ಕಲಬುರಗಿ: ಸಮಾಜದ ಒಳತಿಗಾಗಿ ನಿರಂತರವಾಗಿ ಹೋರಾಟ ಮಾಡುವ ಮೂಲಕ ನ್ಯಾಯವನ್ನು ಒದಗಿಸಿಕೊಡುವ ಸಮಾಜಮುಖಿ ಹೋರಾರಗಾರರಿಗೆ ಪ್ರೋತ್ಸಾಹ ನೀಡಿದರೆ, ಅವರಿಗೆ ಹೆಚ್ಚಿನ ಸ್ಪೂರ್ತಿ ದೊರೆತು ನ್ಯಾಯವನ್ನು ಒದಗಿಸಿಕೊಡಲು ಸಾಧ್ಯವಾಗುತ್ತದೆಯೆಂದು ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ ಅಭಿಮತ ವ್ಯಕ್ತಪಡಿಸಿದರು.
ಅವರು ನಗರದ ತಿಮ್ಮಾಪುರಿ ಚೌಕ್ ಸಮೀಪದಲ್ಲಿರುವ ’ಸಿದ್ಧರಾಮೇಶ್ವರ ಪಿಯು ಕಾಲೇಜ್’ನಲ್ಲಿ, ’ಕನ್ನಡ ಜಾನಪದ ಪರಿಷತ್’ ಜಿಲ್ಲಾ ಘಟಕದ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾದ ’ಸಾಧಕರಿಗೆ ಸತ್ಕಾರ ಸಮಾರಂಭ’ದಲ್ಲಿ ಗೌರವ ಸ್ವೀಕರಿಸಿ ಮಾತನಾಡುತ್ತಿದ್ದರು. ಹೋರಾಟಗಾರರಲ್ಲಿ ಸಮಾಜ ಒಳಿತನ್ನು ಬಯಸುವ ಗುಣವಿರಬೇಕು. ಯಾವುದೇ ಆಶೆ-ಆಮಿಷೆಗಳಿಗೆ ಒಳಗಾಗದೇ ನಿಷಾರ್ಥವಾಗಿ ಅನ್ಯಾಯದ ವಿರುದ್ಧ ಹೋರಾಡಬೇಕು. ಇತ್ತೀಚಿನ ದಿವಸಗಳಲ್ಲಿ ಪ್ರಶಸ್ತಿ ಹಾಗೂ ಗೌರವಗಳಿಗಾಗಿ ಲಾಬಿ ಮಾಡಿ ಪಡೆಯುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ಸರ್ಕಾರ ನೈಜ ಹೋರಾಟಗಾರರನ್ನು ಗುರ್ತಿಸಿ, ಪ್ರೋತ್ಸಾಹಿಸಬೇಕು. ನಮ್ಮ ಭಾಗದ ಯಾವುದೇ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡಲು ನಾನು ಯಾವಾಗಲೂ ನಿರಂತರವಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಇದೇ ಸಂದರ್ಭದಲ್ಲಿ ಹೇಳಿದರು.
ಪರಿಷತ್ ಗೌರವ ಅಧ್ಯಕ್ಷ ಎಸ್.ಎಂ.ಪಟ್ಟಣಕರ್, ಅಧ್ಯಕ್ಷ ಎಂ.ಬಿ.ನಿಂಗಪ್ಪ ಮಾತನಾಡಿ, ದಸ್ತಿ ಎಂದರೆ ಹೋರಾಟಕ್ಕೆ ಪರ್ಯಾಯ ಪದವಾಗಿದ್ದಾರೆ. ಕಳೆದ ಎರಡು ದಶಕಗಳಿಂದ ನಮ್ಮ ಭಾಗದ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸಿಕೊಡುವಲ್ಲಿ ಶ್ರಮಿಸಿದ್ದಾರೆ. ಅವರ ಸೇವೆಯನ್ನು ಗುರ್ತಿಸಿ ಪರಿಷತ್ ಅವರನ್ನು ಗೌರವಿಸುವ ಕಾರ್ಯ ಹಮ್ಮಿಕೊಂಡಿದೆಯೆಂದರು.
ಕಾರ್ಯಕ್ರಮದಲ್ಲಿ ಪರಿಷತ್ ಕಾರ್ಯದರ್ಶಿ ಪ್ರೊ.ಎಚ್.ಬಿ.ಪಾಟೀಲ, ಕಾಲೇಜಿನ ಪ್ರಾಂಶುಪಾಲ ಪ್ರೊ.ದೇವಿಂದ್ರಪ್ಪ ವಿಶ್ವಕರ್ಮ, ಮೆಹಬೂಬ್ ಸುಭಾನಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಮೌಲಾಸಾಬ್ ತಡಕಲ್, ಪ್ರಮುಖರಾದ ಮಹಮ್ಮದ ಜಮೀರ್, ದೇವರಾಜ ಕನ್ನಡಗಿ ಸೇರಿದಂತೆ ಹಲವರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…