ಬಿಸಿ ಬಿಸಿ ಸುದ್ದಿ

3ನೇ ಕಲ್ಯಾಣ ಕರ್ನಾಟಕ ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಹಿರಿಯ ಕವಯತ್ರಿ ಡಾ. ಚಂದ್ರಕಲಾ ಬಿದರಿ ಆಯ್ಕೆ

ಕಲಬುರಗಿ: ಶ್ರೀ ಚನ್ನಕೇಶ್ವರ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ ಸಂಚಾಲಿತ ಶ್ರೀ ಕೇಶವ ಸೆಂಟ್ರಲ್ ಸ್ಕೂಲ್ ಮೇದಕ ಇವರ ವತಿಯಿಂದ ಆಯೋಜಿಸುವ ಶ್ರೀ ಚನ್ನಕೇಶ್ವರ ಉತ್ಸವ-೨೦೧೯ ರ ನಿಮಿತ್ತ ಏರ್ಪಡಿಸುವ 3ನೇ ಕಲ್ಯಾಣ ಕರ್ನಾಟಕ ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸೇಡಂನ ಹಿರಿಯ ಕವಯತ್ರಿ  ಡಾ. ಚಂದ್ರಕಲಾ ಬಿದರಿ ಸರ್ವಾನುಮತದಿಂದ ಟ್ರಸ್ಟಿನ ಪದಾಧಿಕಾರಿಗಳು ಮತ್ತು ಸಂಸ್ಥೆಯ ಸಂಸ್ಥಾಪಕರು ಮತ್ತು ಮಾರ್ಗದರ್ಶಕರಾದ ಕೆ.ಮೊಗುಲಪ್ಪ ಯಾನಾಗುಂದಿ ಇವರ ಸಮ್ಮುಖದಲ್ಲಿ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಗೌರವಾಧ್ಯಕ್ಷರಾದ ಭೀಮಶಪ್ಪ ಪೂಜಾರಿ ತಿಳಿಸಿದ್ದಾರೆ.

೩ನೇ ಕಲ್ಯಾಣ ಕರ್ನಾಟಕ ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಕ್ಷರಧಾಮ ಮೇದಕನಲ್ಲಿ ಪ್ರತಿ ವರ್ಷದಂತೆ ಸಮ್ಮೇಳವನ್ನು ಈ ವರ್ಷವೂ ಸಹಿತ ಫೆಬ್ರವರಿ ೧ರಂದು  ಮಾಡಲು ಸಭೆಯಲ್ಲಿ ನಿರ್ಣಯಿಸಲಾಯಿತು. ಸಮ್ಮೇಳನದ ಪೂರ್ವ ಸಿದ್ದತೆಗಳ ಕುರಿತು ಈಗಾಗಲೆ ಹವಾರು ಸುತ್ತಿನ ಸಭೆಗಳನ್ನು ಮಾಡಿ ಸಮ್ಮೇಳನಕ್ಕೆ ಬೇಕಾಗುವ ಎಲ್ಲಾ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷೃರು ಮತ್ತು ಜಿಲ್ಲಾ ಪಂಚಾಯತಿ ಸದಸ್ಯರಾದ ದಾಮೋಧರ ರೆಡ್ಡಿ ಪಾಟೀಲ್, ಮೇದಕ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಬನ್ನಮ್ಮ ಭೀಮಶಪ್ಪ ನಾಯಿಕಿನ್, ಯುವ ಮುಖಂಡರಾದ  ಸುಭಾಶ ಸಜ್ಜನ್ ಮತ್ತು ಚನ್ನಪ್ಪ ದೊಬ್ಬಲಿ ಪತ್ರಕರ್ತರಾದ ಚನ್ನಕೇಶವುಲು ಗೌಡ್ , ಶ್ರೀ ಕೇಶವ ಸೆಂಟ್ರಲ್ ಸ್ಕೂಲ್‌ನ ಮುಖ್ಯ ಶಿಕ್ಷಕರಾದ ಮಲ್ಲಪ್ಪ ಪೂಜಾರಿ ಸಮ್ಮೇಳನ ಉಸ್ತುವರಿ ನರಸಪ್ಪ ಅನ್ನಸಾರಮ್ ಹಾಗೂ ಮಹಾದೇವ ಅಲ್ಲೂರ್ ಮತ್ತು ಹಲವಾರು ಜನ ಶಿಕ್ಷಕ ವೃಂದದವರು ಸಭೆಯಲ್ಲಿ ಉಪಸ್ಥಿತರಿದ್ದರು.

emedialine

View Comments

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

13 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

15 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

22 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

22 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

23 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago