ನಾಗಮಂಗಲ: ಯುವಕರು ಮಾನಸಿಕ ಮತ್ತು ದೈಹಿಕವಾಗಿ ಸದೃಢರಾದಾಗ ದೇಶವು ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ತಾಲ್ಲೂಕು ದೈಹಿಕ ಶಿಕ್ಷಣ ಸಂಯೋಜಕ ಶಿವಣ್ಣಗೌಡ ಹೇಳಿದರು.
ತಾಲ್ಲೂಕಿನ ಪಿ.ನೇರಲೆಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗದ್ದ ಕೇಂದ್ರ ಸರ್ಕಾರ ಫಿಟ್ ಇಂಡಿಯಾ ಶಾಲಾ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.ಇಂದಿನ ದಿನಗಳಲ್ ಮಕ್ಕಳು ದೈಹಿಕ ಮತ್ತು ಮಾನಸಿಕ ಕ್ರೀಡೆಗಳಲ್ಲಿ ಭಾಗವಹಿಸದೇ ಕೇವಲ ಮೊಬೈಲ್ ಬಳಕೆಗೆ ಅಂಟಿಕೊಂಡಿದ್ದಾರೆ.ಮಕ್ಕಳು ದೈಹಿಕವಾಗಿ ಸದೃಢರಾದಾಗ ಅವರು ಕಲಿಕೆಯಲ್ಲಿಯೂ ಸಹ ಉತ್ತಮ ಸಾಧನೆ ಮಾಡಲು ಸಾಧ್ಯ.ಯಾರ ದೇಹ ಸದೃಢವಾಗಿರುತ್ತದೋ ಅಂತವರ ಮನಸ್ಸು ಸಹ ಸದೃಢವಾಗಿರುತ್ತದೆ.ವಿದ್ಯಾರ್ಥಿಗಳು ,ಶಿಕ್ಷಕರು ಮತ್ತು ಪೋಷಕರು ಸೇರಿದಂತೆ ಪ್ರತಿಯೊಬ್ಬರು ಸಾಂಪ್ರದಾಯಿಕ ಕ್ರೀಡೆಗಳು, ಪ್ರಾದೇಶಿಕ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ವಿವಿಧತೆಯಲ್ಲಿ ಏಕತೆ ಸಾಧಿಸಬೇಕಾಗಿದೆ ಎಂದರು.
ಅಲ್ಲದೇ ಶಾಲೆಯಲ್ಲಿ ಮಕ್ಕಳು ಪ್ರಾರ್ಥನೆ, ಯೋಗ,ಕರಾಟೆ,ಸ್ಕಿಪ್ಪಿಂಗ್,ಕೈದೋಟ ನಿರ್ವಹಣೆ ಸೇರಿದಂತೆ ಹಲವಾರು ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯವನ್ನು ವೃದ್ಧಿಸಿಕೊಂಡರೆ ಮಕ್ಕಳ ಏಕಾಗ್ರತೆಯೂ ಸಹ ಹೆಚ್ಚುತ್ತದೆ.ಜೊತೆಗೆ ಮಕ್ಕಳು ಕಲಿತಂತಹ ಕಲಿಕೆಯು ಸಹ ಬಲಗೊಳ್ಳುತ್ತದೆ ಎಂದರು.
ಫಿಡ್ ಇಂಡಿಯಾ ಶಾಲಾ ಸಪ್ತಾಹದ ಅಂಗವಾಗಿ ಶಾಲೆಯ 61 ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸುಮಾರು ಒಂದು ಗಂಟೆಯ ಕಾಲ ವಿವಿಧ ವ್ಯಾಯಾಮಗಳನ್ನು ಮಾಡುವ ಮೂಲಕ ಸಪ್ತಾಹದಲ್ಲಿ ಭಾಗಿಯಾದರು. ಮುಖ್ಯಶಿಕ್ಷಕ ಶಹಾಬುದ್ದೀನ್ ಡಿ.ಬಣಕಾರ್,ಶಿಕ್ಷಕರಾದ ಸಿ.ವೆಂಕಟೇಶ ರಾವ್,ಉಮಾದೇವಿ ಮತ್ತು ಎ.ಬಿ.ರಮೇಶ್ ಇದ್ದರು.
ಕೇಂದ್ರ ಸರ್ಕಾರದ ಫಿಟ್ ಇಂಡಿಯಾ ಶಾಲಾ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ವಿವಿಧ ವ್ಯಾಯಾಮಗಳನ್ನು ಮಾಡಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…