ಕಲಬುರಗಿ: ನಗರದ ಕಲಾ ಮಂಡಳದಲ್ಲಿ ಇಂದು ಸಂಜೆ ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕ ಉದ್ಘಾಟನೆ ಹಾಗೂ ಡಾ. ಚಿ.ಸಿ. ನಿಂಗಣ್ಣ ಅವರ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಜರುಗಿತು.
ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಉದ್ಘಾಟಿಸಿ ಮಾತನಾಡಿ, ಮಾನವೀಯ ಮೌಲ್ಯಗಳ ವೃದ್ಧಿಗೆ ಸಾಹಿತ್ಯ ಕೃತಿಗಳು ಅವಶ್ಯ ಎಂದು ತಿಳಿಸಿದರು.
ಜಿಪಂ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ ಪುಸ್ತಕಗಳ ಲೋಕಾರ್ಪಣೆಗೊಳಿಸಿದರು. ವೈಚಾರಿಕತೆ ಮತ್ತು ಸಾಹಿತ್ಯ ಕುರಿತು ಡಾ. ಗವಿಸಿದ್ದಪ್ಪ ಪಾಟೀಲ ಮಾತನಾಡಿದರು. ಕಡೆಗೀಲು ಬಂಡಿಗಾಧಾರ ಕೃತಿ ಕುರಿತು ಶಿವರಂಜನ್ ಸತ್ಯಂಪೇಟೆ ಮಾತನಾಡಿದರು.
ಹಿರಿಯ ಸಾಹಿತಿ ಡಾ. ಸ್ವಾಮಿರಾವ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಹಣಮಂತ ಯಳಸಂಗಿ, ಹಿರಿಯ ಪತ್ರಕರ್ತ ಶಂಕರ ಕೋಡ್ಲಾ ಮುಖ್ಯ ಅತಿಥಿಗಳಾಗಿದ್ದರು.
ಡಾ. ಚಿ.ಸಿ. ನಿಂಗಣ್ಣ, ಕಜಾಪ ತಾಲ್ಲೂಕು ಅಧ್ಯಕ್ಷ ಬಿ.ಎಸ್. ಮಾಲಿಪಾಟೀಲ, ಪ. ಮಾನು ಸಗರ ಉಪಸ್ಥಿತರಿದ್ದರು. ಜಿ.ಜಿ. ವಣಕ್ಯಾಳ ನಿರೂಪಿಸಿದರು.