ಬಿಸಿ ಬಿಸಿ ಸುದ್ದಿ

ಶಾಲಾ ಕೋಣೆಗಳು ಜೀವಂತ ದೇವಾಲಯಗಳಿದ್ದಂತೆ: ಸುಭಾಷ್ ಆರ್ ಗುತ್ತೇದಾರ

ಆಳಂದ: ಜಗತ್ತಿನ ಪ್ರತಿ ಶಾಲೆಯ ತರಗತಿಯ ಕೋಣೆಗಳು ಜೀವಂತ ದೇವಾಲಯಗಳಿದ್ದಂತೆ ಅವುಗಳನ್ನು ಅತ್ಯಂತ ಜವಾಬ್ದಾರಿಯಿಂದ, ಗೌರವದಿಂದ ಕಾಪಾಡುಕೊಳ್ಳುವುದು ಸಮಾಜದಲ್ಲಿರುವವರ ಕರ್ತವ್ಯವಾಗಿದೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಅಭಿಪ್ರಾಯಪಟ್ಟರು.

ಇತ್ತೀಚಿಗೆ ಆಳಂದ ತಾಲೂಕಿನ ಹಡಲಗಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ೨೦೧೯-೨೦ ಸಾಲಿನ ಸಾಮಾಜಿಕ ವಲಯದ ಸಾಮಾನ್ಯ ಅನುದಾನದಲ್ಲಿ ೨೦ ಲಕ್ಷ ರೂ ವೆಚ್ಚದ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ೨ ಕೋಣೆಗಳ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ ನೇರವೇರಿಸಿ ಮಾತನಾಡಿದರು.

ದೇಶದ ಭವಿಷ್ಯವು ತರಗತಿಯ ಕೋಣೆಗಳಲ್ಲಿ ಅಡಕವಾಗಿದೆ ಅದಕ್ಕಾಗಿ ಶಿಕ್ಷಕರು ತಮ್ಮ ಸಾಮರ್ಥ್ಯವನ್ನು ಧಾರೆಯೆರೆದು ಮಕ್ಕಳಲ್ಲಿನ ಜ್ಷಾನವನ್ನು ಜಗತ್ತಿಗೆ ಪರಿಚಯಿಸಬೇಕು ಈ ನಿಟ್ಟಿನಲ್ಲಿ ಸರ್ಕಾರವು ಶಾಲೆಗಳ ಮೂಲ ಸೌಕರ್ಯಕ್ಕಾಗಿ ಹೆಚ್ಚಿನ ಅನುದಾನ ಒದಗಿಸುತ್ತಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರಪ್ಪ ನೇಡರಗಿ ಪ್ರಾಸ್ತಾವಿಕ ಮಾತನಾಡಿ, ಶಾಸಕರ ಪರಿಶ್ರಮದಿಂದ ತಾಲೂಕಿನಲ್ಲಿ ಹೆಚ್ಚು ಶಾಲಾ ಕೋಣೆಗಳು ಮಂಜೂರಾಗಿವೆ. ಶಿಕ್ಷಕರ ಕೊರತೆ ನಿಗಿಸುವಲ್ಲಿಯೂ ಅವರು ಶ್ರಮಿಸುತ್ತಿದ್ದಾರೆ ಅದಕ್ಕಾಗಿ ಸರ್ಕಾರದ ಮೇಲೆ ಒತ್ತಡ ತಂದು ೨೦೦ ಜನ ಅತಿಥಿ ಶಿಕ್ಷಕರು ನೇಮಕವಾಗುವಂತೆ ಮಾಡಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲೆಗೆ ಜಮೀನು ನೀಡಿದ ಭೂದಾನಿ ಸಿದ್ದಾರಾಮ ಭೈರಾಮಡಗಿ, ತಾ.ಪಂ ಸದಸ್ಯ ಸಾತಲಿಂಗಯ್ಯ ಮಠಪತಿ, ಸತೀಶ್ ಕುಲಕರ್ಣಿ, ಶ್ರಾವಣಕುಮಾರ ತಮ್ಮನ, ಚಂದ್ರಕಾಂತ ಅತನೂರ, ಶಿವಾನಂದ ಜೋಗನ, ಯಲ್ಲಾಲಿಂಗ ಕಲಾಲ, ಚಂದ್ರಕಾಂತ ಸಾಣಕ, ಮಲ್ಲಿನಾಥ ಹಳ್ಳೆ ಅಧ್ಯಕ್ಷತೆ ವಹಿಸಿದ್ದರೆ, ಸಾನಿಧ್ಯವನ್ನು ಶಾಂತೇಶ್ವರ ಮಠದ ಶಾಂತಬಸವ ಶಿವಾಚಾರ್ಯರು ವಹಿಸಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

7 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

7 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago