ಬಿಸಿ ಬಿಸಿ ಸುದ್ದಿ

ತಡಕಲ್ ರುಕ್ಮಯ್ಯ ಗುತ್ತೇದಾರ ಪುಣ್ಯ ಸ್ಮರಣೆ ನಾಳೆಯಿಂದ

ಆಳಂದ: ತಾಲೂಕಿನ ತಡಕಲ್ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಶತಾಯುಷಿ ಶಾಸಕ ಸುಭಾಷ ಗುತ್ತೇದಾರ ಅವರ ತಂದೆ ಆಗಿರುವ ದಿ. ರುಕ್ಮಯ್ಯ ಸಾಬಯ್ಯ ಗುತ್ತೇದಾರ ಅವರ ೭ನೇ ಪುಣ್ಯ ಸ್ಮರಣೋತ್ಸವ ನಿಮಿತ್ತ ಡಿ.೨೨ರಿಂದ ಎರಡು ದಿನಗಳ ಕಾಲ ತಡಕಲ್ ಗ್ರಾಮದಲ್ಲಿ ವಿದ್ಯಾಯಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಸುಭಾಷ ಗುತ್ತೇದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ.೨೨ರಂದು ಐನಾಪೂರದ ಮಲ್ಲಯ್ಯಾ ಶಾಸ್ತ್ರೀ ಅವರಿಂದ ಕೀರ್ತನೆ, ಗೌಡಗಾಂವದ ಶಿವರುದ್ರಯ್ಯ ಸ್ವಾಮಿ ಅವರಿಂದ ಸಂಗೀತ ಸೌರಭ ಹಾಗೂ ಭಜನೆ ಜಾಗರಣೆ ಜರುಗಲಿದೆ. ೨೩ರಂದು ನಡೆಯಲಿರುವ ರೈತದಿನಾಚರಣೆ, ಧರ್ಮ ಸಭೆ ಹಾಗೂ ಕೃಷಿ ಸಂಚನದ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ನಂದಗಾಂವ ವಿಕರ‍್ತ ಮಠದ ಶ್ರೀರಾಜಶೇಖರ ಮಹಾಸ್ವಾಮಿಗಳು ವಹಿಸುವರು. ಕವಿತಾಳದ ರೈತ ಮಹಿಳೆ ಕವಿತಾ ಉ. ಮಿಶ್ರಾ ಅವರಿಂದ ಕೃಷಿ ಕುರಿತು ವಿಶೇಷ ಉಪನ್ಯಾಸ ನೀಡುವರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾರಕೂಡ ಮಠದ ಡಾ. ಚನ್ನವೀರ ಶಿವಾಚಾರ್ಯರು ಸಮಾರಂಭವನ್ನು ಉದ್ಘಾಟನೆ ನೆರವೇರಿಸುವರು. ಶ್ರೀಗಳಿಗೆ ವಿಶೇಷ ಸನ್ಮಾನ ಆಯೋಜಿಸಲಾಗಿದೆ. ಮುತ್ತ್ಯಾನ ಬಬಲಾದ ಮಠದ ಶ್ರೀ ಗುರುಪಾದಲಿಂಗ ಮಹಾಶಿವಯೋಗಿಗಳ ಘನ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭಕ್ಕೆ ಜಿಡಗಾ ಮಠದ ಡಾ. ಮುರುಘರಾಜೇಂದ್ರ ಮಹಾಸ್ವಾಮಿಗಳು, ಮಾಡಿಯಾಳದ ಶ್ರೀ ಒಪ್ಪತ್ತೇಶ್ವರ ಮಹಾಸ್ವಾಮಿಗಳು, ಖಜೂರಿ ಮಠದ ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು, ಮಾದನಹಿಪ್ಪರಗಾದ ಶ್ರೀ ಅಭಿನವ ಶಿವಲಿಂಗ ಮಹಾಸ್ವಾಮಿಗಳು, ಚಿನ್ನಯಗಿರಿಯ ಶ್ರೀ ವೀರಮಹಾಂತ ಶಿವಾಚಾರ್ಯರು, ಯಳಸಂಗಿಯ ಶ್ರೀ ಪರಮಾನಂದ ಮಹಾಸ್ವಾಮಿಗಳು, ತಡಕಲ್‌ದ ಶ್ರೀ ಸಿದ್ಧಮಲ್ಲ ಶಿವಾಚಾರ್ಯರು, ಕೇಸರ ಜವಳಗಾದ ಶ್ರೀ ವೀರಂತೇಶ್ವರ ಮಹಾಸ್ವಾಮಿಗಳು, ಬಂಗರಗಾದ ಶ್ರೀ ಗುರುಲಿಂಗ ಶಿವಾಚಾರ್ಯರು, ಕಿಣ್ಣಿಸುಲ್ತಾನದ ಶ್ರೀ ಶಿವಶಾಂತಲಿಂಗ ಶಿವಾಚಾರ್ಯರು ಆಗಮಿಸಲಿದ್ದಾರೆ.

ಸಮಾರಂಭಕ್ಕೆ ರಾಜಕೀಯ ಗಣ್ಯರು, ಕಲಾವಿದರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ ಶಾಸಕರು, ನೆರೆ ಹೊರೆಯ ಗ್ರಾಮಗಳ ಗ್ರಾಮಸ್ಥರು ಪಾಲ್ಗೊಂಡು ಕಾರ್ಯಕ್ರಮದ ಲಾಭ ಪಡೆದುಕೊಳ್ಳಬೇಕು ಎಂದು ಕೋರಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

16 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

18 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago