ಸುರಪುರ: ರಾಷ್ಟ್ರೀಯ ರೈತ ವಿಕಾಸ ಯೋಜನೆಯಡಿ ೨೦೧೯-೨೦ನೇ ಸಾಲಿನ ತಾಡಪಾಲ ವಿತರಣೆಗೆ ಸುರಪುರ ಹೋಬಳಿ ವ್ಯಾಪ್ತಿಯ ಅರ್ಹ ರೈತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ಜನವರಿ ೪ ಕೊನೆಯ ದಿನವಾಗಿದ್ದು ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಹೆಚ್ಚು ಅರ್ಜಿ ಬಂದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಿ ತಾಡಪಾಲ ವಿತರಿಸಲಾಗುವುದು.
ಆಸಕ್ತ ರೈತರು ಅರ್ಜಿಯೊಂದಿಗೆ ಆಧಾರ್, ಪಹಣಿ, ಬ್ಯಾಂಕ್ ಪಾಸ್‌ಬುಕ್ ನೀಡಬೇಕು. ಎಸ್‌ಸಿ, ಎಸ್‌ಟಿ ವರ್ಗದವರು ಭಾವಚಿತ್ರ ಮತ್ತು ಜಾತಿ ಪ್ರಮಾಣ ಪತ್ರ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ನೊಂದಣಿ ಮಾಡಿಕೊಳ್ಳಬೇಕು ಎಂದು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಡಾ. ಭೀಮರಾಯ ಹವಾಲ್ದಾರ್ ತಿಳಿಸಿದ್ದಾರೆ.
—