ಸುರಪುರ: ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ೨೦೨೦ರ ಜನೆವರಿ ೮ ರಂದು ದೇಶದ ಎಲ್ಲಾ ಕಾರ್ಮಿಕ ಸಂಘಟನೆಗಳ ಒಂದಾಗಿ ಭಾರತ ಬಂದ್ ಆಚರಿಸುತ್ತಿವೆ.ಇದರಲ್ಲಿ ಎಲ್ಲರೂ ತಪ್ಪದೆ ಭಾಗವಹಿಸುವಂತೆ ಸಮಿತಿಯ ರಾಜ್ಯ ಉಪಾಧ್ಯಕ್ಷ ಸುರೇಖಾ ಕುಲಕರ್ಣಿ ತಿಳಿಸಿದರು.
ನಗರದ ಕರ್ನಾಟಕ ಬಿ.ಇಡಿ ಕಾಲೇಜಿನಲ್ಲಿ ಕಾರ್ಮಿಕ ಸಂಘಟನೆಗಳ ತಾಲೂಕು ಸಮಿತಿ ಸಮಾವೇಶ ಉದ್ಘಾಟಿಸಿ ಮಾತನಾಡಿ,ನವೆಂಬರ್ ೨೦ ರಂದು ಬೆಂಗಳೂರಲ್ಲಿ ನಡೆದ ರಾಜ್ಯ ಸಮಾವೇಶದಲ್ಲಿ ನಿರ್ಣಯಿಸಿದಂತೆ ರಾಜ್ಯಾದ್ಯಂತ ಎಲ್ಲೆಡೆ ಸಮಾವೇಶಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ.ಅದರಂತೆ ಇಂದು ಸುರಪುರ ತಾಲೂಕು ಸಮಾವೇಶವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಯಲ್ಲಪ್ಪ ಚಿನ್ನಾಕಾರ ಮಾತನಾಡಿ,ದೇಶದಲ್ಲಿ ರೈತ ಕಾರ್ಮಿಕರ ಸ್ಥಿತಿ ತುಂಬಾ ಚಿಂತಾಜನಕವಾಗಿದೆ.ದೇಶದಲ್ಲಿನ ಆರ್ಥಿಕ ಕುಸಿತ, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ,ದೇಶಿಯ ಉತ್ಪಾದನೆಯ ಕುಸಿತ ಇತ್ಯಾದಿಗಳಿಂದ ದೇಶದ ಶ್ರಮಿಕವರ್ಗ ಸಂಕಷ್ಟ ಹೆದರಿಸುವಂತಾಗಿದೆ. ಕೇಂದ್ರ ಸರಕಾರ ಬಡವರ ದೀನ ದಲಿತ ಮತ್ತು ಕಾರ್ಮಿಕರ ಏಳಿಗೆಯನ್ನು ಮರೆತು ಬಂಡವಾಳ ಶಾಹಿಗಳ ಬೆಂಬಲಕ್ಕೆ ನಿಲ್ಲುತ್ತಿದೆ ಇದನ್ನು ಇಂದು ನಾವೆಲ್ಲರು ಖಂಡಿಸದಿದ್ದರೆ ಮುಂದೆ ದೇಶಕ್ಕೆ ಗಂಡಾಂತರ ತಪ್ಪಿದ್ದಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಬಸಮ್ಮ ಆಲ್ಹಾಳ ಮಾತನಾಡಿ,ಜನೆವರಿ ೮ ರಂದು ಕಾರ್ಮಿಕ ಸಂಘಟನೆಗಳ ಕರೆಯ ಮೇರೆಗೆ ನಡೆಯುವ ಭಾರತ ಬಂದ್‌ನಲ್ಲಿ ತಾಲೂಕಿನಿಂದ ಸಾವಿರಾರು ಸಂಖ್ಯೆಯಲ್ಲಿ ನಾವೆಲ್ಲ ಭಾಗವಹಿಸುವ ಮೂಲಕ ಕೇಂದ್ರ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸೋಣ ಹಾಗು ನಮ್ಮ ಹಕ್ಕುಗಳನ್ನು ನಾವು ಪಡೆದುಕೊಳ್ಳೋಣ ಎಂದರು.
ಕಾರ್ಯಕ್ರಮದ ವೇದಿಕೆ ಮೇಲೆ ದಲಿತ ಹೋರಾಟಗಾರರಾದ ಭೀಮರಾಯ ಸಿಂದಗೇರಿ, ಪ್ರಕಾಶ ಆಲ್ಹಾಳ, ಡಿವಾಯ್‌ಎಫ್‌ಐ ಮುಖಂಡ ಹಣಮಂತ್ರಾಯ ದೇವಿಕೇರಾ,ಅಂಗನವಾಡಿ ನೌಕರರ ಹುಣಸಗಿ ತಾಲೂಕು ಅಧ್ಯಕ್ಷ ನಸೀಮಾ ಮುದ್ನೂರು ಇದ್ದರು.ಪರವೀನ್ ಬೇಗಂ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು,ಜಯಶ್ರೀ ವಂದಿಸಿದರು ಕಾರ್ಯಕ್ರಮದಲ್ಲಿ ತಾಲೂಕಿನ ಅಂಗನವಾಡಿ ನೌಕರರು,ಆಶಾ ಕಾರ್ಯಕರ್ತೆಯರು ಸೇರಿದಂತೆ ಅನೇಕರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…