ಕಲಬುರಗಿ: ಅಫಜಲಪೂರ ತಾಲ್ಲೂಕಿನ ದೇವಲ ಗಾಣಗಾಪೂರ ಹೇರೂರ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಕಳೆದ 2018-19 ಸಾಲಿನ ಮಾರ್ಚ್ ತಿಂಗಳಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ.
ಹೇರೂರ ಪ್ರೌಢ ಶಾಲೆಗೆ ಶೇ. 94.28ಫಲಿತಾಂಶ ದೊರೆತಿದೆ. ಪರೀಕ್ಷೆ ಬರೆದ ಒಟ್ಟು 35 ವಿದ್ಯಾರ್ಥಿಗಳಲ್ಲಿ 4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 26 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 3 ವಿದ್ಯಾರ್ಥಿಗಳು ದ್ವೀತಿಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಪ್ರತಿಭಾವಂತ ವಿದ್ಯಾರ್ಥಿನಿ ನಿಸರ್ಗ (ಶೇ.90), ಜ್ಯೋತಿ (ಶೇ.87.64), ಅಭಿಲಾಷ (ಶೇ. 85), ಯೂಸೂಬ್ (ಶೇ. 84), ಮೆಹರ್ : ಶೇ. (ಶೇ. 82.47) ಐವರು ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಜಿಲ್ಲೆಯ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ವಿಧ್ಯಾರ್ಥಿಗಳ ಅಮೋಘಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಭಗವಂತಪ್ಪಾ ಹೇರೂರ, ಕಾರ್ಯದರ್ಶಿಗಳಾದ ಲಕ್ಷ್ಮಣ ಹೇರೂರ, ಮುಖ್ಯ ಗುರುಗಳಾದ ರಾಜಶೇಖರ ತಲಾರಿ, ಹಾಗೂ ಶಿಕ್ಷಕ ವೃಂದದವರು ಹರ್ಷ ವ್ಯಕ್ತಪಡಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…