ಮೈಸೂರು: ದೇಶದಲ್ಲಿ ನಿಶೇದಾಗಜ್ಞೆ ಮತ್ತು ಸೆಕ್ಷನ್ 144 ಇದ್ಯಾವುದನ್ನೂ ಲೆಕ್ಕಿಸದೆ ನಮ್ಮ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ತೋರಿಸುವ ಉದ್ದೇಶದಿಂದ ಇಂದು ಪೌರತ್ವ ಕಾಯಿದೆಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ಹಿಂದುಳಿದವರ್ಗಗಳ ಜಾಗೃತ ವೇದಿಕೆಯ ರಾಜ್ಯ ಘಟಕದ ಅಧ್ಯಕರಾದ ಕೆ.ಎಸ್.ಶಿವರಾಮು ಮತ್ತು ಪ್ರಗತಿಪರ ಚಿಂತಕರಾದ ಪ್ರೊ. ಮಹೇಶ್ಚಂದಗುರು ರವರು ಪ್ರೊ. ಮಹೇಶ್‌ಚಂದ್ರಗುರು ರವರ ನಿವಾಸದ ಎದುರೇ ಪ್ರತಿಭಟನೆ ಮಾಡುವುದರ ಮೂಲಕ ಪೌರತ್ವ ಕಾಯ್ದೆಯನ್ನು ರದ್ದುಗೊಳಿಸಲು ಒತ್ತಾಯಿಸಿ ಪ್ರತಿರೋಧ ವ್ಯಕ್ತಪಡಿಸಿದರು.
ಮಸೂದೆಯನ್ನು ವಿರೋಧಿಸಿ ಇಂದು ಮೈಸೂರಿನ ಪುರಭವನದ ಆವರಣದಲ್ಲಿ ಬೃಹತ್ ಶಾಂತಿಯುತ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಸರ್ಕಾರ ಏಕಾಏಕಿ 144 ಸೆಕ್ಷನ್ ಜಾರಿಗೊಳಿಸುವುದರ ಮೂಲಕ ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸವನ್ನು ಮಾಡಿತು. ಆ ಮೂಲಕ ನಮ್ಮ ಧ್ವನಿಗಳನ್ನು ಅಡಗಿಸುವ ಕೆಲಸವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವ್ಯವಸ್ಥಿತವಾಗಿ ಮಾಡುತ್ತಿವೆ, ದೇಶದಲ್ಲಿ ಪೌರತ್ವ ಕಾಯ್ದೆ ವಿರುದ್ಧ ಬಹಳ ದೊಡ್ಡಮಟ್ಟದಲ್ಲಿ ವಿರೋಧ ವ್ಯಕ್ತವಾಗಿತಿದೆ ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ರವರ ಸಂವಿಧಾನದ ಆಶಯದ ವಿರುದ್ಧವಾಗಿ ಪೌರತ್ವ ಕಾಯ್ದೆ ಇರುವುದರಿಂದ ಮತ್ತು ಸಂವಿಧಾನವನ್ನು ಬುಡಮೇಲು ಮಾಡುವ ಕೃತ್ಯ ಇದಾಗಿರುವುದರಿಂದ ಈ ಕಾಯ್ದೆಯನ್ನು ಕೇಂದ್ರ ಸರ್ಕಾರ ಈ ಕೂಡಲೇ ರದ್ದುಗೊಳಿಸಿ ಜತ್ಯಾತೀತ ಸಮಾಜದ ನಿರ್ಮಾಣಕ್ಕೆ ಸಹಕರಿಸಬೇಕೆಂದು ಒತ್ತಾಯಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…