ಬಿಸಿ ಬಿಸಿ ಸುದ್ದಿ

ನಿಷೇಧಾಜ್ಞೆಯ ಮೂಲಕ ಹೋರಾಟದ ದಮನ: ಸರ್ಕಾರದ ನೈತಿಕ ಸೋಲು: ಪ್ರತಿಭಟನಾಕಾರರ ಬಂಧನ

ಕಲಬುರಗಿ: ಜನರನ್ನು ಧರ್ಮದ ಆಧಾರದಲ್ಲಿ ಒಡೆಯುವ ಬಿಜೆಪಿ ಸರ್ಕಾರದ ಪಿತೂರಿಗೆ ಜನತೆ ಬಲಿಯಾಗದೆ, ಪೌರತ್ವ ತಿದ್ದುಪಡಿ ಜೊತೆಗೆ ಬೆಲೆಯೇರಿಕೆ, ನಿರುದ್ಯೋಗ ಸಮಸ್ಯೆಗಳ ವಿರುದ್ಧವೂ ಒಂದಾಗಿ ಪ್ರಬಲ ಹೋರಾಟಗಳನ್ನು ಕಟ್ಟಲು ಮುಂದಾಗಬೇಕು ಎಂದು .ಯು.ಸಿ.ಐ. ಕಮ್ಯುನಿಸ್ಟ್ ಪಕ್ಷದ ಪಕ್ಷದ ಜಿಲ್ಲಾ ಕಾರ್ಯದರ್ಶಿಗಳಾದ ಕಾಮ್ರೇಡ್ ಹೆಚ್.ವ್ಹಿ. ದಿವಾಕರ್ ಕರೆ ನೀಡಿದರು.

ಇಂದು ಎಸ್.ಯು.ಸಿ.ಐ. ಕಮ್ಯುನಿಸ್ಟ್ ಪಕ್ಷದ ಪಕ್ಷದ ಜಿಲ್ಲಾ ಕಾರ್ಯದರ್ಶಿಗಳಾದ ದಿವಾಕರ್ ರವರ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ನಗರದ ಎಸ್.ವಿ.ಪಿ. ವೃತ್ತದಲ್ಲಿ ಪ್ರತಿಭಟನೆಜರುಗಿತು ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಜನರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ದಿವಾಕರ್ ಮಾತನಾಡಿ ತೀವ್ರವಾದ ಆರ್ಥಿಕ ಬಿಕ್ಕಟ್ಟು, ಉದ್ಯೋಗ ನಾಶ, ಬೆಲೆ ಏರಿಕೆ, ಶಿಕ್ಷಣದ ಶುಲ್ಕ ಹೆಚ್ಚಳ, ಮಹಿಳೆಯರ ಮೇಲಿನ ಅತ್ಯಾಚಾರಗಳ ವಿರುದ್ಧ ಜಾತಿ, ಕೋಮು, ಧರ್ಮಗಳ ಜನರು ಒಗ್ಗಟ್ಟಾಗಿ ಹೋರಾಟಗಳನ್ನು ಮಾಡುತ್ತಿರುವುದನ್ನು ಕಂಡು ಹೆದರಿದ ಕೇಂದ್ರ ಸರ್ಕಾರವು ತನ್ನ ಒಡೆದು ಆಳುವ ಕುತಂತ್ರಕ್ಕೆ ಅನುಗುಣವಾಗಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತರಾತುರಿಯಲ್ಲಿ ಜಾರಿಗೆ ತಂದಿದೆ ಎಂದರು.

ಆದರೆ ಈ ಕಾಯ್ದೆಯ ವಿರುದ್ಧವೂ ಕೂಡ ದೆಹಲಿಯ ವಿದ್ಯಾರ್ಥಿಗಳು ಸೇರಿದಂತೆ ದೇಶದಾದ್ಯಂತ ಧರ್ಮನಿರಪೇಕ್ಷತೆಯಲ್ಲಿ, ಕೋಮುಸೌಹಾರ್ದತೆಯಲ್ಲಿ ನಂಬಿಕೆಯುಳ್ಳ ಜನತೆ ಹೋರಾಟಗಳನ್ನು ಕಟ್ಟುತ್ತಿದ್ದಾರೆ. ಇಂತಹ ಪ್ರತಿರೋಧವನ್ನು ನಿರೀಕ್ಷಿಸದ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ, ಬಿಜೆಪಿ ಪಕ್ಷ ಮತ್ತು ಕೇಂದ್ರ, ರಾಜ್ಯ ಸರ್ಕಾರಗಳು ಭಯಬೀತವಾಗಿವೆ. ಹಾಗಾಗಿಯೇ ಜನ ಹೋರಾಟವನ್ನು ಹತ್ತಿಕ್ಕುವುದಕ್ಕಾಗಿ ನಿಷೇಧಾಜ್ಞೆಯನ್ನು ಹೇರುವ ದಮನಕಾರಿ ಕ್ರಮಕ್ಕೆ ಬಿಜೆಪಿ ಸರ್ಕಾರ ಮುಂದಾಗಿದೆ. ಇದು ಸರ್ಕಾರದ ಸೋಲಾಗಿದ್ದು ಹೋರಾಟಪರ ಜನತೆಯ ನೈತಿಕ ಗೆಲುವೆಂದು ನಾವು ಭಾವಿಸುತ್ತೇವೆ. ಇಡೀ ದೇಶದ ಹೋರಾಟಗಾರರೊಂದಿಗೆ ನಾವಿದ್ದೇವೆ ಎಂದು ಈ ಸಂದರ್ಭದಲ್ಲಿ ಹೇಳಿದರು.

ರಾಜ್ಯ ಸರ್ಕಾರವು ತಕ್ಷಣವೇ ಈ ನಿಷೇಧಾಜ್ಞೆಯನ್ನು ಹಿಂತೆಗೆದುಕೊಂಡು ಜನಗಳಿಗೆ ಮುಕ್ತವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಅವಕಾಶವನ್ನು ಕಲ್ಪಿಸಬೇಕೆಂದು ಒತ್ತಾಯಿಸಿದರು.

ಪೌರತ್ವ ತಿದ್ದುಪಡಿ ಕಾಯಿದೆ ಸಿ.ಎ.ಎ. ಮತ್ತು ಎನ್.ಆರ್.ಸಿ ಗಳ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳಿಗೆ ಹೆದರಿ ರಾಜ್ಯ ಬಿಜೆಪಿ ಸರ್ಕಾರವು ಮೂರು ದಿನಗಳ ಕಾಲ ಇಡೀ ರಾಜ್ಯದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಅಪ್ರಜಾತಾಂತ್ರಿಕ ಕ್ರಮವನ್ನು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಕಲಬುರಗಿ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸಿದ್ದು, ಕಾಯ್ದೆ ಹಿಂದೆಕೆ ಪಡೆಯುಬೇಕೆಂದು ಪ್ರತಿಭಟನೆ ನಡೆಸಿ ಒತ್ತಾಯಿಸಿದೆ ಅಲ್ಲದೇ ಪ್ರತಿಭಟನೆ ನಿರತ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಹಲವರ ಬಂಧನ: ಪಕ್ಷದ ನಾಯಕರಾದ ಹೆಚ್.ವ್ಹಿ. ದಿವಾಕರ್ ರವರನ್ನು ಬಂಧಿಸಿದ ಪೋಲಿಸರು ಹಲವು ನಾಯಕರನ್ನು ವಶಕ್ಕೆ ತೆಗೆದುಕೊಂಡರು. ಎಸ್. ಎಂ. ಶರ್ಮಾ., ವಿ.ಜಿ.ದೇಸಾಯಿ, ಮಹೇಶ ನಾಡಗೌಡ, ಹಣಮಂತ ಎಸ್. ಎಚ್., ನಿಂಗಣ್ಣ ಜಂಬಗಿ, ಭೀಮಾಶಂಕರ್ ಪಾಣೆಗಾಂವ, ಗಣಪತರಾವ್ ಕೆ. ಮಾನೆ, ಜಗನ್ನಾಥ ಎಸ್.ಎಚ್, ರಾಜೆಂದ್ರ ಅತನೂರ, ತುಳಜಾರಾಮ, ಅಭಯಾ, ಸ್ನೇಹಾ, ಶಿಲ್ಪಾ ಬಿ.ಕೆ, ಮಂಜುಳಾ, ಗೋದಾವರಿಯವರನ್ನೊಳಗೊಂಡು ನೂರಾರು ಸಂಖ್ಯೆಯ ಕಾರ್ಯಕರ್ತರು ಬಂದನಕ್ಕೊಳಗಾದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

3 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

19 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

21 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago