ಬಿಸಿ ಬಿಸಿ ಸುದ್ದಿ

ಶಾಂತಿ ಬದುಕಿಗೆ ಧರ್ಮಾಚರಣೆ ಅಗತ್ಯ: ರಂಭಾಪುರಿ ಜಗದ್ಗರುಗಳು

ಯಡ್ರಾಮಿ: ಭೌತಿಕ ಬದುಕಿನಲ್ಲಿ ಸಂಪತ್ತು ಎಷ್ಟಿದ್ದರೂ ಶಾಂತಿ ನೆಮ್ಮದಿ ಸಿಗದು. ಮಾನವ ಜೀವನ ಉನ್ನತಿಗೆ ಧರ್ಮವೊಂದೇ ಆಶಾ ಕಿರಣ. ಶಾಂತಿ ಮತ್ತು ಸಾಮರಸ್ಯ ಬದುಕಿಗೆ ಧರ್ಮಾಚರಣೆಯ ಅಗತ್ಯವಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ್ ಜಗದ್ಗುರುಗಳು ಹೇಳಿದರು.

ತಾಲ್ಲೂಕಿನ ಮಾಗಣಗೇರಿ ಬೃಹನ್ಮಠದ ಜಾತ್ರಾ ಮಹೊತ್ಸವ, ಲಿಂ. ಶ್ರೀ ಗುರು ಚನ್ನವೃಷಬೇಂದ್ರ-ಅಯ್ಯಪ್ಪಯ್ಯ ಶ್ರೀಗಳವರ ಪುಣ್ಯ ಸ್ಮರಣೋತ್ಸವ ಅಂಗವಾಗಿ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಜನಸಮುದಾಯದಲ್ಲಿ ಆದರ್ಶ ಮೌಲ್ಯಗಳನ್ನು ಬೆಳೆಸುವ ಅಗತ್ಯವಿದೆ. ಸತ್ಯ ಸಂಸ್ಕೃತಿ ಸಭ್ಯತೆ ಸಂಸ್ಕಾರ ಸದ್ವಿನಯ ಗುಣಗಳನ್ನು ಬೆಳೆಸಬೇಕಾಗಿದೆ ಎಂದರು.

ಈ ದಾರಿಯಲ್ಲಿ ಮೊದಲಿನಿಂದಲೂ ಗುರು ಮಠಗಳು ಕಾರ್ಯ ನಿರ್ವಹಿಸುತ್ತಾ ಬಂದಿವೆ. ವೀರಶೈವ ಧರ್ಮ ಸಕಲರಿಗೂ ಹಿತವನ್ನು ಬಯಸುವುದಾಗಿದೆ ಶ್ರೀ ಜಗದ್ಗುರು ರೇಣುಕಾಚಾರ್ಯರು ಅಹಿಂಸಾದಿ ಧ್ಯಾನ ಪರ್ಯಂತರವಾದ ದಶ ವಿಧ ಧರ್ಮ ಸೂತ್ರಗಳನ್ನು ಬೋಧಿಸಿ ಸಕಲರನ್ನು ಉದ್ಧರಿಸಿದ್ದಾರೆ. ಹುಟ್ಟು ಸಾವುಗಳು ಸಹಜವಾದರೂ ಬಾಳಿ ಬದುಕುವ ಮಧ್ಯದ ಬಾಳು ಸಮೃದ್ಧಗೊಳ್ಳಲು ಶ್ರಮಿಸಬೇಕಾಗುತ್ತದೆ. ಆಧುನಿಕತೆ ಹೆಸರಿನಲ್ಲಿ ಧರ್ಮ ಸಂಸ್ಕೃತಿಗಳು ನಾಶಗೊಳ್ಳಬಾರದು. ಮನದ ಶಾಂತಿ ಜೀವನ ಶ್ರೇಯಸ್ಸಿಗೆ ಧರ್ಮವೇ ಮೂಲವಾಗಿದೆ ಎಂದ ಅವರು ಮಾಗಣಗೇರಿ ಬೃಹನ್ಮಠ ಈ ಭಾಗದಲ್ಲಿ ಧರ್ಮ ಮತ್ತು ಸಮಾಜ ಮುಖಿಯಾಗಿ ಕಾರ್ಯ ಮಾಡುತ್ತಾ ಬಂದಿದೆ. ಇಂದಿನ ಡಾ. ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಸರ್ವ ಜನಾಂಗದ ಉನ್ನತಿಗೆ ಶ್ರಮಿಸುತ್ತಿರುವುದು ತಮಗೆ ಸಂತಸ ತಂದಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿದ್ದ ಜೇವರ್ಗಿ ಶಾಸಕ ಡಾ. ಅಜಯಸಿಂಗ್ ಅವರು ಮಾತನಾಡಿ ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ಮಠಗಳ ಕೊಡುಗೆ ಅಮೂಲ್ಯವಾದುದೆಂದರು. ಹಲವಾರು ಗಣ್ಯರು ದಾನಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ನೇತೃತ್ವ ವಹಿಸಿದ್ದ ಮಾಗಣಗೇರಿ ಬೃಹನ್ಮಠದ ಡಾ. ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಧರ್ಮದ ತಳಹದಿಯ ಮೇಲೆ ಜೀವನ ಬೆಳೆಸಿಕೊಳ್ಳಬೇಕು. ಸಂಸ್ಕಾರ ಸಂಸ್ಕೃತಿ ಇಲ್ಲದ ಬದುಕು ವ್ಯರ್ಥ. ಶ್ರೀ ಜಗದ್ಗುರು ರೇಣುಕಾಚಾರ್ಯರು ಬೋಧಿಸಿದ ಆದರ್ಶ ಮೌಲ್ಯಗಳನ್ನು ಪರಿಪಾಲಿಸಿಕೊಂಡು ಬರಬೇಕೆಂದರು.

ಸಮಾರಂಭದಲ್ಲಿ ನರಸಾಪುರದ ಮರುಳಸಿದ್ಧ ಶಿವಾಚಾರ್ಯರು, ನಿಡಗುಂದಿಯ ರುದ್ರಮುನಿ ಶಿವಾಚಾರ್ಯರು, ಕಡಕೋಳದ ರುದ್ರಮುನಿ ಶಿವಾಚಾರ್ಯರು, ನೀಲಗಲ್ಲಿನ ಪಂಚಾಕ್ಷರಿ ಶಿವಾಚಾರ್ಯರು, ಮಳ್ಳಿ ಹಿರೇಮಠದ ರುದ್ರಮುನಿ ಶಿವಾಚಾರ್ಯರು, ಕೆಂಭಾವಿಯ ಚನ್ನಬಸವಸ್ವಾಮಿಗಳು ಸೇರಿದಂತೆ ಅನೇಕ ಶ್ರೀಗಳು ಪಾಲ್ಗೊಂಡಿದ್ದರು. ಸಮಾರಂಭಕ್ಕೂ ಮುನ್ನ ಗ್ರಾಮದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಮಹೋತ್ಸವ ಸಡಗರ ಸಂಭ್ರಮದಿಂದ ಜರುಗಿತು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

2 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

12 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

12 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

12 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago