ಬಿಸಿ ಬಿಸಿ ಸುದ್ದಿ

ರಾಜನಹಳ್ಳಿಯಲ್ಲಿ ೨ನೇ ಮಹರ್ಷಿ ವಾಲ್ಮೀಕಿ ಜಾತ್ರೆ: ಜೇವರ್ಗಿಯಲ್ಲಿ ಸಿದ್ಧತಾ ಸಭೆ

ಜೇವರ್ಗಿ: ಎರಡನೇ ಮಹರ್ಷಿ ವಾಲ್ಮಿಕಿ ಜಾತ್ರೆ, ಶ್ರೀಮಠದ ೨೨ನೇ ವಾರ್ಷಿಕೋತ್ಸವ ಲಿಂಗೈಕ್ಯ ಜಗದ್ಗುರು ಶ್ರೀ ಪುಣ್ಯಾನಂದಪುರಿ ಮಹಾಸ್ವಾಮಿಜಿಯವರ ೧೩ನೇ ವರ್ಷದ ಪುಣ್ಯಾರಾಧನೆ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ್ ಮಹಾಸ್ವಾಮಿಜಿಯರವರ ೧೨ನೇ ವರ್ಷದ ಪಟ್ಟಾಧಿಕಾರ ಮಹೋತ್ಸವಕ್ಕೆ ಯಡ್ರಾಮಿ ಹಾಗೂ ಜೇವರ್ಗಿ ತಾಲ್ಲೂಕಿನ ಜನತೆ ಭಾಗವಹಿಸಬೇಕೆಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಸಿ ಕರೆ ನೀಡಿದರು.

ಕಳೆದ ವರ್ಷ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದ್ದು, ಸುಮಾರು ೩ ಲಕ್ಷ ಜನ ಸೇರಿದ್ದು, ಈ ವರ್ಷ ರಾಜನಹಳ್ಳಿಯಲ್ಲಿ ಪೆಬ್ರವರಿ ೮ ಮತ್ತು ೯ರಂದು ನಡೆಯುವ ಕಾರ್ಯಕ್ರಮಕ್ಕೆ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮಲು ಅವರ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಲಿದೆ. ಸುಮಾರು ೧೦ ಲಕ್ಷಕ್ಕೂ ಅಧಿಕ ಜನ ಸೇರುವ ನೀರಿಕ್ಷೆ ಇದ್ದು, ಈ ಒಂದು ಕಾರ್ಯಕ್ರಮಕ್ಕೆ ರಾಜ್ಯದ ವಾಲ್ಮೀಕಿ ಸಮುದಾಯದ ಎಲ್ಲ ಜನರು ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಪ್ರಸನ್ನಾನಂದ್ ಮಹಾಸ್ವಾಮೀಜಿ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಜಾತ್ರಾ ಮಹೋತ್ಸವದ ಭಿತ್ತಿ ಪತ್ರಗಳು ಬಿಡುಗಡೆಗೊಳಿಸಿದರು.

ಜೇವರ್ಗಿ ತಾಲ್ಲೂಕು ಅಧ್ಯಕ್ಷ ಈರಘಂಟೆಪ್ಪ ವಡಗೇರಾ, ಯಡ್ರಾಮಿ ತಾಲ್ಲೂಕು ಅಧ್ಯಕ್ಷ ವೆಂಟಕೇಶ್ ಬಳಬಟ್ಟಿ, ತಾಯಪ್ಪ ನಾಯಕ್, ಶ್ರವಣಕುಮಾರ್ ಡಿ. ನಾಯಕ್, ಹಣಮಂತ್ರಾಯ್ ಹವಲ್ದಾರ್, ಸಾಯಬಣ್ಣ ಚಿಗರಹಳ್ಳಿ, ವಿಶ್ವನಾಥ್ ಸುಭೇದಾರ್, ಸಿದ್ದಣ್ಣ ಹಾಲಗಡ್ಲಾ, ದೇವು ಚನ್ನೂರ್, ಶೇಖರ್ ದೊರೆ, ಚಂದ್ರು ಮಲ್ಲಾಬಾದ್, ನಿಂಗು ಅವರಾದ್, ಮರೆಪ್ಪ ಹಸನಾಪೂರ್ ಮುಂತಾದವರು ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago