ಯಾದಗಿರಿ: ಜಿಲ್ಲೆಯ ಹಿರಿಯ ಮಕ್ಕಳ ಸಾಹಿತಿ, ಪತ್ರಕರ್ತ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪಡೆದ ಚಂದ್ರಕಾಂತ ಕರದಳ್ಳಿಯವರ ಅಕಾಲಿಕ ನಿಧನಕ್ಕೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದವತಿಯಿಂದ ಶ್ರದ್ಧಾಂಜಲಿ ಸಭೆಯನ್ನ ಶುಕ್ರವಾರದಂದು ಪತ್ರಿಕಾ ಭವನದಲ್ಲಿ ಏರ್ಪಡಿಸಲಾಗಿತ್ತು.
ದಿ. ಕರದಳ್ಳಿಯವ ಭಾವಚಿತ್ರಕ್ಕೆ ಜಿಲ್ಲಾ ಅಧ್ಯಕ್ಷ ಬಿ.ಎಂ.ಜಗದೀಶ ಮಾಲರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರದಳ್ಳಿಯವರು ಶಿಕ್ಷಕ ವೃತ್ತಿಯಲ್ಲಿದ್ದರೂ, ಸಾಹಿತ್ಯದಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ಅನೇಕ ಪುಸ್ತಕಗಳನ್ನು ರಚನೆ ಮಾಡಿದ್ದಾರೆ. ಅಲ್ಲದೆ ಅವರ ಒಬ್ಬ ಪತ್ರಕತ್ರಾಗಿಯೂ ಸೇವೆ ಸಲ್ಲಿಸಿದ್ದನ್ನು ಮರೆಯುವತಿಲ್ಲ. ಅವರ ಆಕಷ್ಮಿಕ ಅಗಲಿಕೆಯಿಂದ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಂತಪ ಸೂಚಿಸಿದರು.
ಇದೇ ಸಂದರ್ಭದಲ್ಲಿ ಸಂಘದ ರಾಜ್ಯ ಸದಸ್ಯರಾದ ಅನಿಲ ದೇಶಪಾಂಡೆ ಅವರು ಮಾತನಾಡಿ, ದಿ.ಕರದಳ್ಳಿಯವರ ಒಡನಾಡಿ, ಅವರ ಸಾಹತ್ಯ ರಚನೆ ಸೇರಿದಂತೆ ಮಕ್ಕಳ ಬಗ್ಗೆ ಇರುವ ಕಳಕಳಿಯ ಬಗ್ಗೆ ಗಮನ ಸೆಳೆದರು. ಅವರ ಅಗಲಿಕೆ ಸಗರನಾಡಿಗೆ ತುಂಬಲಾರದ ನಷ್ಟವಾಗಿದೆ. ಅವರ ಹಾಕಿಕೊಟ್ಟ ಮಾರ್ಗದರ್ಶದಲ್ಲಿ ಮುಂದಿನ ಪೀಳ್ಗೆ ನಡೆದುಕೊಂಡು ಹೋಗಬೇಕು ಎಂದು ತಿಳಿಸಿ, ಅವರ ಅಗಲಿಕೆ ದುಃಖವನ್ನು ಕುಟುಂಬಕ್ಕೆ ಸಹಿಸುವ ಶಕ್ತಿ ದಯಪಾಲಿಸಲಿ ಎಂದು ಶ್ರದ್ಧಾಂಜಲಿ ಅರ್ಪಿಸಿದರು.
ಸಂಪಾದಕ ಶಂಕರಪ್ಪ ಅರುಣಿ, ಪತ್ರಕರ್ತರಾದ ಅನಿಲ ಬಾಸುದೆ, ಕುಮಾರಸ್ವಾಮಿ ಅವರು ಮಾತನಾಡಿದರು, ಸಂಘದ ಪ್ರಧಾನ ಕಾರ್ಯದರ್ಶಿ ರವೀಂದ್ರ ಕುಲಕರ್ಣಿ ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸಿದ್ದಪ್ಪ ಲಿಂಗೇರಿ, ರೂಪೇಶ ವಿಲ್ಲಿಕರ ಹಾಗೂ ರನಿಕಾಂತ ಸೇರಿದಂತೆ ಇತರ ಪತ್ರಕರ್ತರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…