ಸುರಪುರ: ೨೦೧೮-೧೯ನೇ ಸಾಲಿನ ಪ್ರಧಾನ ಮಂತ್ರಿ ಗ್ರಾಮೀಣ ಆವಾಸ ಯೋಜನೆ ಅಡಿ ಮನೆಗಳ ನಿರ್ಮಾಣದಲ್ಲಿ ಗುರಿ ಸಾಧನೆಗೈದು ಪ್ರಥಮ ಸ್ಥಾನ ಗಳಿಸಿದ್ದಕ್ಕಾಗಿ ಇಲ್ಲಿನ ಸುರಪುರ ತಾಲೂಕು ಪಂಚಾಯತಿಯು (ಬ್ಲಾಕ್) ಭಾರತ ಸರಕಾರದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆಯಿಂದ ನೀಡಲಾಗುವ ರಾಷ್ಟ್ರಮಟ್ಟದ ಪ್ರಶಸ್ತಿಗೆ ಪಾತ್ರವಾಗಿದೆ.
ದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಗ್ರಾಮೀಣ ಅಭಿವೃದ್ಧಿ ಪಂಚಾಯತ ರಾಜ್ ಇಲಾಖೆಯ ರಾಜ್ಯ ಸಚಿವೆ ನಿರಂಜನ್ ಸಾಧ್ವಿ ಅವರು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಅಂಬ್ರೇಶ್ ಅವರಿಗೆ ಪ್ರಶಂಸೆ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು, ಇಲಾಖೆಯ ಕೇಂದ್ರ ಸಚಿವ ನರೇಂದ್ರಸಿಂಗ್ ತೋಮರ್ ಹಾಗೂ ಇಲಾಖೆಯ ಕಾರ್ಯದರ್ಶಿ ಅಮರಸಿಂಹ್ ಸಿಂಗ್ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
೨೦೧೮-೧೯ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಗ್ರಾಮೀಣ ಆವಾಸ ಯೋಜನೆಯನ್ನು ಅನುಷ್ಠಾನಗೊಳಿಸಿ, ಗ್ರುಪ್-೨ ಇತರ ರಾಜ್ಯಗಳ ವಿಭಾಗದಲ್ಲಿ ನಿಗದಿತ ಗುರಿಯನ್ನು ಸಾಧನೆಗೈದು ಮನೆಗಳ ನಿರ್ಮಾಣವನ್ನು ಪೂರ್ತಿಗೊಳಿಸುವ ಮೂಲಕ ಪ್ರಥಮ ಸ್ಥಾನ ಗಳಿಸಿದ್ದಕ್ಕಾಗಿ ಈ ಪ್ರಶಸ್ತಿಯು ಲಭಿಸಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…