ಯಾದಗಿರಿ: ಸ್ಪರ್ಧಾತ್ಮಕ ಯುಗದಲ್ಲಿ ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ದೈನಂದಿನ ಪಠ್ಯಪುಸ್ತಕಗಳ ಭೋದನೆ ಜೊತೆಗೆ ಶಿಸ್ತು, ಸಮಯ ಪ್ರಜ್ಞೆ ಸಂಗೀತ, ಕಲೆ, ಸಾಹಿತ್ಯ, ಕ್ರೀಡೆ ಹಾಗೂ ಯೋಗ ಇನ್ನಿತರ ವಿಷಯಗಳ ಬಗ್ಗೆ ಅವರಲ್ಲಿ ಆಸಕ್ತಿ ಮೂಡಿಸಿ ಸೂಕ್ತ ಪ್ರೋತ್ಸಾಹ, ಮಾರ್ಗದರ್ಶನ ನೀಡಿ ವೇದಿಕೆ ಕಲ್ಪಿಸಬೇಕು ಅಂದಾಗ ಮಾತ್ರ ವಿದ್ಯಾರ್ಥಿಗಳಲ್ಲಿ ಇರುವ ವಿವಿಧ ಪ್ರತಿಭೆಗಳು ಹೊರಬರಲು ಸಾಧ್ಯ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ ಸೋನವಣೆ ಹೇಳಿದರು.
ಸೋಮವಾರ ನಗರದ ಹೊರವಲಯದಲ್ಲಿರುವ ಆರ್ಯಭಟ್ಟ ಅಕಾಡೆಮಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ೩ನೇ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಾಲೆಯ ಪ್ರತಿಯೊಬ್ಬ ವಿದ್ಯಾರ್ಥಿಯು ಕ್ರೀಡೆಯಲ್ಲಿ ಆಸಕ್ತಿ ಬೆಳೇಸಿಕೊಂಡು ಭಾಗವಹಿಸಬೇಕು ಕ್ರೀಡೆಯಿಂದ ಅವರಲ್ಲಿ ದೈಹಿಕ, ಮಾನಸಿಕ ಆರೋಗ್ಯ ವೃದ್ದಿಯಾಗುತ್ತದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಮೊದಲು ಭಾಗವಹಿಸುವ ಆಸಕ್ತಿ ಬೆಳಸಿಕೊಂಡು ಭಾಗವಹಿಸಬೇಕು, ಕ್ರೀಡೆಯಲ್ಲಿ ಸೋಲು-ಗೆಲುವನ್ನು ಕ್ರೀಡಾ ಮನೋಭಾವದಿಂದ ಸ್ವಿಕರಿಸಬೇಕು ಎಂದು ಕಿವಿಮಾತು ಹೇಳಿದರು.
ಪಾಲಕರು ಸಹ ತಮ್ಮ ಮಕ್ಕಳ ಅಭ್ಯಾಸ ಹಾಗೂ ಚಟುವಟಿಕೆಗಳ ಬಗ್ಗೆ ಗಮನಹರಿಸಬೇಕು ಜೊತೆಗೆ ಸಕಾಲಕ್ಕೆ ಸಲಹೆ ಸೂಚನೆ ನೀಡಬೇಕು ಅಂದಾಗ ಮಾತ್ರ ಅವರು ಒಳ್ಳೆಯ ಮಾರ್ಗದಲ್ಲಿ ಯಶಸ್ವಿ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಯಾವುದೇ ಶಾಲೆಯಲ್ಲಿ ಆಗಲಿ ಮೊದಲು ಉತ್ತಮ ಪರಿಸರ ನಿರ್ಮಾಣವಾಗಬೇಕು ಇದರಿಂದ ವಿದ್ಯಾರ್ಥಿಗಳ ಏಕಾಗ್ರತೆ ವೃದ್ದಿಯಾಗಿ ಸರ್ವೋತಮುಖ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯ ಪಟ್ಟರು. ಪ್ರಸಕ್ತ ದಿನಗಳಲ್ಲಿ ದೇಶದಲ್ಲಿ ಉತ್ತಮ ಕ್ರೀಡಾ ಪಟುಗಳು ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ನಿರಿಕ್ಷೇಗೆ ಮೀರಿ ಸಾಧನೆಮಾಡಿ ಪ್ರಶಸ್ತಿಗಳನ್ನು ಗಳಿಸುವ ಮೂಲಕ ದೇಶದ ಗೌರವ ಹೆಚ್ಚಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿದ ಅಕಾಡೆಮಿಯ ಅಧ್ಯಕ್ಷ ಸುಧಾಕರ ರೆಡ್ಡಿ ಪಾಟೀಲ್ ಮಾತನಾಡಿ ಜಿಲ್ಲಾ ಕೇಂದ್ರದಲ್ಲಿರುವ ನಮ್ಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದರು.
ಬರುವ ಶೈಕ್ಷಣಿಕ ವರ್ಷದಿಂದ ಶಾಲೆಯಲ್ಲಿ ವಿದ್ಯಾರ್ಥಿಗಳು ಇಲ್ಲಿಯೇ ವಾಸಿಸಿ ಅಭ್ಯಾಸ ಮಾಡಲು ಅನುಕೂಲವಾಗಲಿ ಎಂಬ ದೃಷ್ಟಿಯಿಂದ ವಸತಿ ನಿಲಯ ಆರಂಭವಾಗುತ್ತದೆ ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ವೇದಿಕೆ ಮೇಲೆ ವೆಂಕಟರೆಡ್ಡಿ ಮಾಲೀಪಾಟಿಲ್, ಪ್ರಾಶುಪಾಲರಾದ ಅರವಿಂದಾಕ್ಷಣ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಯೋಗಗುರು ಅನೀಲ ಗುರುಜಿಯವರು ವಿದ್ಯಾರ್ಥಿಗಳೊಂದಿಗೆ ಯೋಗದ ಹಲವಾರು ಆಯಾಮಗಳ ಪ್ರದರ್ಶನ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು, ಕ್ರೀಡಾ ಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಸೋನವಣೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ನೀಡಿ ಗೌರವಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…