ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯ ಶರದ್ ರಾಂಪೂರೆ ಅವರು ಶುಕ್ರವಾರ ಸಂಜೆ ೪ ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು. ನಗರದ ಬಸವೇಶ್ವರ್ ಆಸ್ಪತ್ರೆಯಲ್ಲಿ ಅವರು ಅಸುನೀಗಿದರು.
ದಿ. ಶರದ್ ರಾಂಪೂರೆ ಅವರು ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಮಹಾದೇವಪ್ಪ ರಾಂಪೂರೆ ಅವರ ಪುತ್ರ. ಶರದ್ ರಾಂಪೂರೆ ಅವರು ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾಗಿ ಎರಡು ಬಾರಿ ಕಾರ್ಯನಿರ್ವಹಿಸಿದ್ದರು. ಒಮ್ಮೆ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ ಪರಾಭವಗೊಂಡಿದ್ದರು. ನಂತರ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾಗಿ ಆಯ್ಕೆಯಾಗಿದ್ದರು. ಶರದ್ ರಾಂಪೂರೆ ಅವರು ಶಿಕ್ಷಣ ಪ್ರೇಮಿಯಾಗಿದ್ದರು. ಅಲ್ಲದೇ ಕ್ರಿಕೆಟ್ನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದರು.
ಶರದ್ ರಾಂಪೂರೆ ಅವರ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಗುಲಬರ್ಗಾ ವಿಶ್ವವಿದ್ಯಾಲಯವು ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು. ಶರದ್ ರಾಂಪೂರೆ ಅವರ ನಿಧನಕ್ಕೆ ಹಲವಾರು ಜನರು ಶೋಕ ವ್ಯಕ್ತಪಡಿಸಿದ್ದಾರೆ.