ಬಿಸಿ ಬಿಸಿ ಸುದ್ದಿ

ವಿಶ್ವವಿದ್ಯಾಲಯ ಪರೀಕ್ಷೆಯಲ್ಲಿ ಅಕ್ರಮ ಅವ್ಯವಹಾರ ಆರೋಪ: ತನಿಖೆಗೆ ಕೆ.ವಿ.ಎಸ್ ಆಗ್ರಹ

ಕಲಬುರಗಿ: 2019 ನೇ ಶೈಕ್ಷಣಿಕ ಸಾಲಿನ ಗುಲಬರ್ಗಾ ವಿಶ್ವವಿದ್ಯಾಲದವ್ಯಾಪ್ತಿಯ ಪದವಿ  ಕಾಲೇಜುಗಳ ಬಿ.ಎ. ಬಿ.ಕಾಂ ಮತ್ತು ಬಿ.ಎಸ್ಸಿ  ಪ್ರಥಮ, ತೃತೀಯ ಹಾಗೂ ಐದನೇ  ಸೆಮೆಸ್ಟರ್ ಪರೀಕ್ಷೆಗಳಲ್ಲಿ ನಡೆದ  ಅಕ್ರಮಗಳನ್ನು ನ್ಯಾಯಂಗ ತನಿಖೆಗೆ  ಒಪ್ಪಿಸ ಬೇಕೆಂದು ಮಾನ್ಯ ಉನ್ನತ ಶಿಕ್ಷಣ ಸಚಿವರನ್ನು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಸಂಚಾಲಕರು ರಾಜೇಂದ್ರ ರಾಜವಾಳ ಆಗ್ರಹಿಸಿದ್ದಾರೆ.

ಪದವಿ ಪರೀಕ್ಷೆಗಳನ್ನು ಯುಜಿಸಿ  ನಿಯಾಮವಳಿಗಳ ಪ್ರಕಾರ ನಡೆಸದೇ  ಹಾಗೂ ವಿಶ್ವವಿದ್ಯಾಲಯದ ಪರೀಕ್ಷಾ  ಮಾರ್ಗದರ್ಶಿ ಸೂತ್ರಗಳನ್ನು ಉಲ್ಲಂಘಿಸುವುದರ ಮೂಲಕ ಪರೀಕ್ಷೆಗಳಲ್ಲಿ ವ್ಯಾಪಕ ಭ್ರಷ್ಟಚಾರ  ನಡೆಸಲಾಗಿದೆ ಪದವಿ ಪರೀಕ್ಷೆಗಳು  ಮುಕ್ತ ಹಾಗೂ ಪಾರದರ್ಶಕವಾಗಿ  ನಡೆಸದೆ ಮನಸಿಗೆ ಬಂದಂತೆ ಅಂದರೆ  ಯುಜಿಸಿ ನಿಯಮಗಳನ್ನು ಗಾಳಿಗೆ ತೂರಿ  ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ  ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ತಮ್ಮಕಾಲೇಜಿನ ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಪರೀಕ್ಷಾ ಬರೆಯುವುದಕ್ಕೆ ಅವಕಾಶ ಡಿಕೊಟ್ಟಿರುವುದು ಶಿಕ್ಷಣ ವಿರೋಧಿಯಾಗಿದ್ದು,  ಪದವಿ ಪರೀಕ್ಷೆಗಳಲ್ಲಿ ವ್ಯಾಪಕವಾಗಿ ಅಕ್ರಮ ನಡೆಸಿ ಮತ್ತು ಅವ್ಯವಹಾರ ಮಾಡುವುದಕ್ಕೆ ಅವಕಾಶ ಕಲ್ಪಿಸಿಕೊಡುವುದರ ಮೂಲಕ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಪ್ರಮಾಣಿಕ ಶ್ರಮಕ್ಕೆ ಅವಮಾನ ಅಷ್ಟೇ ಅಲ್ಲ ಅನ್ಯಾಯವಾಗಿದೆ ಎಂದು ತಿಳಿಸಿದರು.

ಪರೀಕ್ಷಾ ಅಕ್ರಮಗಳಲ್ಲಿ ತೊಡಗಿದ ವ್ಯಕ್ತಿ ಹಾಗೂ  ಸಂಸ್ಥೆಗಳನ್ನು ಶಾಶ್ವತವಾಗಿ ಕಪ್ಪು ಪಟ್ಟಿಗೆ ಸೇರಿಸಬೇಕು ಪದವಿ ಪರೀಕ್ಷೆಗಳನ್ನು ನ್ಯಾಯಸಮ್ಮತವಾಗಿ ಹಾಗೂಪಾರದರ್ಶಕವಾಗಿ ನಡೆಸದ ಗುಲಬರ್ಗಾ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರ ಅವರ ವಿರುದ್ದ  ಮಾನ್ಯ ಉನ್ನತ ಶಿಕ್ಷಣ ಸಚಿವರು ಕ್ರಮ ಕೈಗೊಳ್ಳಬೇಕು ಜೊತೆಗೆ ಪದವಿ ಪರೀಕ್ಷಾ ಅವ್ಯವಹಾರಗಳನ್ನು ನ್ಯಾಯಂಗ ತನಿಕೆ ನಡೆಸಿ ಎಂದು ಉನ್ನತ ಶಿಕ್ಷಣ ಸಚಿವಗೆ ಪತ್ರಿ ಮವನಿ ಮಾಡಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago