ಕಲಬುರಗಿ: ಸಾಮಾಜಿಕ ಕಳಕಳಿ, ಸತ್ಯ, ಪ್ರಾಮಾಣಿಕತೆಯಿಂದ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗಬೇಕು ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಪ್ರಿಯಾಂಕ್ ಎಂ. ಖರ್ಗೆ ಸಲಹೆ ನೀಡಿದರು.
ನಗರದ ಪತ್ರಿಕಾ ಭವನದಲ್ಲಿ ಇಂದು ಸಂಜಯ ಬುಳಕರ್ ಸಂಪಾದಕತ್ವದ ವೈಸ್ ಆಫ್ ಕಲಬುರಗಿ ಕನ್ನಡ ದಿನಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಪತ್ರಕರ್ತರಿಗೆ ಸಾಮಾಜಿಕ ಬದ್ಧತೆಯ ಜೊತೆಗೆ ಪ್ರಬುದ್ಧ ಸಮಾಜ ನಿರ್ಮಾಣದ ಜವಾಬ್ದಾರಿಯೂ ಇರಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಸಮಾಜ ಮತ್ತು ಸರ್ಕಾರದ ಕೊಂಡಿಯಾಗಿ ಕಂಡದ್ದನ್ನು ಕಂಡ ಹಾಗೆ ಬರೆಯುವ ಆ ಮೂಲಕ ಸಮಾಜ ಮತ್ತು ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಜಿಪಂ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ, ಎನ್ ಇ ಕೆಎಸ್ ಆರ್ ಟಿಸಿ ಮಾಜಿ ಅಧ್ಯಕ್ಷ ಭೀಮಣ್ಣ ಸಾಲಿ, ಸಂಪಾದಕರ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಜಿಡಗೆ, ಪತ್ರಕರ್ತ ಗುಣಶೇಖರ ಸ್ವಾಮಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಭವಾನಿಸಿಂಗ್ ಠಾಕೂರ, ಉಪಾಧ್ಯಕ್ಷ ಶಾಮಕುಮಾರ ಶಿಂಧೆ ಇತರರು ವೇದಿಕೆಯಲ್ಲಿದ್ದರು.
ವೈಸ್ ಆಫ್ ಕಲಬುರಗಿ ಪತ್ರಿಕೆಯ ಸಂಪಾದಕ ಸಂಜಯ ಬುಳಕರ್ ಸ್ವಾಗತಿಸಿದರು. ರಮೇಶ ಭಟ್ ನಿರೂಪಿಸಿ ವಂದಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…