ಶಹಾಪುರ: ಸಂಘ-ಸಂಸ್ಥೆ, ಟ್ರಸ್ಟ್‌ಗಳು ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೇ ಜನಪರವಾಗಿದ್ದುಕೊಂಡು ಈ ನಾಡಿನ ಕಲೆ, ದೇಸಿ ಸಂಸ್ಕೃತಿ ಉಳಿಸಿ-ಬೆಳೆಸಿಕೊಂಡು ಹೋಗುವ ನಿಟ್ಟಿನಲ್ಲಿ ಕೆಲಸ ಮಾಡುತ್ತಾ ಸದಾ ಜನಪರವಾಗಿರಬೇಕು ಎಂದು ಆಂದೋಲದ ಕರುಣೇಶ್ವರ ಮಠದ ಪೂಜ್ಯರಾದ ಸಿದ್ದಲಿಂಗ ಶ್ರೀಗಳು ಹೇಳಿದರು.
ಗೋಗಿಪೇಟೆ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿರುವ ಶ್ರೀ ರಶ್ಮಿ ಆರುಂಧತಿ ಜನಜಾಗೃತಿ ಟ್ರಸ್ಟ್ ಉದ್ಘಾಟನೆ ಹಾಗೂ ಗ್ರಾಮೀಣ ಜಾನಪದ ಉತ್ಸವ-೨೦೧೯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮದ ಮುಖಂಡರಾದ ಗೊಲ್ಲಾಳಪ್ಪಗೌಡ ಗೋನಾಳ ಮಾತನಾಡಿ ನಶಿಸಿ ಹೋಗುತ್ತಿರುವ ಗ್ರಾಮೀಣ ಸೊಗಡಿನ ಸಂಸ್ಕೃತಿಯನ್ನು ಯುವ ಪೀಳಿಗಗೆ ತಿಳಿಪಡಿಸುವುದು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟು, ತಾವು ಬಾಲ್ಯದಲ್ಲಿ ಹಾಡಿದ ಹಂತಿ ಪದ, ಮೊಹರಂ ಪದ, ಕೋಲಾಟ ಹಲವಾರು ವಿವಿಧ ಮಜಲುಗಳನ್ನು ನೆನಪಿಸಿಕೊಳ್ಳತ್ತಾ ಎಲ್ಲರೆದುರಿಗೆ ಬಿಚ್ಚಿಟ್ಟರು.
ಯುವ ಕಲಾವಿದರಾದ ಮಹೇಶ್ ಪತ್ತಾರ ಅವರಿಂದ ಸುಗಮ ಸಂಗೀತ, ಮುಖರಂಜಾ ವನದುರ್ಗ ಅವರಿಂದ ಜಾನಪದ, ವೀರ ಸಂಗಮ್ಮ ಅಪ್ಪಾಗೋಳ ಅವರಿಂದ ತತ್ವಪದಗಳು, ಸಾಯಬಣ್ಣ ಮಾಸ್ಟರ್ ಗೋಗಿ ಅವರಿಂದ ಶಹನಾಯಿ ವಾದನ, ಸುನೀಲ್ ಶಿರ್ಣಿ ಅವರಿಂದ ಮಿಮಿಕ್ರಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಈ ಸಮಾರಂಭದ ವೇದಿಕೆಯ ಮೇಲೆ ಶ್ರೀ ರಶ್ಮಿ ಅರುಂಧತಿ ಜನಜಾಗೃತಿ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಮಾನಪ್ಪ ಹಡಪದ ಗೋಗಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ವೇದಮೂರ್ತಿ ಶರಣಯ್ಯ ಸ್ವಾಮಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರಿಗೆ ಸನ್ಮಾನಿಸಲಾಯಿತು. ಪ್ರದೀಪ್ ಸ್ವಾಗತಿಸಿದರು, ಹಣಮಂತ ನಿರೂಪಿಸಿದರು, ಚಂದ್ರಕಾಂತ ವಂದಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…