂಕೀರ್ಣ ನಿರ್ಮಿಸಲು ನೀಲನಕ್ಷೆ ಸಿದ್ಧಗೊಂಡಿದೆ. ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಆದಷ್ಟು ಬೇಗ ಶಾಸಕ ಪ್ರಿಯಾಂಕ್ ಖರ್ಗೆ ಅವರು ವಸತಿ ವಂಚಿತ ಪ್ರತಿಯೊಂದು ಕುಟುಂಬಕ್ಕೂ ಸುಸಜ್ಜಿತ ಮನೆ ಒದಗಿಸಲಿದ್ದಾರೆ ಎಂದು ಅಧ್ಯಕ್ಷೆ ಮೈನಾಬಾಯಿ ಹೇಳಿದರು.

ಅಭಿವೃದ್ಧಿಗೆ ಅಡಿಗಲ್ಲು: ಶಾಸಕ ಪ್ರಿಯಾಂಕ್ ಖರ್ಗೆ ಅವರು ಡಿ.೧೯ ರಂದು ಮದ್ಯಾಹ್ನ ೧:೦೦ ಗಂಟೆಗೆ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ನಗರೋತ್ಥಾನ ಯೋಜನೆಯ ಒಟ್ಟು ೩ ಕೋಟಿ ರೂ. ಅನುದಾನದಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಲಿದ್ದು, ಜತೆಗೆ ಅಂಗವಿಕಲರಿಗೆ ವಾಹನಗಳ ವಿತರಣೆ ಮಾಡಲಿದ್ದಾರೆ. ವಾರ್ಡ್ ೨೩ ಇಂದ್ರಾನಗರ ಹಾಗೂ ೮ರ ಅಂಬೇಡ್ಕರ್ ಕಾಲೋನಿಯಲ್ಲಿ ತಲಾ ೫.೦೦ ಲಕ್ಷ ಲೀಟರ್ ನೀರು ಸಂಗ್ರಹಗಾರಗಳ ನಿರ್ಮಾಣಕ್ಕೆ ಅಡಿಗಲ್ಲು, ಶುದ್ಧ ಕುಡಿಯುವ ನೀರು ಪೂರೈಕೆಗೆ ಕೊಳವೆ ಮಾರ್ಗ ಜೋಡಣೆ, ಒಟ್ಟು ೧೧ ಜನ ವಿಕಲಚೇತನರಿಗೆ ತ್ರೀಚಕ್ರ ವಾಹನ ವಿತರಣೆ, ಪಜಾ (ಎಡಗೈ), ಪಜಾ (ಬಲಗೈ), ಭೋವಿ, ಲಂಬಾಣಿ, ಎಸ್‌ಟಿ ಸಮುದಾಯಗಳಿಗೆ ತಲಾ ಒಂದರಂತೆ ಒಟ್ಟು ನಾಲ್ಕು ಹವಾನಿಯಂತ್ರಿತ ಪ್ರಿಜರ್ ಹಾಗೂ ಶಾಮಿಯಾನ ವಿತರಿಸಲಾಗುತ್ತಿದೆ. ಜಿಲ್ಲಾ ಉಸ್ತೂವಾರಿ ಸಚಿವ ಗೋವಿಂದ ಕಾರಜೋಳ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಸೇರಿದಂತೆ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

ಪುರಸಭೆ ಸದಸ್ಯರಾದ ದೇವಿಂದ್ರ ಕರದಳ್ಳಿ, ಮಹ್ಮದ್ ಗೌಸ್, ಶೋಭಾ ಪವಾರ, ಮರಗಪ್ಪ ಕಲಕುಟಗಿ, ತಿಮ್ಮಯ್ಯ ಪವಾರ ಹಾಗೂ ಕಾಂಗ್ರೆಸ್ ಮುಖಂಡರಾದ ವಿಜಯಕುಮಾರ ಸಿಂಗೆ, ನಾಗೇಂದ್ರ ಜೈಗಂಗಾ, ಶ್ರವಣಕುಮಾರ ಮೌಸಲಗಿ, ಮಹ್ಮದ್ ಆಶ್ರಫ್ ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

4 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

6 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

13 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

13 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

14 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago