ಚಿಂಚೋಳಿ: ಕೋಡ್ಲಿ ಗೇಟ್ ಕಾಲೋನಿಯಲ್ಲಿ ಕುಡಿಯುವ ನೀರು ಹಾಗೂ ವಿವಿಧ ಮುಲಭೂತ ಸೌಲಭ್ಯಕ್ಕೆ ಒತ್ತಾಯಿಸಿ ಕರ್ನಾಟಕ ಪ್ರಾಂತ್ಯ ರೈತ ಸಂಘದ ನೇತೃತ್ವದಲ್ಲಿ ಖಾಲಿ ಕೊಡಗಳೊಂದಿಗೆ ಕೋಡ್ಲಿ ಗ್ರಾಮ ಪಂಚಾಯತ್ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ಉದ್ದೇಶಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ಶರಬಸಪ್ಪ ಮಮಶೇಟಿ, ಕಾಲೋನಿಯಲ್ಲಿ ಕುಡಿಯುವ ಹನಿ ನೀರಿಗಾಗಿ ಕೋಡ ಹಿಡಿದುಕೊಂಡು, ಜನರು ಪರದಾಡುವಂತಾಗಿದ್ದು, ಹಲವಾರು ಬಾರಿ ಗ್ರಾಮ ಪಂಚಾಯತ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.
ಗ್ರಾಮ ಪಂಚಾಯತಿಗೆ ಕುಡಿಯುವ ನೀರಿಗಾಗಿ ಸಾಕಷ್ಟು ಹಣ ಬಿಡುಗಡೆಯಾಗಿದೆ ಎಂದು ಪತ್ರಿಕೆಯಲ್ಲಿ ನೋಡಿ ಖುಷಿ ಪಡುವಂತಾಗಿದೆ. ಪೈಪ್ ಒಡೆದು ಹೋಗಿದೆ ಅಲ್ಲಿ ನಿಂತಿರುವ ಚರಂಡಿ ನೀರು ಪುನ: ಅದೇ ಪೈಪಿನಲ್ಲಿ ಸೇರಿ ಜನರು ಅದೇ ನೀರು ಕುಡಿವಂತಾಗಿದೆ ಎಂದರು.
ಗೇಟ್ ಕಾಲೋನಿಯ ನಾಗರಿಕರು ಕುಡಿಯುವ ನೀರಿಗಾಗಿ ಗೇಟಿನಿಂದ ಅಂದಾಜು 1,ಕೀ.ಮೀ, ದೂರದಿಂದ ಎತ್ತಿನ ಬಂಡಿ, ಸೈಕಲ್, ಮೇಲೆ ನೀರು ತಂದು ಜೀವನ ಸಾಗಿಸುತ್ತಿದ್ದು, ಕೂಡಲೇ ಮೂಲ ಭೂತ ಸಮಸ್ಯೆಗಳನ್ನು ಪರಿಹರಿಸಬೇಕೆಂದು ತಾಲ್ಲೂಕು ಪಂಚಾಯತ್, ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರ ನೀಡಿ ಅಗ್ರಹಿಸಿದರು.
ಈ ಸಂದರ್ಭದಲ್ಲಿ ರೇವಣಸಿದ್ದ ಬುಬಲಿ, ಗುರುನಂದೇಶ ಕೋಣಿನ್, ಅಲೀಮ್ ನಾಯ್ಕೋಡಿ, ಶಿವಕುಮಾರ ಪ್ಯಾಟಿಮನಿ, ಕಾಂತು ಉಳ್ಳಾಗಡ್ಡಿ, ಟಿಪ್ಪು ಸುಲ್ಯಾನ ಸಂಘದ ಅಧ್ಯಕ್ಷ ಅಲಿ ನಾಯ್ಕೋಡಿ, ವೀರಣ್ಣ ನಿಂಗದಳ್ಳಿ, ಜಿ ಪರಮೇಶ್ವ ಕಾಂತಾ, ರೇವಣಸಿದ್ದಪ್ಪ ತೆಳಗಿನಡೊಡ್ಡಿ, ಮಂಗೇಶ ಶೀರೂರು, ಬಂಗಾರಮ್ಮ ಗುತ್ತೇದಾರ, ಶಾಂತಮ್ಮ ಗುತ್ತೇದಾರ, ರಮೇಶ ಕಪ್ಪರಗಿ, ಶರಣು ಹೊಣ್ಣುರು ಸೇರಿದಂತೆ ಗ್ರಾಮದ ನಿವಾಸಿಗಳು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…