ಕಲಬುರಗಿ: ವಿವಾದಾಸ್ಪದ ಪೌರತ್ವ ಕಾಯ್ದೆ ಮತ್ತು ಪೊಲೀಸ್ ಆಯುಕ್ತ ಹರ್ಷಾ ಅಮಾನತು ಹಾಗೂ ಮಂಗಳೂರು ಘಟನೆ ನ್ಯಾಯಾಂಗ ತನಿಗೆ ಆಗ್ರಹಿಸಿ ವಿವಿಧ ಮಹಿಳಾ ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಿತು.
ಅಖಿಲ ಭಾರತೀಯ ಜನವಾಧಿ ಮಹಿಳಾ ಸಂಘಟನೆ ಮತ್ತು ವಿವಿಧ ಮಹಿಳಾ ಸಂಘಟನೆಯ ನೇತೃತ್ವದಲ್ಲಿ ನಗರದ ನ್ಯಾಷನಲ್ ಕಾಲೇಜದುಂದ ಜಗತ್ ಸರ್ಕಲ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ ಪೌರತ್ವ ಕಾಯ್ದೆ ವಿರುದ್ಧ ಆಕ್ರೋಶ ವ್ಯಕ್ತಪಡಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಸಾಹಿತಿ ಕೆ. ನೀಲಾ, ರಾಬಿಯಾ ಬೇಗಂ, ನೂರಾರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಮಹಿಳೆಯರು ಮತ್ತು ಮಾಹಿಳಾ ಹಿರಿಯ ನಾಗರಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದರು.
ಪೌರತ್ವ ಕಾಯ್ದೆ ಮೂಲಕ ಬಿಜೆಪಿ ಮೋದಿ ಮತ್ತು ಅಮಿತ್ ಶಾ ಸರಕಾರ ಒಡೆದು ಆಳುವ ನೀತಿ ಅನುಸರಿಸುತಿದ್ದಾರೆ, ಪೌರತ್ವ ಕಾಯ್ದೆ ಸಂವಿಧಾನದ ವಿರುದ್ಧವಾಗಿದ್ದು, ಇದನ್ನು ಪ್ರತಿಯೊಬ್ಬ ಭಾರತೀಯ ನಾಗರಿಕರು ಖಂಡಿಸಿದೆ,ಸರಕಾರ ಕೊಡಲೆ ಪೌರತ್ವ ಕಾಯ್ದೆ ಮತ್ತು ಎನ್.ಆರ್.ಸಿ ರದ್ದು ಪಡೆಸುವವರೆಗೆ ನಮ್ಮ ಹೋರಾಟ ಇದೇ ರೀತಿ ಮುಂದುವರೆಯುತದೆ. – ಕೆ. ನೀಲಾ, ಸಾಹಿತಿ ಮತ್ತು ಮಹಿಳಾ ಹೋರಾಟಗಾರ್ತಿ
ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಮಹಾಪೌರರಾದ ಆಲಿಯಾ ಶೀರಿನ್, ವಿದ್ಯಾರ್ಥಿಗಳು ಮತ್ತು ಮಹಿಳಾ ಹೋರಾಟಗಾರರು ಇದ್ದರು.
ಮಹಿಳೆಯರಿಗೆ ಮುಸ್ಲಿಂ ಮುಖಂಡರಿಂದ ಸರ್ವಗಾಲು ನೀಡಿ ಪ್ರತಿಭಟನೆಗೆ ಅವಕಾಶ ಕಲ್ಪಿಸಿ, ಪ್ರತಿಭಟನೆಯ ನಂತರ ನಾಗರಿಕರು ಕಲಬುರಗಿ ಮಹಿಳೆಯರಿಗೆ ಜೈ ಕಾರ ಹಾಕುವ ಮೂಲಕ ಪ್ರತಿಭಟನೆಯಲ್ಲಿ ಭಾಗವಹಿಸಿದ ಮಹಿಳಿಯೆರಿಗೆ ಮತ್ತು ಕಲಬುರಗಿ ಪೊಲೀಸರಿಗೆ ಕೃತಜ್ಞತೆ ಸಲ್ಲಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…