ಜೇವರ್ಗಿ: ಇಲ್ಲಿನ ಬಸವ ಕೇಂದ್ರದ ವತಿಯಿಂದ ಜನವರಿ ೧, ೨೦೨೦ರಂದು ಸಂಜೆ ೭ ಗಂಟೆಗೆ ಪಟ್ಟಣದ ಸರ್ಕಾರಿ ಕನ್ಯಾ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶರಣ ಸಂಗಮ ಕಾರ್ಯಕ್ರಮ ನಡೆಯಲಿದೆ ಎಂದು ಬಸವ ಕೇಂದ್ರದ ಅಧ್ಯಕ್ಷ ಶರಣಬಸವ ಕಲ್ಲಾ ತಿಳಿಸಿದ್ದಾರೆ.
ಬಸವಾದಿ ಶಿವಶರಣರ ಧರ್ಮಗ್ರಂಥ ವಚನ ಸಾಹಿತ್ಯದ ಸಾನ್ನಿಧ್ಯದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಪತ್ರಕರ್ತ -ಸಾಹಿತಿ ಶಿವರಂಜನ್ ಸತ್ಯಂಪೇಟೆ ಅವರು ” ಬಸವ ಪ್ರಜ್ಞೆ ” ವಿಷಯ ಕುರಿತು ವಿಶೇಷ ಉಪನ್ಯಾಸ ನೀಡುವರು. ಜೇವರ್ಗಿ ತಹಸೀಲ್ದಾರ ಸಿದ್ಧರಾಯ ಭೋಸಗಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸುನಿಲ್ ಕುಮಾರ ಜವಳಗಿ, ಉದ್ದಿಮೆದಾರ ಬಸವರಾಜ ಸಾಸಬಾಳ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ನೀಲಮ್ಮನ ಬಳಗದವರು ವಚನ ಪ್ರಾರ್ಥನೆ ಮಾಡಲಿದ್ದಾರೆ. ಚೆನ್ನೂರ ನಾನಾಗೌಡ ಅಪ್ಪಾಸಾಹೇಬಗೌಡ ಪಾಟೀಲ ಕಾರ್ಯಕ್ರಮದ ದಾಸೋಹಿಗಳಾಗಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…