ಕಲಬುರಗಿ: ಇಂದು ಮುಂಜಾನೆ ನಗರದ ಶರಣಬಸವೇಶ್ವರ ವಿಶ್ವವಿದ್ಯಾಲಯದ ಆವರಣದಲ್ಲಿ ಬ್ರೇಕ್ ಥ್ರೂ ಸೈನ್ಸ್ ಸೊಸೈಟಿ ( BSS) ಜಿಲ್ಲಾ ಘಟಕದ ವತಿಯಿಂದ ಕಂಕಣ ಸೂರ್ಯಗ್ರಹಣ ವೀಕ್ಷಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಗುಲಬರ್ಗಾ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನದ ವಿಭಾಗದ ಮುಖ್ಯಸ್ಥ ರಾದ ಡಾ.ರಮೇಶ ಲಂಡನಕರ್ ರವರು ಆಗಮಿಸಿ ಮಾತಾನಾಡಿ “ಗ್ರಹಣದ ಕುರಿತು ಜನರು ವೈಜ್ಞಾನಿಕವಾಗಿ ಮನೋಭಾವ ಬೆಳೆಸಿಕೊಳ್ಳಬೇಕು .ಯಾವದೇ ಗ್ರಹಣ ಸಂಭವಿಸಿದ್ದರೂ ಅದು ಸಹಜ ಕ್ರೀಯೆ.ಜನ ಮೂಢನಂಬಿಕೆಗಳಿಂದ ಹೊರ ಬರಬೇಕು “ಎಂದು ಕರೆ ನೀಡಿದ್ದರು.
ಎಸ್.ಬಿ.ಸೈನ್ಸ್ ಪಿಯು ಕಾಲೇಜಿನ ಪ್ರಾಚಾರ್ಯರಾದ ಎನ್.ಎಸ್.ದೇವರಕಲ್ ಹಾಗೂ ಸೊಸೈಟಿ ಸಂಚಾಲಕಿ ಅಭಯಾ ದಿವಾಕರ್ ಮಾತಾನಾಡಿದ್ದರು.
ಈ ಸಂದರ್ಭದಲ್ಲಿ ಶರಣಬಸವ ವಿ.ವಿ.ದ ಪ್ರಾಧ್ಯಾಪಕರಾದ ಡಾ.ನಾನಾಸಾಹೇಬ್ ಹಚ್ಚಡದ, ಸೈಬಣ್ಣಾ ಗುಡಬಾ ಇದ್ದರು. BSS ನ ಪ್ರಮುಖರಾದ ಹರೀಶ ಸಂಗಾಣಿ, ರಶ್ಮಿ ರಾಜೇ, ಶಕುಂತಲಾ ಪಾಟೀಲ, ಪ್ರವೀಣ ಲಂಡನಕರ್ ಸೇರಿದಂತೆ ಕಾಲೇಜಿನ ನೂರಾರು ವಿದ್ಯಾರ್ಥಿ- ವಿದ್ಯಾರ್ಥಿನಿಯರು ಭಾಗವಹಿಸಿ ಗ್ರಹಣ ಗೋಚರಿಸಿದ್ದನ್ನು ವೀಕ್ಷಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…